ಮಾನಸಿಕ-ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
Team Udayavani, Feb 11, 2022, 12:12 PM IST
ಯಾದಗಿರಿ: ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಲು ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಅಭಿಪ್ರಾಯಪಟ್ಟರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘ ಹಾಗೂ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಆಶ್ರಯದಲ್ಲಿ ನಡೆದ ಕಂದಾಯ ಇಲಾಖೆ ನೌಕರರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಮಹಿಳಾ ಮತ್ತು ಪುರುಷರು ಸಮಾನವಾಗಿ ಭಾಗವಹಿಸಬೇಕು. ಮಹಿಳೆಯರಿಗೆ ಕ್ರೀಡೆಯಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು ಎಂದರು.
ಕೋವಿಡ್ ಸಂದರ್ಭದಲ್ಲಿ ಲಸಿಕಾಕರಣಕ್ಕೆ ಕಂದಾಯ ಇಲಾಖೆ ಸಿಬ್ಬಂದಿ ಸಾಕಷ್ಟು ಶ್ರಮಿಸಿದ್ದಾರೆ. ಕಂದಾಯ ಇಲಾಖೆಯ ಭೂಮಿ ತಂತ್ರಾಂಶದಡಿ ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ಎರಡನೇ ಸ್ಥಾನ ಮತ್ತು ಡಿಸೆಂಬರ್ ತಿಂಗಳಲ್ಲಿ ಮೂರನೇ ಸ್ಥಾನ ಪಡೆದು ನಮ್ಮ ಜಿಲ್ಲೆಯು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದೆ. ಇದರ ಕೀರ್ತಿ ಕಂದಾಯ ಇಲಾಖೆ ಸಿಬ್ಬಂದಿಗೆ ಸಲ್ಲುತ್ತದೆ ಎಂದರು.
ಜಿಲ್ಲೆಯ ಸವಾಂìಗೀಣ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಬೇಕು. ಎರಡು ವರ್ಷಗಳಿಂದ ಸರ್ಕಾರದ ಹಲವು ಯೋಜನೆಗಳಲ್ಲಿ ಜಿಲ್ಲೆಯು ಉತ್ತಮ ಸಾಧನೆ ಮಾಡುತ್ತಿದೆ. ಇದಕ್ಕೆ ಸಿಬ್ಬಂದಿ ಪಾತ್ರ ಬಹಳ ಮುಖ್ಯವಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಮಾತನಾಡಿ, ಕ್ರೀಡೆಯು ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು. ಕಂದಾಯ ಇಲಾಖೆಯಿಂದ ಕ್ರೀಡಾಕೂಟ ಹಮ್ಮಿಕೊಂಡಿದ್ದು ಸಂತೋಷದ ಸಂಗತಿಯಾಗಿದೆ. ಪ್ರತಿದಿನ ನಾವು ಕರ್ತವ್ಯದಲ್ಲಿ ಇರೋದು ಇದ್ದೇ ಇರುತ್ತದೆ. ಆದರೆ ವರ್ಷಕ್ಕೊಮ್ಮೆಯಾದರೂ ಕೆಲಸದ ಒತ್ತಡದಿಂದ ದೂರವಿದ್ದು, ಎಲ್ಲರೂ ಸೇರಿ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಆಟದಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ. ದೈಹಿಕ ಮತ್ತು ಮಾನಸಿಕ ಆರೋಗ್ಯ ಗೆಲ್ಲಬೇಕಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಶಹಾಪುರ ತಹಶೀಲ್ದಾರ್ ಮಧುರಾಜ್, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಗುರುಮಿಠಕಲ್ ತಹಶೀಲ್ದಾರ್ ಶರಣಬಸವ, ವಡಿಗೇರಾ ತಹಶೀಲ್ದಾರ್ ಸುರೇಶ ಅಂಕಲಗಿ, ಹುಣಸಗಿ ತಹಶೀಲ್ದಾರ್ ಅಶೋಕ ಸುರಪುರಕರ್, ಚುನಾವಣೆ ತಹಶೀಲ್ದಾರ್ ಸಂತೋಷರಾಣಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.