ರಾಷ್ಟ್ರೀಯ ಲೋಕ ಅದಾಲತ್
102 ಪ್ರಕರಣ ಇತ್ಯರ್ಥ23.40 ಲಕ್ಷ ರೂ. ವಸೂಲಿ: ನ್ಯಾ| ಸುಲ್ತಾನ್
Team Udayavani, Feb 9, 2020, 4:22 PM IST
ಸುರಪುರ: ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನ ಮೂಲಕ 102 ಪ್ರಕರಣ ಇತ್ಯರ್ಥ ಪಡಿಸಲಾಗಿದ್ದು, ವಿವಿಧ ಕಟ್ಲೆಗಳಿಂದ 23 ಲಕ್ಷ 40 ಸಾವಿರ ರೂ. ವಸೂಲಿ ಮಾಡಲಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ತಯ್ಯಬಾ ಸುಲ್ತಾನ್ ತಿಳಿಸಿದರು.
ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಂತರ ಮಾತನಾಡಿದ ಅವರು, ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ 19, ಕಿರಿಯ ನ್ಯಾಯಾಲಯದಲ್ಲಿ 57 ಮತ್ತು ಹೆಚ್ಚುವರಿ ನ್ಯಾಯಾಲಯದಲ್ಲಿ 26
ಸೇರಿದಂತೆ ಒಟ್ಟು 102 ಪ್ರಕರಣ ಇತ್ಯರ್ಥ ಪಡಿಸಲಾಗಿದೆ ಎಂದು ವಿವರಿಸಿದರು.
ಜನನ ಮರಣಗಳಿಗೆ ಸಂಬಂಧಿಸಿದ 68, ಲಘು ಪ್ರಕರಣ 25, ದಿವಾನಿ ಪ್ರಕರಣ 27, ಮೋಟಾರು ಅಪಘಾತ ಪ್ರಕರಣ 2, ಬ್ಯಾಂಕ್‌ಗಳಿಗೆ ಸಂಬಂಧಿಸಿದ ಪೂರ್ವ ವ್ಯಾಜ್ಯ ಪ್ರಕರಣ 3 ಇತ್ಯರ್ಥ ಪಡಿಸಲಾಗಿದೆ ಎಂದರು. ಸುಪ್ರೀಂಕೋರ್ಟ್ ಮತ್ತು ಹೈ ಕೋರ್ಟ್ ನಿರ್ದೇಶನ ಮೇರೆಗೆ ಪ್ರತಿ ತಿಂಗಳು 2ನೇ ಶನಿವಾರ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಸಲಾಗುತ್ತಿದೆ. ಸಂಧಾನಕಾರ ವಕೀಲರನ್ನು ನೇಮಿಸಿ ಆ ಮೂಲಕ ಎರಡು ಕಡೆ ಕಕ್ಷಿದಾರರ ನಡುವೆ ರಾಜಿ ಸಂಧಾನ ನಡೆಸಿ ಪ್ರಕರಣ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಒಳ್ಳೆಯ ಅವಕಾಶ ಎಂದು ತಿಳಿಸಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬಿ.ಎನ್. ಅಮರನಾಥ ಮಾತನಾಡಿ, ಅದಾಲತ್ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವುದರಿಂದ ಕಕ್ಷಿದಾರರಿಗೆ ಹಣ ಮತ್ತು ಸಮಯ ಎರಡು ಉಳಿಯುತ್ತದೆ. ವ್ಯರ್ಥ ಕೋರ್ಟ್‌ಗೆ ಅಲೆಯುವುದು ತಪ್ಪುತ್ತದೆ. ಮೇಲಾಗಿ ತ್ವರಿತ ನ್ಯಾಯದಾನ ದೊರಕುತ್ತದೆ. ಕಾರಣ ಕಕ್ಷಿದಾರರು ಇದರು ಲಾಭ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಹಿರಿಯ ನ್ಯಾಯಾಲದಲ್ಲಿ ವಕೀಲ ಬಲಭೀಮ ನಾಯಕ, ಕಿರಿಯ ನ್ಯಾಯಾಲಯದಲ್ಲಿ ರವಿ ಗೋನಾಲ ಸಂಧಾನಕಾರರಾಗಿ ಕರ್ತವ್ಯ ನಿರ್ವಹಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.