ಬೇಡಿಕೆ ಈಡೇರಿಕೆಗೆ ಆಗ್ರಹ

ಟಿ. ಬೊಮ್ನಳ್ಳಿ ಗ್ರಾಮದ ರೈತರಿಗೆ ಏತ ನೀರಾವರಿ ಕಲ್ಪಿಸಲು ಒತ್ತಾಯ

Team Udayavani, Jan 11, 2020, 3:33 PM IST

11-January-10

ಸುರಪುರ: ತಾಲೂಕಿನ ಟಿ. ಬೊಮ್ನಳ್ಳಿ ಗ್ರಾಮಕ್ಕೆ ಏತ ನೀರಾವರಿ ಕಲ್ಪಿಸುವುದು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶೋಷಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅವರಿಗೆ ಮನವಿ ಸಲ್ಲಿಸಿದರು.

ನಗರದ ತಹಶೀಲ್ದಾರ್‌ ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅವರನ್ನು ಭೇಟಿ ಮಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ, ಗ್ರಾಮದ ಕೆರೆ ಸುಮಾರು 50 ಎಕರೆ ವಿಸ್ತಾರ ಇದೆ. ವರ್ಷ ಇಡೀ ನೀರಿನಿಂದ ತಂಬಿರುತ್ತದೆ. ಇತ್ತೀಚೆಗೆ ಕರೆ ಹೂಳು ಮತ್ತು ಗಿಡಗಂಟೆ ಬೆಳೆದು ವ್ಯರ್ಥವಾಗಿ ಹಾಳಾಗುತ್ತಿದೆ. ಇದನ್ನು ಸ್ವಚ್ಛಗೊಳಿಸಿ ಏತ ನೀರಾವರಿ ಕಲ್ಪಿಸುವುದಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಗ್ರಾಮದ ಪಕ್ಕದಲ್ಲಿಯೇ ಕಾಲುವೆ ಹಾದು ಹೋಗಿದೆ. ಆದರೆ ಕೆಲ ಜಮೀನುಗಳಿಗೆ ನೀರಾವರಿ ಇಲ್ಲ. ಕೆರೆಯನ್ನು ಏತ ನೀರಾವರಿಗೆ ಒಳಪಡಿಸದಲ್ಲಿ ನೀರಾವರಿ ವಂಚಿತ ರೈತರಿಗೆ ಹೆಚ್ಚಿನ ನೆರವಾಗಲಿದೆ. ಕಾರಣ ಸ್ಥಳ ಪರಿಶೀಲಸಿ ಏತ ನೀರಾವರಿ ಯೋಜನೆಗೆ ಒಳಪಡಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ನಗರದಲ್ಲಿ ಕುಡಿಯುವ ನೀರಿಗೆ ಬಹಳಷ್ಟು ಸಮಸ್ಯೆ ಇದೆ. ಕೆಲ ವಾರ್ಡ್ಗಳಿಗೆ ನೀರು ಸರಬರಾಜು ಆಗುವುದೇ ಇಲ್ಲ. ನೀರು ಶುದ್ಧೀಕರಣ ಮಾಡುತ್ತಿಲ್ಲ. ಶುದ್ಧೀಕರಣ ಯಂತ್ರಗಳು ಕೆಟ್ಟು ಹೋಗಿ ಸುಮಾರು ವರ್ಷ ಕಳೆದಿವೆ. ನಗರಸಭೆಯವರು ಕಲುಷಿತ ನೀರು ಸರಬರಾಜು ಮಾಡುತ್ತಿದ್ದಾರೆ. ಇದರಿಂದ ರೋಗ ಆವರಿಸುವ ಸಾಧ್ಯತೆ ಇದೆ. ಕಾರಣ ಕೂಡಲೇ ಈ ಸಮಸ್ಯೆ ನಿವಾರಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಮನೆ ಹಂಚಿಕೆ ಕಾರ್ಯ ಸರಿಯಾಗಿ ಆಗಿಲ್ಲ. ಪಿಡಿಒಗಳು ತಮಗೆ ಇಷ್ಟ ಬಂದವರಿಗೆ ಮನೆ ಹಂಚಿಕೆ ಮಾಡಿ ಅರ್ಹ ಬಡವರಿಗೆ ವಂಚನೆ ಮಾಡಿದ್ದಾರೆ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ನಿಯಮಾನುಸಾರ ಪೌಷ್ಟಿಕ ಆಹಾರ
ವಿತರಿಸುತ್ತಿಲ್ಲ. ಬ್ಯಾಂಕ್‌ಗಳು ರೈತರಿಗೆ ಸೌಲಭ್ಯ ನೀಡುತ್ತಿಲ್ಲ, ಡಿಸಿಸಿ ಮತ್ತು ವಿಎಸ್‌ಎಸ್‌ ಸೊಸೈಯಿಟಿಗಳಲ್ಲಿ ಸಾಲ ವಿತರಣೆಯಲ್ಲಿ ತಾರತಮ್ಯ ನಡೆಯುತ್ತಿದೆ. ಈ ಎಲ್ಲಾ ಬೇಡಿಕೆಗಳ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗೋಪಾಲ ಬಾಗಲಕೋಟೆ, ಬಸವರಾಜಗೌಡ ಯಂಕೋಬ ನಾಯಕ, ಭೀಮರಾಯ ಸಾಹು, ಪರಮಣ್ಣಗೌಡ ಪಾಟೀಲ, ಸಿದ್ದಪ್ಪ ಪೂಜಾರಿ, ಸಣ್ಣ ಬೀರಪ್ಪ, ಭೀಮರಾಯ ತಿಪನಟಗಿ, ದೇವಿಂದ್ರಪ್ಪ ನಾಯಕ, ಕೃಷ್ಣ ದೊರೆ, ದೇವಿಂದ್ರ ರತ್ತಾಳ ಇತರರಿದ್ದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.