ಸುರಪುರದಲ್ಲಿ ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ

ರಾಷ್ಟ್ರಪತಿಗೆ ಬರೆದ ಮನವಿ ಗ್ರೇಡ್‌-2 ತಹಶೀಲ್ದಾರ್‌ಗೆ ಸಲ್ಲಿಕೆ

Team Udayavani, Jan 9, 2020, 12:09 PM IST

9-January-8

ಸುರಪುರ: ದೇಶಾದ್ಯಂತ ಕರೆ ನೀಡಿದ್ದ ಭಾರತ ಬಂದ್‌ ಬೆಂಬಲಸಿ ದಲಿತ ಮತ್ತು ಪ್ರಗತಿ ಪರ ಸಂಘಟನೆಗಳು ಬುಧವಾರ ನಗರದ ಮಹಾತ್ಮ ಗಾಂಧೀ ಜಿ ವೃತ್ತದಲ್ಲಿ ಪ್ರತಿಭಟಿಸಿದವು. ಬಂದ್‌ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಒತ್ತಾಯ ಮಾಡಿ ಅಂಗಡಿಗಳನ್ನು ಬಂದ್‌ ಮಾಡಿಸುವಂತ್ತಿಲ್ಲ. ಸಾರ್ವಜನಿಕರ ಶಾಂತಿ ಕದಡುವಂತ್ತಿಲ್ಲ ಎಂದು ಪೊಲೀಸ್‌ ಇಲಾಖೆ ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿದ್ದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಬೆಳಗ್ಗೆ ತಮ್ಮ ಅಂಗಡಿಗಳನ್ನು ತರೆದು ಎಂದಿನಂತೆ ವ್ಯಾಪಾರ ವಹಿವಾಟು ನಡೆಸಿದ್ದರು.

10 ಗಂಟೆ ಸುಮಾರಿಗೆ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದಂತೆ
ಗಾಂಧಿ ವೃತ್ತದಲ್ಲಿ ವರ್ತಕರು ಅಂಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆಗೆ ಬೆಂಬಲಿಸಿದರು. ತರಕಾರಿ ಮಾರುಕಟ್ಟೆ, ಪಟೇಲ್‌ ವೃತ್ತ, ಅರಮನೆ ಮಾರ್ಗ ಸೇರಿದಂತೆ ಉಳಿದೆಡೆ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ವ್ಯಾಪಾರ ವಹಿವಾಟು ಆರಂಭಿಸಿದ್ದವು. ಹೀಗಾಗಿ ನಗದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ಕಂಡು ಬಂದಿತು. ಸರ್ಕಾರಿ ಕಚೇರಿ, ಬ್ಯಾಂಕ್‌ಗಳು, ಶಾಲಾ-ಕಾಲೇಜುಗಳು ಎಂದಿನಂತೆ ನಡೆದವು.

ಸಾರಿಗೆ ಸಂಚಾರ ಸುಗಮವಾಗಿದ್ದರೆ ಜನ ಸಂಚಾರ ವಿರಳವಾಗಿತ್ತು. ಪ್ರತಿಭಟನಾಕಾರರು ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಮಹಾತ್ಮ ಗಾಂಧಿಧೀಜಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟಿಸಿದರು.

ಯಲ್ಲಪ್ಪ ಚಿನ್ನಾಕಾರ, ಅಹ್ಮದ್‌ ಪಠಾಣ, ನಾಗಣ್ಣ ಕಲ್ಲದೇವನಹಳ್ಳಿ, ಮುಫ್ತಿ ಎಕ್ಬಾಲ ವಂಟಿ, ಮಾನಪ್ಪ ಕಟ್ಟಿಮನಿ, ಉಸ್ತಾದ್‌ ವಜಾಹತ್‌ ಹುಸೇನ್‌, ಸುರೇಖಾ ಕುಲಕರ್ಣಿ ಮಾತನಾಡಿ, ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಎನ್‌ಆರ್‌ಸಿ, ಸಿಎಎ, ಎನ್‌ ಪಿಆರ್‌ ದೇಶದ ನಾಗರಿಕರಿಗೆ ಅವಶ್ಯಕತೆ ಇಲ್ಲ. ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ದೂರದೃಷ್ಟಿಗೆ ಭಂಗ ತರುತ್ತಿದೆ. ದೇಶದ ಅಭಿವೃದ್ಧಿ, ಸರ್ವ ಧರ್ಮಗಳ ಸಹೋದರೆತೆಯ ತತ್ವಗಳಿಗೆ ಧಕ್ಕೆಯಾಗುತ್ತಿದೆ. ಕೇಂದ್ರ ಸರಕಾರ ಜನವಿರೋಧಿ  ಕಾಯ್ದೆಗಳನ್ನು ಜಾರಿಗೊಳಿಸಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ದೇಶದ ಪ್ರಧಾನಿ ಮತ್ತು ಗೃಹ ಸಚಿವರು ದಿನಕ್ಕೊಂದು ಹೇಳಿಕೆ ನೀಡುತ್ತಾ ದೇಶದ ಜನತೆಗೆ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಸಿಎಎ, ಎನ್‌ಆರ್‌ಸಿ, ಎನ್‌ಆರ್‌ಪಿ ಕಾನೂನುಗಳನ್ನು ತಕ್ಷಣ ರದ್ದುಗೊಳಿಸಬೇಕು. ವಿಳಂಬ ಅನುಸರಿಸಿದರೆ ದೇಶದಲ್ಲಿ ಇನ್ನೂ ಹೆಚ್ಚಿನ ಉಗ್ರ ಹೋರಾಟಗಳನ್ನು ಹಮ್ಮಿಕೊಳ್ಳವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿ ರಾಷ್ಟ್ರಪತಿಗೆ ಬರೆದ ಮನವಿಯನ್ನು ಗ್ರೇಡ್‌-2 ತಹಶೀಲ್ದಾರ್‌ ಸೋಫೀಯಾ ಸುಲ್ತಾನ್‌ ಅವರಿಗೆ ಸಲ್ಲಿಸಿದರು.

ವೆಂಕಟೇಶ ಹೊಸ್ಮನಿ, ಖಲೀಲ್‌ ಅಹ್ಮದ್‌ ಅರಕೇರಿ, ಗಫಾರ್‌ ನಗನೂರಿ, ರಾಹುಲ್‌ ಹುಲಿಮನಿ, ಮಹಿಬೂಬ್‌ ಒಂಟಿ, ಲಿಯಾಖತ್‌ ಕಟಪಟೆ, ಖಾಲೀದ್‌ ಅಹ್ಮದ್‌, ಅಬ್ದುಲ್‌ ಮಜೀದ್‌, ಹಣಮಂತ ಬೊಮ್ಮನಳ್ಳಿ, ಹಣಮಂತ ಕಟ್ಟಮನಿ, ಮಾಳಪ್ಪ ಕಿರದಳ್ಳಿ, ಭೀಮರಾಯ ಸಿಂದಗೇರಿ, ಪ್ರಕಾಶ ಅಲ್ಹಾಳ, ಅಬೀದ್‌ ಹುಸೇನ್‌, ತಿಪ್ಪಣ್ಣ ಶೆಳ್ಳಗಿ, ರಫೀಕ್‌, ರಾಜು ದೊಡ್ಡಮನಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.