ವಿದ್ಯಾರ್ಥಿಗಳಿಗೆ ಹೊಸ ಜಗತ್ತಿನ ಪರಿಚಯ ಅವಶ್ಯ


Team Udayavani, May 2, 2022, 6:03 PM IST

22world

ಯಾದಗಿರಿ: ಜಗತ್ತಿನಲ್ಲಿ ಕೊರೊನಾ ದಾಳಿಯ ನಂತರ ಎಲ್ಲ ಕ್ಷೇತ್ರಗಳಲ್ಲಿ ಬದಲಾವಣೆ ಕಾಣುತ್ತಿದ್ದೇವೆ. ಕಾರಣ ಇಂದು ನಾವು ವಿದ್ಯಾರ್ಥಿಗಳಿಗೆ ಹೊಸ ಜಗತ್ತಿನ ನಿಯಮಗಳ ಪರಿಚಯ ಮಾಡುವ ಜೊತೆಗೆ ಸೂಕ್ತ ಜ್ಞಾನ ನೀಡುವುದು ಅವಶ್ಯಕವಾಗಿದೆ ಎಂದು ಸಂಪನ್ಮೂಲ ವ್ಯಕ್ತಿ ಮಹೇಶ ಮಾಶಾಲ್‌ ಧಾರವಾಡ ಅಭಿಪ್ರಾಯಪಟ್ಟರು.
ಇಲ್ಲಿನ ಆರ್ಯಭಟ್ಟ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಿಜ್ಞಾನ ಚೇತನ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿದ ಅವರು, ಪ್ರಸಕ್ತ ದಿನಗಳಲ್ಲಿ ಜ್ಞಾನವಂತನಿಗಿಂತ ವೈಜ್ಞಾನಿಕ ಯಂತ್ರಗಳು ಉನ್ನತ ಸ್ಥಾನದಲ್ಲಿವೆ ಎಂದು ತಿಳಿಸಿದರು.

ಪಾಲಕರು ಮೊದಲು ತಮ್ಮ ಮಕ್ಕಳ ಬಗ್ಗೆ ನಕರಾತ್ಮಕ ಆಲೋಚನೆ ಮಾಡುವುದನ್ನು ನಿಲ್ಲಿಸಿ, ಅವರ ಪ್ರತಿಭೆ ಗಮನಿಸಿ, ಸಕಾಲಕ್ಕೆ ಪ್ರೋತ್ಸಾಹ ನೀಡಬೇಕು ಎಂದರು.

10ನೇ ತರಗತಿ ಪಾಸಾದ ವಿದ್ಯಾರ್ಥಿಗಳು ಮುಂದೆ ನಾವು ಏನು ಅಭ್ಯಾಸ ಮಾಡಬೇಕು ಎಂಬ ಗೊಂದಲದಲ್ಲಿರುತ್ತಾರೆ. ಅಂತವರು ಮೊದಲು ನಿಮ್ಮಲ್ಲಿರುವ ಆಸಕ್ತಿ ಗುರುತಿಸಿಕೊಂಡು ಆ ಕ್ಷೇತ್ರ ಆಯ್ಕೆ ಮಾಡಿಕೊಂಡು ಅಚಲ ನಿರ್ಧಾರ, ಪರಿಶ್ರಮದೊಂದಿಗೆ ಅಭ್ಯಾಸ ಮಾಡಿ ಗುರಿ ತಲುಪಿ. ಸಮಾಜಕ್ಕೆ ಒಬ್ಬ ಪರಿಣಿತ ಶಕ್ತಿಯಾಗಿ ಬದುಕು ಸಾಗಿಸಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿ ನರೇಂದ್ರ ಬಡಸೇಶಿ ಉಪನ್ಯಾಸ ನೀಡಿ, ಮಕ್ಕಳ ಶೈಕ್ಷಣಿಕ, ದೈಹಿಕ, ಮಾನಸಿಕ ಪ್ರಗತಿಯಲ್ಲಿ ಉತ್ತಮ ಪರಿಸರದ ಪಾತ್ರ ಪ್ರಮುಖವಾಗಿದೆ. ಇಂತಹ ಬಿಸಿಲು ನಾಡಿನಲ್ಲಿ ಆರ್ಯಭಟ್ಟ ಶಾಲೆ ಒಳ್ಳೆಯ ಪರಿಸರ ಹಾಗೂ ಗುಣಮಟ್ಟದ ಬೋಧನೆ ನೀಡುತ್ತಿರುವುದು ಬದಲಾವಣೆಯ ಸಂಕೇತ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರದ ಜಿ.ವಿ. ಕೃಷ್ಣಾರೆಡ್ಡಿ ವಿದ್ಯಾರ್ಥಿಗಳಿಗೆ ಪೂರಕವಾದ ವಿಷಯಗಳನ್ನು ತಿಳಿಸಿದರು. ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಧಾಕರರೆಡ್ಡಿ ಮಾಲಿ ಪಾಟೀಲ್‌ ಅನಪುರ ಪ್ರಾಸ್ತಾವಿಕವಾಗಿ ಮಾತನಾಡಿ, ಶೈಕ್ಷಣಿಕ ಹಿಂದುಳಿದ ಭಾಗದ ನಮ್ಮ ವಿದ್ಯಾರ್ಥಿಗಳಿಗೆ ನಿರಂತರ ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ಸ್ಪರ್ಧಾ ಪರೀಕ್ಷೆಗಳನ್ನು ಎದುರಿಸುವ ಜ್ಞಾನ ಹಾಗೂ ಆತ್ಮವಿಶ್ವಾಸ ಮೂಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಯಾದಗಿರಿ ಜಿಲ್ಲೆಯ ಹಾಗೂ ನೆರೆಯ ಕಲಬುರಗಿ ಜಿಲ್ಲೆಯ ಸೇಡಂ, ಚಿತ್ತಾಪುರ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ಶಾಲೆ ಪ್ರಾಂಶುಪಾಲ ಅರವಿಂದಾಕ್ಷಣ ಸ್ವಾಗತಿಸಿದರು. ಲಕ್ಷ್ಮೀ ಪಾಟೀಲ್‌ ವಂದಿಸಿದರು.

ಟಾಪ್ ನ್ಯೂಸ್

vijayapura-Police

Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.