ವೀರಶೈವ ಲಿಂಗಾಯತ ನಿಗಮ ಸ್ಥಾಪನೆಗೆ ಒತ್ತಾಯ
ವೀರಶೈವ ಲಿಂಗಾಯತ ಯುವ ವೇದಿಕೆ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ
Team Udayavani, Mar 14, 2020, 5:08 PM IST
ಸುರಪುರ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಒತ್ತಾಯಿಸಿ ವೀರಶೈವ ಲಿಂಗಾಯತ ಯುವ ವೇದಿಕೆ ತಾಲೂಕು ಘಟಕದ ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿದರು.
ಯುವ ವೇದಿಕೆ ತಾಲೂಕು ಅಧ್ಯಕ್ಷ ಚಂದ್ರಶೇಖರ ಡೋಣೂರು ಮಾತನಾಡಿ, ರಾಜ್ಯದಲ್ಲಿ ಎಲ್ಲಾ ಜಾತಿ ಸಮುದಾಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದ್ದು, ವೀರಶೈವ ಲಿಂಗಾಯತ ನಿಗಮ ಸ್ಥಾಪನೆ ಮಾಡಿಲ್ಲ. ಇದುವರೆಗೂ ಅಧಿ ಕಾರ ನಡೆಸಿರುವ ಸರಕಾರಗಳು ಸಮಾಜವನ್ನು ಕಡೆಗಣಿಸುತ್ತಾ ಬಂದಿವೆ.
ಬಹುಪಾಲು ಸಮಾಜದವರೇ ಮುಖ್ಯಮಂತ್ರಿ ಆಗುತ್ತಾ ಬಂದಿದ್ದರೂ ಸಮಾಜದ ಅಭಿವೃದ್ಧಿಗೆ ಯಾರೊಬ್ಬರು ಒತ್ತು ನೀಡಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮುದಾಯವು ಅಲ್ಪಸಂಖ್ಯಾತ ಸಮುದಾಯವಾಗಿದ್ದು, ಸಮುದಾಯದ ಸಮಗ್ರ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡಿದಲ್ಲಿ ಸಮಾಜದ ಯುವಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಎಲ್ಲಾ ಜಾತಿ ಜನಾಂಗದ ನಿಗಮ ಸ್ಥಾಪಿಸಿ ಅಭಿವೃದ್ಧಿಗೆ ಅನುದಾನ ಒದಗಿಸುವ ಸರಕಾರಗಳು ಲಿಂಗಾಯತ ಸಮಾಜದ ಬಗ್ಗೆ ಮಾತ್ರ ನಿಷ್ಕಾಳಜಿ ವಹಿಸುತ್ತಿವೆ ಎಂದು ದೂರಿದರು.
ಮಹಾರಾಷ್ಟ್ರದಲ್ಲಿ ಈಗಾಗಲೇ ಮರಾಠ ಸಮುದಾಯವನ್ನು ಅಲ್ಪ ಸಂಖ್ಯಾತರೆಂದು ಪರಿಗಣಿಸಿ ಮೀಸಲಾತಿ ನೀಡಲಾಗಿದೆ. ಆದರೆ, ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯತ ಸಮುದಾಯಕ್ಕೆ ಇಲ್ಲಿಯ ಸರಕಾರಗಳು ಯಾವುದೇ ಆದ್ಯತೆ ನೀಡದೆ ವಂಚಿಸುತ್ತಾ ಬಂದಿವೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ನೂರಾರು ಒಳ ಪಂಗಡಗಳಿದ್ದು, ನಮ್ಮ ಸಮಾಜದ ಯುವಕರು ಸರಿಯಾದ ಶಿಕ್ಷಣ, ಉದ್ಯೋಗವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಾಜದ ಮುಖಂಡ ಸೋಮಶೇಖರ ಶಾಬಾದಿ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯದ ಹಿತ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಿ ಉದ್ಯೋಗ, ಶಿಕ್ಷಣ ಇತರೆ ಸೌಲಭ್ಯಕ್ಕಾಗಿ ಮೀಸಲಾತಿಯನ್ನು ಸಹ ನೀಡಿ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪ ಅವರಿಗೆ ಬರೆದ ಮನವಿಯನ್ನು ಗ್ರೇಡ್ 2 ತಹಶೀಲ್ದಾರ್ ಸೋಫಿಯಾ ಸುಲ್ತಾನ್ ಅವರಿಗೆ ನೀಡಿದರು.
ವೀರಶೈವ ಲಿಂಗಾಯತ ಯುವ ವೇದಿಕೆ ಮುಖಂಡರಾದ ವೀರೇಶ ನಿಷ್ಠಿ ದೇಶಮುಖ, ಶಿವರಾಜ ಕಲಕೇರಿ, ವೀರೇಶ ಪಂಚಾಂಗ ಮಠ, ಶೇಖರಗೌಡ, ಬಸಣ್ಣಗೌಡ, ಮಂಜುನಾಥ ಗುಳಗಿ, ಜಗದೀಶ ಪಾಟೀಲ, ರಾಘವೇಂದ್ರ ಸಗರ, ಶರಣಯ್ಯಸ್ವಾಮಿ, ಮಲ್ಕಪ್ಪ ಅಕ್ಕಿ, ಸೂಗುರೇಶ ಮಡ್ಡಿ, ಹರೀಶ ಹಳ್ಳದ, ಬಾಗೇಶ ಕಾಳಗಿ, ಮಂಜು ಮಠಪತಿ, ದಿನೇಶ ದಾದಾ, ಕುಮಾರ ಹೂಗಾರ, ಶಿವು ಹೂಗಾರ, ಬಸನಗೌಡ ಶಂಕರಗೌಡ ಮುನಮುಟಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.