ಸಂಧಾನ ಸಭೆ ಯಶಸ್ವಿ : ಅನಿರ್ದಿಷ್ಟ ಧರಣಿ ಹಿಂದಕ್ಕೆ
ಅರ್ಹ ಫಲಾನುಭವಿಗಳ ವರದಿಯನ್ನು ಗುರುತಿಸಿ ನಿವೇಶನ ಮಂಜೂರು ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ
Team Udayavani, Jan 21, 2021, 6:13 PM IST
ಯಾದಗಿರಿ: ಸ್ಲಂ ಘೋಷಣೆ, ಹಕ್ಕುಪತ್ರ ವಿತರಣೆ ಹಾಗೂ ನಿವೇಶನ ರಹಿತರಿಗೆ ವಸತಿ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಹಿಂಪಡೆಯಲಾಗಿದೆ. ನಗರದ ಜಿಲ್ಲಾಡಳಿತ ಭವನ ಎದುರು ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ವತಿಯಿಂದ ಹಮ್ಮಿಕೊಂಡ ಧರಣಿಗೆ ಜಿಲ್ಲಾಡಳಿತ ಸ್ಪಂದಿಸಿದೆ. ಜಿಲ್ಲಾಧಿಕಾರಿಗಳು ಮತ್ತು ನಗರಾಭಿವೃದ್ಧಿ ಯೋಜನಾ ನಿರ್ದೇಶಕರ ಕಚೇರಿ ಅಧಿಕಾರಿಗಳು ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಹಾಗೂ ಸ್ಥಳೀಯ ಮುಖಂಡರೊಂದಿಗೆ ಮಂಗಳವಾರ ಸಂಜೆ ಸಂಧಾನ ಸಭೆ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಸರ್ಕಾರಿ ಜಾಗ ಲಭ್ಯವಿಲ್ಲದ ಕಾರಣ ಖಾಸಗಿ ಜಮೀನು ಸರ್ವೇ ನಂ. 29/3, 29/7, 29/8, 30/3, 30/6 ಮತ್ತು 31/3ರಲ್ಲಿ ಒಟ್ಟು 18 ಎಕರೆ 28 ಗುಂಟೆ ಜಮೀನು (ಯಾದಗಿರಿ ನಗರದಿಂದ 2.5 ಕಿ.ಮೀ. ಅಂತರದಲ್ಲಿ) ನಗರ ಸಭೆ ಆಯುಕ್ತರು ಮತ್ತು ತಹಶೀಲ್ದಾರ್ ನಿವೇಶನ ರಹಿತರಿಗೆ ಖಾಸಗಿ ಜಮೀನನ್ನು ಖರೀದಿಸಲು ಪ್ರಸ್ತಾವನೆಯನ್ನು ಅರ್ಹ ಫಲಾನುಭವಿಗಳ ವರದಿಯನ್ನು ಗುರುತಿಸಿ ನಿವೇಶನ ಮಂಜೂರು ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸ್ಲಂ ಘೋಷಣೆ ಹಾಗೂ ಹಕ್ಕು ಪತ್ರಕ್ಕೆ ಸಂಬಂಧಪಟ್ಟಂತೆ ಜ.29ರಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಯಾದಗಿರಿ ನಗರದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು ಕುರಿತು ಚರ್ಚಿಸಲು ಸಭೆ ಕರೆಯುವುದಾಗಿ ಲಿಖಿತ ರೂಪದಲ್ಲಿ ಯೋಜನಾ ನಿರ್ದೇಶಕರು ಭರವಸೆ ನೀಡಿದ್ದರಿಂದ ಧರಣಿ ಹಿಂಪಡೆಯಲಾಗಿದೆ. ಈ ವೇಳೆ ಅಧ್ಯಕ್ಷ ಹಣಮಂತ ಶಹಾಪುರಕರ್, ಸಂಘಟನಾ ಸಂಚಾಲಕಿ ರೇಣುಕಾ ಸರಡಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.