ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಡಿಸಿ
Team Udayavani, May 7, 2021, 4:16 PM IST
ಯಾದಗಿರಿ: ಕೊರೊನಾ ಎರಡನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್‌ಡೌನ್ ನಿಯಮ ಕಟ್ಟುನಿಟ್ಟಿನ ಪಾಲಿಸಬೇಕು. ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ವ್ಯಾಪಾರ-ವಹಿವಾಟು ಮಾಡುತ್ತಿದ್ದರೆ ಅಂತಹ ಅಂಗಡಿ ಮಾಲೀಕರ ವಿರುದ್ಧ ದಂಡದ ಜತೆಗೆ ಕಠಿಣ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಹೇಳಿದರು.
ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ ಪಾಲನೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿಯಂತೆ ಪ್ರತಿನಿತ್ಯ ಬೆಳಿಗ್ಗೆ 6ರಿಂದ 12ರ ವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯ ಮೀರಬಾರದು ಎಂದು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಗ್ರಾಮಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಾಲಕಾಲಕ್ಕೆ ಕರೆದು, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಅನಾವಶ್ಯಕ ಓಡಾಡುವ ಜನರಿಗೆ ದಂಡ ವಿಧಿ ಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವೈಯಕ್ತಿಕ ಸ್ವತ್ಛತೆಗೆ ಜಾಗೃತಿ ಮೂಡಿಸಬೇಕು. ಕರಪತ್ರ, ಧ್ವನಿಮುದ್ರಿಕೆ, ಬ್ಯಾನರ್ ಇನ್ನಿತರ ವಿಧಾನಗಳ ಮೂಲಕ ರೋಗ ಲಕ್ಷಣಗಳು ಹಾಗೂ ಕೊರೊನಾ ಹರಡುವಿಕೆ ತಡೆಯುವ ಕುರಿತು ಜಿಲ್ಲೆಯ ಜನರಲ್ಲಿ ವ್ಯಾಪಾಕ ಜಾಗೃತಿ ಮೂಡಿಸಬೇಕು. ಈ ಮೂಲಕ ಕೊರೊನಾ ಎರಡನೇ ಅಲೆಯಿಂದ ಮುಕ್ತಿ ಪಡೆಯಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.