ಕಾಳ ಸಂತೆಯಲಿ ಪಡಿತರ ಮಾರಾಟ ತಡೆಯಿರಿ: ಡಿಸಿ

Team Udayavani, Dec 21, 2021, 2:36 PM IST

ಕಾಳ ಸಂತೆಯಲಿ ಪಡಿತರ ಮಾರಾಟ ತಡೆಯಿರಿ: ಡಿಸಿ

ಯಾದಗಿರಿ: ಜಿಲ್ಲೆಯಲ್ಲಿ ಅನಧಿಕೃತವಾಗಿ ಬಯೋ-ಡೀಸೆಲ್‌ ಮಾರಾಟ ಮಾಡುತ್ತಿರುವ ದೂರು ಹಾಗೂ ಜಿಲ್ಲೆಯ ಕೆಲವೊಂದು ಪೆಟ್ರೋಲ್‌ಬಂಕ್‌ಗಳಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರ ಪಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿರುವುದರಿಂದ ಕೂಡಲೇ ಈ ಕುರಿತು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲು ಕೇಂದ್ರಗಳನ್ನು ಸ್ಥಾಪಿಸಿದ್ದು, ಇಲ್ಲಿಯವರೆಗೂ ಒಟ್ಟು 85 ರೈತರು ನೋಂದಣಿ ಮಾಡಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದರು.

ಖರೀದಿ ಕೇಂದ್ರಗಳಲ್ಲಿ ನಿಯೋಜಿಸಿದ ಅಧಿಕಾರಿ/ಸಿಬ್ಬಂದಿ ಕಡ್ಡಾಯವಾಗಿಕೇಂದ್ರ ಸ್ಥಾನದಲ್ಲೇ ಲಭ್ಯವಿದ್ದು, ಕಡ್ಡಾಯವಾಗಿಕಾರ್ಯನಿರ್ವಹಣೆ ಮಾಡಬೇಕು. ಇನ್ನೂ ವ್ಯಾಪಕಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 96,129 ಪಡಿತರ ಚೀಟಿದಾರರು ಪಡಿತರಪಡೆದಿದ್ದು, ಪ್ರತಿಶತ 34.94 ಪಡಿತರ ಚೀಟಿದಾರರು ಪಡಿತರ ಪಡೆದಿರುವುದಾಗಿ ತಿಳಿಸಿದರು. ತಾಲೂಕಿನ ಆಹಾರ ಶಿರಸ್ತೇದಾರರು/ನಿರೀಕ್ಷಕರುಗಳಿಗೆ ಉಪ ನಿರ್ದೇಶಕರ ಮೂಲಕ ಜಿಲ್ಲೆಯಲ್ಲಿ ಪಡಿತರ ಚೀಟಿಗಳನ್ನು ಹೊಂದಿದ್ದರೂ 3 ತಿಂಗಳಿಂದ ಪಡಿತರ ಪಡೆಯದ ಕುಟುಂಬ ಪಡಿತರ ಚೀಟಿಗಳ ವಿವರಗಳನ್ನು ಕೂಡಲೇ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಕುರಿತು ಇದುವರೆಗೂ ಶೇ.71.14 ಪ್ರಗತಿ ಸಾಧಿಸಿದ್ದು,ಮುಂದಿನ ಸಭೆಯೊಳಗಾಗಿ ಪ್ರತಿ ತಾಲೂಕಿನಿಂದಲೂ ಶೇ.10ರಷ್ಟು ಪ್ರಗತಿ ಸಾಧಿಸಿ ಇ-ಕೆವೈಸಿ ಸಂಗ್ರಹಣೆಗಾಗಿ ಇನ್ನೂ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಸಾರ್ವಜನಿಕ ವಿತರಣಾ ಪದ್ಧತಿಯ ತಂತ್ರಾಂಶದಲ್ಲಿ ಕುಟುಂಬದ ಮುಖ್ಯಸ್ಥರು ಇಲ್ಲದ 3104 ಪಡಿತರ ಚೀಟಿಗಳಲ್ಲಿ 950 ಪಡಿತರ ಚೀಟಿಗಳು ಹಾಗೂ 255 ಆಧಾರ್‌ ನಂಬರ್‌ ಸೀಡಿಂಗ್‌ ಆಗದೇ ಇರುವ ಪಡಿತರ ಚೀಟಿಗಳಲ್ಲಿ 243 ಮತ್ತು ಒಂದಕ್ಕಿಂತ ಹೆಚ್ಚು ಕುಟುಂಬದ ಮುಖ್ಯಸ್ಥರು ಹೊಂದಿರುವ 40 ಪಡಿತರ ಚೀಟಿಗಳಲ್ಲಿ 20 ಪಡಿತರ ಚೀಟಿಗಳ ಕುರಿತು ಕ್ರಮ ಕೈಗೊಂಡಿರುವುದಾಗಿ ಉಪ ನಿರ್ದೇಶಕರು ತಿಳಿಸಿದರು. ಇನ್ನೂಳಿದ 2186 ಪಡಿತರ ಚೀಟಿಗಳ ಕುರಿತು ಕೂಡಲೇ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಯಾದಗಿರಿ ಜಿಲ್ಲೆಯಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಕೋರಿ 13376 ಅರ್ಜಿಗಳು ಸ್ವೀಕೃತ ಗೊಂಡಿದ್ದು, ಅದರಲ್ಲಿ 13317 ಪಡಿತರ ಚೀಟಿಗಳನ್ನು ಆಹಾರ ನಿರೀಕ್ಷಕರ ಲಾಗಿನ್ನಲ್ಲಿ ಪರಿಶೀಲನೆ ಮಾಡಲಾಗಿದ್ದು, ಅದರಲ್ಲಿ 4537 ಪಡಿತರ ಚೀಟಿ ಅರ್ಜಿಗಳನ್ನು ತಿರಸ್ಕರಿಸಬಹುದಾಗಿದೆ. ಪ್ರಸ್ತುತ ಹೊಸಪಡಿತರ ಚೀಟಿಗಳ ಅರ್ಜಿಗಳನ್ನು ವಿಲೀನಗೊಳಿಸುವ ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ಗಮನಕ್ಕೆ ತಂದರು.

ಅದಕ್ಕೆ ಜಿಲ್ಲಾಧಿಕಾರಿ ಸರ್ಕಾರದಿಂದ ಪಡಿತರ ಚೀಟಿಗಳನ್ನು ವಿಲೀನಗೊಳಿಸುವಂತೆ ನಿರ್ದೇಶನ ಬಂದ ಕೂಡಲೇ ಕಾಲಮಿತಿಯಲ್ಲಿ ವಿಳಂಬಕ್ಕೆ ಆಸ್ಪದ ನೀಡದಂತೆ ಪಡಿತರ ಚೀಟಿಗಳನ್ನು ವಿಲೀನಗೊಳಿಸುವಂತೆ ಆದೇಶಿಸಿದರು.

ಈ ಸಂದರ್ಭದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ರಾಜು, ಕೆ.ಎಫ್‌.ಸಿ.ಎಸ್‌.ಸಿ ಜಿಲ್ಲಾ ವ್ಯವಸ್ಥಾಪಕಿ ಶಿಲ್ಪಾ ಸುರಪುರ ಹಾಗೂ ಜಿಲ್ಲೆಯ ತಾಲೂಕಿನ ಆಹಾರ ಶಿರಸ್ತೇದಾರರು ಮತ್ತು ಆಹಾರ ನಿರೀಕ್ಷಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.