ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್.ರೇಖಾ
Team Udayavani, Jun 7, 2024, 5:23 PM IST
ಉದಯವಾಣಿ ಸಮಾಚಾರ
ಯಾದಗಿರಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯದ ಎಲ್ಲ ನ್ಯಾಯಾಲಯದ ಆವರಣಗಳಲ್ಲಿ
2024ರ, ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್.ರೇಖಾ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಂಡು ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದರು.
ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ
ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮು, ಜಿಲ್ಲಾ ಗ್ರಾಹಕರ ವೇದಿಕೆಯ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧೀಕರಣ, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಹೇಳಿದರು.
ಮೋಟಾರ್ ಅಪಘಾತ ಪರಿಹಾರ ನ್ಯಾಯಾಧಿಧೀಕರಣ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ, ಭೂಸ್ವಾಧೀನ,
ವೇತನ ಮತ್ತು ಭತ್ಯೆಗೆ ಸಂಬಂಧಿಸಿದ ಸೇವಾ ಹಾಗೂ ಪಿಂಚಣಿ, ಸಾರ್ವಜನಿಕ ಉಪಯಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ, ವೈವಾಹಿಕ, ಕುಟುಂಬ ನ್ಯಾಯಾಲಯ ಪ್ರಕರಣ (ವಿಚ್ಛೇದನೆಯನ್ನು ಹೊರತುಪಡಿಸಿ) ಇತ್ಯರ್ಥಪಡಿಸಿಕೊಳ್ಳ ಬಹುದಾಗಿದೆ ಎಂದರು.
ಉಭಯ ಪಕ್ಷಕಾರರ ಇಬ್ಬರ ಹಿತದೃಷ್ಟಿಯಿಂದ ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ನ್ಯಾಯಾಲಯದಲ್ಲಿ
ದಾಖಲಾಗದೇ ಇರುವ ಪ್ರಕರಣ ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಲು ಅವಕಾಶ ಇದೆ. ಸಂಧಾನದ ಮೂಲಕ ಪ್ರಕರಣ
ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಮರುಪಾವತಿಸಲಾಗುವುದು ಎಂದು ಹೇಳಿದರು.
988 ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ಗೆ ವಹಿಸಲಾಗಿದೆ. ಒಟ್ಟು 18,885 ಪ್ರಕರಣಗಳು ಜಿಲ್ಲೆಯ ಬಾಕಿ ಉಳಿದಿದೆ ಎಂದು ತಿಳಿಸಿದರು. ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶ ಮರೆಪ್ಪ, ಯಾದಗಿರಿ ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಸಿ.ಎಸ್.
ಮಾಲಿಪಾಟೀಲ್ ಉಪಸ್ಥಿತರಿದ್ದರು.
ಅದಾಲತ್ ಕುರಿತ ಮಾಹಿತಿ ಅದಾಲತ್‌ನಲ್ಲಿ ನಡೆಯುವ ಪ್ರಕರಣಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರ, ಟೋಲ್ ಫ್ರೀ ಸಂಖ್ಯೆ 1800-425-90900 ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಆವರಣ ಯಾದಗಿರಿ ದೂ.ಸಂ.08473 253243ಗೆ ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.