ಗ್ರಾಮೀಣ ಪ್ರದೇಶದಲ್ಲಿ ಜಾಗೃತಿಶಿಬಿರ ಆಯೋಜಿಸಲು ಸೂಚನೆ
Team Udayavani, Mar 18, 2020, 6:24 PM IST
ಸುರಪುರ: ಗ್ರಾಮೀಣ ಪ್ರದೇಶಗಳಲ್ಲಿ ಶಿಬಿರ ಆಯೋಜಿಸಿ ಕೊರೊನಾ ವೈರಸ್ ಬಗ್ಗೆ ಅರಿವು ಮೂಡಿಸಬೇಕು. ಈ ದಿಸೆಯಲ್ಲಿ ಎಲ್ಲ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಿ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಶ್ರಮಿಸಬೇಕು ಎಂದು ಗ್ರೇಡ್-2
ತಹಶೀಲ್ದಾರ್ ಸೋಪಿಯಾ ಸುಲ್ತಾನ್ ಹೇಳಿದರು.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ನೋಡಲ್ ಅಧಿಕಾರಿಯಾಗಿರುತ್ತಾರೆ. ಗ್ರಾಮೀಣ ಪ್ರದೇಶದಲ್ಲಿ ತಾಪಂ ಇಒ ಮತ್ತು ನಗರದಲ್ಲಿ ಪೌರಾಯುಕ್ತರು ಉಸ್ತುವಾರಿ ಮಾಡಬೇಕು. ಗ್ರಾಪಂ ಸಿಬ್ಬಂದಿ ಬಳಸಿಕೊಂಡು ಪ್ರತಿ ಹಳ್ಳಿಯಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು. ಪೌರ ಕಾರ್ಮಿಕರನ್ನು ಬಳಸಿಕೊಂಡು ನಗರದದಲ್ಲಿ ಸ್ವಚ್ಛತೆ ಕಾಪಾಡಬೇಕು. ಕಸ ವಿಲೇವಾರಿ ಮಡುವ ವಾಹನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ವಿದೇಶಗಳಿಂದ ಆಗಮಿಸುವವರ ಬಗ್ಗೆ ಮಾಹಿತಿ ಸಂಗ್ರಹಿಸಿದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಜನಾಂದೋಲವ ರೂಪದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಸರಕಾರದ ನಿದೇರ್ಶನದಂತೆ ನಗರದ ಜಿಮ್ ಕೇಂದ್ರ ಬಂದ್ ಮಾಡಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಸಂತೆ, ಜಾತ್ರೆ, ಉತ್ಸವ, ಸಭೆ, ಸಮಾರಂಭ ಮತ್ತು ಧಾರ್ಮಿಕ ಕಾರ್ಯಕ್ರಮ ನಿಷೇಧಿಸಲಾಗಿದೆ. ಅದ್ಧೂರಿ ಮದುವೆ ಬೇಡ. ಸರಳ ವಿವಾಹಕ್ಕೆ ಸಲಹೆ ನೀಡಿ ಎಂದು ಸೂಚಿಸಿದರು.
ತಾಲೂಕಿನ ಪ್ರತಿ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನು ಮಾಡಿಕೊಳ್ಳಬೇಕು. ಅಗತ್ಯ ಬಿದ್ದಲ್ಲಿ ಎನ್ ಡಿಆರ್‌ಎಫ್ ನಿಧಿ ಬಳಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ತಾಲೂಕು ಆರೋಗ್ಯಾಧಿಕಾರಿ ಡಾ| ಆರ್. ವಿ. ನಾಯಕ, ತಾಪಂ
ಇಒ ಅಮರೇಶ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.