ವಿದ್ಯಾರ್ಥಿಗಳು ನಿಶ್ಚಿತ ಗುರಿ ಹೊಂದಿದರೆ ಯಶಸ್ಸು ಖಚಿತ
Team Udayavani, Aug 30, 2018, 2:43 PM IST
ಹುಣಸಗಿ: ವಿದ್ಯಾರ್ಥಿಗಳು ಉನ್ನತ ಕನಸು, ನಿಶ್ಚಿತ ಗುರಿ ಇಟ್ಟುಕೊಂಡು ಅಭ್ಯಸಿಸಿದ್ದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ ಎಂದು ಹುಣಸಗಿ ಪಿಎಸ್‌ಐ ಸುನೀಲಕುಮಾರ ಮೂಲಿಮನಿ ಹೇಳಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ವಾಟ್ಸಪ್, ಫೇಸ್‌ಬುಕ್, ಇಂಟರನೆಟ್, ಟ್ವಿಟ್ಟರ್‌ದಿಂದ ದೂರ ಉಳಿದು ಓದಿನತ್ತ ಗಮನಹರಿಸಬೇಕು ಎಂದು ಹೇಳಿದರು.
ಉಪನ್ಯಾಸಕ ಧರ್ಮರಾಜ ವೈ.ಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಓದಿನತ್ತ ಹೆಚ್ಚು ಗಮನಹರಿಸಬೇಕು. ಈ ದಿಸೆಯಲ್ಲಿ ಸತತ ಪ್ರಯತ್ನದೊಂದಿಗೆ ಅಧ್ಯಯನದಲ್ಲಿ ತೊಡಗಿದಾಗ ಮಾತ್ರ ಅಂದು ಕೊಂಡಿರುವ ಗುರಿ ತಲುಪಲು ಸಾಧ್ಯ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಆದ್ದರಿಂದ ಗುರಿ ತಲುಪಲು ಸಾಧಕರ ಜೀವನ ಚರಿತ್ರೆ ಪುಸ್ತಕಗಳನ್ನು ಓದಿ ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ಮಾತನಾಡಿ, ಈ ಭಾಗದ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಪದವಿ ಕಾಲೇಜು ಆರಂಭಿಸಲಾಗಿದೆ. ಆದ್ದರಿಂದ ಮಾನವೀಯ ಮೌಲ್ಯ ಬೆಳಸೆಸಿಕೊಂಡು ಉತ್ತಮ ನಾಗರಿಕರಾಗಿ ಬಾಳಿ ಎಂದರು.
ಈ ಸಂದರ್ಭದಲ್ಲಿ ಸೌತ್ ವೇಷ್ಟ್ ಏಷಿಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾಗವಹಿಸಿ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಗೆದ್ದ ಕ್ರೀಡಾಪಟು ಮಹಾಂತೇಶ ಮಡಿವಾಳರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ ನಾನಾಗೌಡ ಪಾಟೀಲ, ಸರಕಾರಿ ಪಿಯು ಕಾಲೇಜ ಪಾಚಾರ್ಯ ವಿ.ಎಸ್. ಬಿರಾದಾರ, ಪ್ರಾಚಾರ್ಯ ಎಸ್.ಎಂ. ಕಿರಣಗಿ, ಉಪನ್ಯಾಸಕರಾದ ಬಸವರಾಜ ಮುರೋಳ, ಮಾನಪ್ಪ ಅಗ್ನಿ, ಸಂದೇಶ ಜೊಷಿ, ಎಸ್.ಎಸ್.ಭಂಟನೂರ, ಎ.ಎಸ್. ಹಿರೇಮಠ ಇದ್ದರು. ಬೀಮಶೇನರಾವ್ ಕುಲಕರ್ಣಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಹೊಸಮನಿ ನಿರೂಪಿಸಿದರು. ತಾರಾನಾಥ ಚವ್ಹಾಣ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.