![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 24, 2020, 2:52 PM IST
ಯಾದಗಿರಿ: ಶನಿವಾರ ಒಂದೇ ದಿನ 72 ಜನರಲ್ಲಿ ಸೋಂಕು ಪತ್ತೆಯಾಗಿದ್ದ ಯಾದಗಿರಿಯಲ್ಲಿ ಇಂದು ಆರು ಜನರಲ್ಲಿ ಸೋಂಕು ದೃಢವಾಗಿದೆ. ಇದರಿಂದ ಈಗ ಜಿಲ್ಲೆಯ ಸೋಂಕಿತರ ಸಂಖ್ಯೆ 93ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ವಿವಿಧ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ ಪಿ- 1972, ಪಿ-1973, ಪಿ- 1974, ಪಿ- 1975, ಪಿ- 1976, ಪಿ- 2010ರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಇವರೆಲ್ಲಾ ಮಹಾರಾಷ್ಟ್ರ ದಿಂದ ಬಂದವರಾಗಿದ್ದಾರೆ.
ಸೋಂಕಿತರ ಸಂಖ್ಯೆಯಲ್ಲಿ ಯಾದಗಿರಿ ಜಿಲ್ಲೆಯ ರಾಯಚೂರು, ಬೀದರ್, ವಿಜಯಪುರ ಹಾಗೂ ಬಾಗಲಕೋಟೆಯನ್ನು ಮೀರಿಸಿ ನೂರರ ಗಡಿತಲುಪಿದೆ.
ರಾಜ್ಯದಲ್ಲಿ ಇಂದು 97 ಹೊಸ ಪ್ರಕರಣಗಳ ಕಾರಣ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ. ಇದುವರೆಗೆ ರಾಜ್ಯದಲ್ಲಿ634 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 42 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.