56,816 ಮಕ್ಕಳಿಗೆ ಲಸಿಕೆ ಗುರಿ
ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಲು ಸಿಬ್ಬಂದಿಗೆ ಸೂಚನೆ
Team Udayavani, Jan 17, 2020, 1:54 PM IST
ಸುರಪುರ: ತಾಲೂಕಿನಲ್ಲಿ ಜ.19ರಿಂದ 22ರ ವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ 56,816 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಸಹಕರಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಆರ್.ವಿ. ನಾಯಕ ಹೇಳಿದರು.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಗರ ಮತ್ತು ಗ್ರಾಮೀಣ ಪ್ರದೇಶದ ಪ್ರತಿಯೊಂದು ಮಗುವಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ನಗರ ಪ್ರದೇಶದ 7122, ಗ್ರಾಮೀಣ ಪ್ರದೇಶ 49694 ಸೇರಿ ಒಟ್ಟು 56816 ಮಕ್ಕಳಿಗೆ ಹನಿ ಹಾಕಲಾಗುವುದು. ಒಟ್ಟು 226 ತಂಡಗಳು, 478- ವ್ಯಾಕ್ಸಿನಟರ್, 47 ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದು, 11-ಟ್ರಾಂಜಿಟ್ ಪಾಯಿಂಟ್ ಇರುತ್ತವೆ. ರವಿವಾರ ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳಿಗೆ ಜ. 20ರಿಂದ 22ರ ವರೆಗೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶ್ರುಶೂಷಕರು ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಹನಿ ಹಾಕುವರು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಗ್ರೇಡ್-2 ತಹಶೀಲ್ದಾರ್ ಸುಫೀಯಾ ಸುಲ್ತಾನ್
ಮಾತನಾಡಿ, ಕಾರ್ಯಕ್ರಮದ ಯಶಸ್ವಿಗೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯವಾಗಿದೆ. ಪೋಲಿಯೋ ಲಸಿಕೆ ಹಾಕುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಶಾಲಾ ಮಕ್ಕಳ ಪ್ರಭಾತ ಪೇರಿ ಮತ್ತು ಗ್ರಾಮಗಳಲ್ಲಿ ಡಂಗೂರ ಸಾರುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಿಡಿಪಿಒ ಲಾಲಸಾಬ್ ಪೀರಾಪುರ, ತಾಪಂ ಎಡಿ ಎಂ.
ವಿಶ್ವನಾಥ, ನಗರಸಭೆ ಅಧಿಕಾರಿ ಶಿವಶಂಕರ, ದೈಹಿಕ ಶಿಕ್ಷಣಾಧಿಕಾರಿ ನಿಂಗಪ್ಪ ಪೂಜಾರಿ ಸೇರಿ ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.