ಪರಿಸರ ಸಂರಕ್ಷಿಸದಿದ್ದರೆ ಕಾದಿದೆ ಗಂಡಾಂತರ

ಪ್ರಕೃತಿಯಲ್ಲಿ ಪ್ರತಿಯೊಂದು ಜೀವಿಗೂ ಇದೆ ಸ್ವತಂತ್ರವಾಗಿ ಬದುಕುವ ಹಕ್ಕು: ಪರಿಸರವಾದಿ ಪಾಟೀಲ ಅಭಿಮತ

Team Udayavani, Feb 3, 2020, 12:22 PM IST

3-Febrauary-8

ಸುರಪುರ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹಕ್ಕು. ಇದನ್ನು ಸಮರ್ಪಕವಾಗಿ ಸದ್ವಿನಿಯೋಗ ಮಾಡಿಕೊಳ್ಳುವುದರ ಜತೆಗೆ ಸಂರಕ್ಷಣೆಯನ್ನೂ ಮಾಡಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ಗಂಡಾರ ಎದುರಿಸಬೇಕಾಗುತ್ತದೆ ಎಂದು ಪರಿಸರವಾದಿ ನರೇಂದ್ರ ಪಾಟೀಲ ಎಚ್ಚರಿಕೆ ನೀಡಿದರು.

ಸೈಕಲ್‌ ಮೇಲೆ ಕರ್ನಾಟಕ ದರ್ಶನಕ್ಕೆ ಹೊರಟ್ಟಿದ್ದ ಸಂದರ್ಭದಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕೃತಿ ಹೆತ್ತ ತಾಯಿ ಇದ್ದಂತೆ. ನಮಗೆ ಬೇಕಾದಾಗೆಲ್ಲ ಸಿಗುವುದು ಪ್ರಕೃತಿ ಮಡಲಲ್ಲಿ. ಪಶು ಪಕ್ಷಿ ಪ್ರಾಣಿ, ವನ್ಯ ಜೀವಿಗಳು ಸೇರಿದಂತೆ ಪ್ರತಿಯೊಂದು ಜೀವಿಗೂ ಸ್ವತಂತ್ರವಾಗಿ ಬದುಕುವ ಹಕ್ಕು ಇದೆ. ನಮ್ಮ ಸ್ವಾರ್ಥಕ್ಕಾಗಿ ಇತರೆ ಜೀವಿಗಳ ಬದುಕುವ ಹಕ್ಕು ಕಸಿದುಕೊಳ್ಳುವುದಾಗಲಿ, ಪರಿಸರ ನಾಶ ಮಾಡಿ ಇಷ್ಟಾರ್ಥ ಪೂರೈಸಿಕೊಳ್ಳುವುದು ಮನುಷ್ಯ ಧರ್ಮವಲ್ಲ ಎಂದು ಹೇಳಿದರು.

ನನ್ನ ದೇಶದ ಪರಿಸರ, ಜನಜೀವನ, ಸಂಸ್ಕೃತಿ ಬಗ್ಗೆ ತಿಳಿದುಕೊಳ್ಳಬೇಕು. ಸಂಚಾರದಿಂದ ಹೆಚ್ಚಿನದನ್ನು ಕಲಿಯಬೇಕು. ಕಲಿತದನ್ನು ಜನರಿಗೆ ತಿಳಿಸಬೇಕು ಎಂಬ ಉದ್ದೇಶದಿಂದ ದೇಶ ಸಂಚಾರ ಮಾಡುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಸೈಕಲ್‌ ಮೇಲೆ ಪ್ರವಾಸ ಕೈಗೊಂಡಿದ್ದೇನೆ. ಇಲ್ಲಿಯವರೆಗೆ 850 ಕಿಮೀ ಪ್ರವಾಸ ಮಾಡಿದ್ದೇನೆ. ಪ್ರವಾಸದಲ್ಲಿ ಸಾಕಷ್ಟು ಅನುಭವಕ್ಕೆ ಬಂದಿದೆ. ಇದುವರೆಗೂ ನಾನು ಕಂಡುಕೊಂತೆ ಪರಿಸರ ಸಂರಕ್ಷಣೆ ಮತ್ತು ಜನಜೀವನದ ಸಂಸ್ಕೃತಿಯಲ್ಲಿ ದಕ್ಷಿಣ ಮತ್ತು ಉತ್ತರ ಭಾಗಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಬಯಲು ಸೀಮೆಯಲ್ಲಿ ಅರಣ್ಯ ಭೂಮಿ ಯಥೇಚ್ಚವಾಗಿ ನಾಶವಾಗುತ್ತಿದೆ. ಕಾಡು ಬೆಳೆಸಬೇಕು. ಅರಣ್ಯ ಸಂಪತ್ತು ಸಂರಕ್ಷಿಸಬೇಕು ಎಂಬ ಕನಿಷ್ಠ ತಿಳಿವಳಿಕೆ ಇಲ್ಲಿಯ ಜನರಿಗಿಲ್ಲ. ಜನಪ್ರತಿನಿಧಿಗಳಿಗೂ ಈ ಬಗ್ಗೆ ಆಸಕ್ತಿ ಇಲ್ಲ. ಹೀಗಾಗಿ ಇಲ್ಲಿಯ ಪರಿಸರ ನಾಶವೇ ಈ ಪರಿಸ್ಥಿಗೆ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಕೃತಿಯಲ್ಲಿ ಪಶು ಪಕ್ಷಿ ಪ್ರಾಣಿ ಸಂಕುಲ ಎಲ್ಲವು ಇರಬೇಕು. ಎಲ್ಲದರಲ್ಲಿಯೂ ಮಾನವೀಯತೆ ಧಯೆ ಅಂತಃಕರುಣೆ ತೋರುವುದು ಪ್ರತಿಯೊಬ್ಬರ ಧರ್ಮವಾಗಬೇಕು. ಗಿಡಗಳನ್ನು ನಾಟಿ ಮಾಡಿದ ಮಾತ್ರಕ್ಕೆ ಕೆಲಸ ಮುಗಿಯುವುದಿಲ್ಲ. ಅವುಗಳನ್ನು ಮಕ್ಕಳಂತೆ ಜೋಪಾನ ಮಾಡುವುದು ಮುಖ್ಯವಾಗಿದೆ. ನಮ್ಮ ಬೆಟ್ಟ ಗುಡ್ಡಗಳನ್ನು ಕಾಡರಣ್ಯವಾಗಿ ಮಾರ್ಪಡಿಸಬೇಕು. ಹುಲಿ, ಕರಡಿ, ಜಿಂಕೆ ನಿರ್ಭಿತಿಯಿಂದ ಜೀವಿಸುವಂತಾಗಬೇಕು. ಸಕಲ ಜೀವರಾಶಿಗಳು ವಾಸಿಸುವಂತಾದಾಗ ಭಾರತ ಪ್ರಭುದ್ದವಾಗುತ್ತದೆ. ವಿಶ್ವ ಗುರುವಾಗುತ್ತದೆ ಎಂದು ಹೇಳಿದರು.

ರೈತರು ಕೇವಲ ಆರ್ಥಿಕ ಬೆಳೆಗಳನ್ನು ಬೆಳೆಯಬಾರದು. ಇದರೊಂದಿಗೆ ಪರಿಸರಕ್ಕೆ ಪೂರಕವಾಗಬಲ್ಲ ಬೆಳೆ ಬೆಳೆಯುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಹುಬ್ಬಳ್ಳಿ ಟೈಗರ್‌ ಸಂಸ್ಥೆಯಲ್ಲಿ ಕಾರಂತರ ಜತೆಗೂಡಿ ಕೆಲಸ ಮಾಡಿದ್ದೇನೆ. ನರ್ಮದಾ ಬಚಾವೋ ಹೋರಾಟದಲ್ಲಿ ಭಾಗವಹಿಸಿದ್ದೇನೆ. ಸ್ವಯಂ ನಿವೃತ್ತಿ ಪಡೆದುಕೊಂಡು ಪರಿಸರ ಕಾಳಜಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇನೆ. ದೇಶದ ಬಹುತೇಕ ರಾಜ್ಯಗಳಿಗೆ ಭೇಟಿ ನೀಡಿದ್ದೇನೆ. ಅಲ್ಲಿಯ ಜನಜೀವನ, ಪರಿಸರ, ಸಂಸ್ಕೃತಿ, ಭೌಗೋಳಿಕ ಹಿನ್ನೆಲೆ ಬಗ್ಗೆ ತಿಳಿದುಕೊಂಡಿದ್ದೇನೆ. ಜಮ್ಮು ಕಾಶ್ಮೀರದ ಲಡಾಕ್‌ನಲ್ಲಿ 2017ರಿಂದ 19ರ ವರೆಗೆ ವಿವಿಧ ಶಾಲೆ ಕಾಲೇಜುಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಅಗತ್ಯತೆ ಕುರಿತು ಉಪನ್ಯಾಸ ನೀಡಿದ್ದೇನೆ.
ನರೇಂದ್ರ ಪಾಟೀಲ, ಪರಿಸರವಾದಿ

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.