ಮನೆಮನೆ ಸರ್ವೇ ಕಾರ್ಯ ತ್ವರಿತಗೊಳಿಸಿ
Team Udayavani, Apr 10, 2022, 2:59 PM IST
ಗುರುಮಠಕಲ್: ಚುನಾವಣೆ ಶಾಖೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆ, ಯುವ ಮತದಾರರ ನೋಂದಣಿಗಾಗಿ ಮನೆ ಮನೆ ಸರ್ವೇ ಕಾರ್ಯ ತ್ವರಿತಗತಿಯಲ್ಲಿ ನಿರ್ವಹಿಸಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಬೂದೂರು ಗ್ರಾಮ ಮತ್ತು ಪಟ್ಟಣದಲ್ಲಿ ಕಂದೂರು ಓಣಿ, ಮಜ್ಜಿಗೇರಿ, ಕಟೇಲಗೇರಿ ಓಣಿಗಳಿಗೆ ಖುದ್ದಾಗಿ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಪರಿಶೀಲಿಸಿ ಅವರು ಮಾತನಾಡಿದರು.
ಕೆಳಹಂತದಲ್ಲಿ ಬಿಎಲ್‌ಒ, ಬಿಎಲ್‌ಒ ಮೇಲ್ವಿಚಾರಕರು, ಚುನಾವಣಾ ಶಾಖೆ ಸಿಬ್ಬಂದಿಯವರು ಬಿಎಲ್‌ಒ ತಮ್ಮ ಮತಗಟ್ಟೆಗೆ ಸಂಬಂಧಿಸಿದಂತೆ ಯಾವುದೇ ಅರ್ಜಿ ಸಲ್ಲಿಸದೆ ಇದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಜನನ ಪ್ರಮಾಣಪತ್ರ, ಹೆಸರು ನೋಂದಣಿ, ವಯಸ್ಸಿನ ದೃಢೀಕರಣ, ಪಡಿತರ ಚೀಟಿಗಳನ್ನು ಪರಿಶೀಲಿಸಿ 18 ವರ್ಷ ಮೇಲ್ಪಟ್ಟವರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದರು.
ಗುರುಮಠಕಲ್ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳಿವೆ. ಇದರಲ್ಲಿ ಯಾದಗಿರಿ ತಾಲೂಕಿಗೆ 141 ಮತಗಟ್ಟೆಗಳು ಒಳಪಟ್ಟಿವೆ. ಗುರುಮಠಕಲ್ ತಾಲೂಕಿನಲ್ಲಿ 143 ಮತಗಟ್ಟೆಗಳಿವೆ. ಗುರುಮಠಕಲ್ ತಾಲೂಕಿನಲ್ಲಿ 70 ಗ್ರಾಮಗಳು, 2 ಹೋಬಳಿಗಳು, 4 ಜಿಲ್ಲಾ ಪಂಚಾಯಿತಿ, 10 ತಾಪಂ ಮತ್ತು 18 ಗ್ರಾಪಂಗಳಿದ್ದು, ತಾಲೂಕಿನಲ್ಲಿ 65,686 ಗಂಡು, 66,692 ಹೆಣ್ಣು, ಎರಡು ಇತರೆ ಸೇರಿದಂತೆ ಒಟ್ಟು 1,32,380 ಮತದಾರರ ಸಂಖ್ಯೆ ಇರುವುದೆಂದು ಅಧಿಕಾರಿಗಳು ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್, ಗುರುಮಠಕಲ್ ತಹಶೀಲ್ದಾರ್ ಶರಣಬಸವ, ಚುನಾವಣೆ ತಹಶೀಲ್ದಾರ್ ಸಂತೋಷರಾಣಿ, ಗ್ರೇಡ್- 2 ತಹಶೀಲ್ದಾರ್ ನರಸಿಂಹಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.