ಅಂಗಡಿ-ಹೋಟೆಲ್ ಮೇಲೆ ದಾಳಿ: ಪ್ಲಾಸ್ಟಿಕ್ ಸಾಮಗ್ರಿ ವಶ
Team Udayavani, Feb 19, 2020, 4:57 PM IST
ಸುರಪುರ: ತಾಲೂಕಿನ ರತ್ತಾಳ, ದೇವಿಕೇರಿ, ರಂಗಂಪೇಠ-ತಿಮ್ಮಾಪುರ ಹಾಗೂ ಇನ್ನಿತರ ಸುತ್ತ ಮುತ್ತಲಿನ ಅಂಗಡಿ ಹೋಟೆಲ್ ಸೇರಿದಂತೆ 25ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದು, ಕೆಲವರಿಗೆ ದಂಡ ವಿಧಿ ಸಿ ನೋಟಿಸ್ ನೀಡಲಾಗಿದೆ.
ಕೆಲ ಅಂಗಡಿಗಳಿಂದ ಒಟ್ಟು 8000 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ ಹೇಳಿದರು. ತಾಲೂಕಿನ ವಿವಿಧ ಅಂಗಡಿ-ಹೋಟೆಲ್ ಗಳ ಮೇಲೆ ದಾಳಿ ನಡೆಸಿ ಮಾತನಾಡಿದ ಅವರು, 18 ವರ್ಷದೊಳಗಿನ ಶಾಲೆ ಬಿಟ್ಟ ಮಕ್ಕಳನ್ನು ಸರಕು ಸಾಗಾಣೆ ವಾಹನಗಳಲ್ಲಿ, ಹೊಲ ಗದ್ದೆ, ಕೂಲಿ, ಅಂಗಡಿ, ಹೋಟೆಲ್ ಸೇರಿದಂತೆ ಇನ್ನಿತರೆ ಕೆಲಸಗಳಲ್ಲಿ ಇಟ್ಟುಕೊಳ್ಳುವುದು ಕಂಡು ಬಂದರೆ ದಂಡದ ಜತೆಗೆ ಜೈಲು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶಾಲೆ ಬಿಟ್ಟ ಮಕ್ಕಳು ಕೆಲಸಕ್ಕಾಗಿ ಸರಕು ಸಾಗಣೆ ವಾಹನಗಳಲ್ಲಿ ಕರೆದುಕೊಂಡು ಹೋಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಮಕ್ಕಳ ಸಂರಕ್ಷಣೆ ಹಾಗೂ ಅನಾಹುತಗಳಾಗದಂತೆ ಮುನ್ನೆಚ್ಚರಿಕೆಯಾಗಿ ವಾಹನ ಮಾಲೀಕರಿಗೆ ಮೋಟರ್ ವಾಹನ ಕಾಯ್ದೆಯಡಿ ಆರ್‌ಟಿಒ ಮತ್ತು ಪೋಲಿಸ್ ಇಲಾಖೆಯವರು ಜಂಟಿಯಾಗಿ ತಪಾಸಣೆ ಮೂಲಕ ದಂಡದ ಜತೆಗೆ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ಎಚ್ಚರಿಸಿದರು.
ಬಾಲ ಕಾರ್ಮಿಕ ಪದ್ಧತಿ 1986ರ ಕಾಯ್ದೆಯಡಿ 6ರಿಂದ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ಮತ್ತು ಇತರೆ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿಸಿದ ಅವರು, ಅನಿರೀಕ್ಷಿತ ತಪಾಸಣೆ ಕೈಗೊಂಡು ಪತ್ತೆಯಾದ ಮಕ್ಕಳ ದಾಖಲೆಗಳನ್ನು ವೀಕ್ಷಿಸಿ ಅಂತಹ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಮಾಲೀಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ತಂಬಾಕು ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ, ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿ, ಕಾರ್ಮಿಕ ಇಲಾಖೆ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೋತ್ವಾಲ ಇತರರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.