ಸರ್ವರ ಅಭಿವೃದ್ಧಿ ಕಾಂಗ್ರೆಸ್‌ನಿಂದ ಸಾಧ್ಯ: ಶಾಸಕ ನಾಯಕ


Team Udayavani, Mar 5, 2018, 5:57 PM IST

yad-3.jpg

ಸುರಪುರ: ಕಳೆದ ಐದು ವರ್ಷದ ಆಡಳಿತಾವಧಿಯಲ್ಲಿ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಸಮಾನ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಸರ್ವ ಸಮುದಾಯಗಳ ಬಗ್ಗೆ ಅಪಾರ ಕಾಳಜಿ ಹೊಂದಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ನಗರದ ಡೊಣ್ಣಿಗೇರಾ ವಾರ್ಡ್‌ ಸಮೀಪದ ದರ್ಗಾ ಹಜರತ್‌ ಇಶಾ¤ಖ್‌ ಖಾದ್ರಿ ಮತ್ತು ಅಫ್ಜಲ್‌ ಉದ್‌ ದೌಲಾ ಬಹದ್ದೂರ್‌ ಮಸ್ಜಿದ್‌ ಹತ್ತಿರ 2015-16ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿª ಯೋಜನೆಯಲ್ಲಿ ನಿರ್ಮಿಸಲಾಗಿರುವ 5 ಲಕ್ಷ ರೂ ಮೊತ್ತದ ಶಾದಿಮಹಲ್‌ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. 

ಕ್ಷೇತ್ರದಲ್ಲಿ ಇದುವರೆಗೂ ಏಳು ಶಾದಿಮಹಲ್‌ ನಿರ್ಮಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಮಸೀದಿ, ವಸತಿ ನಿಲಯ, ಸ್ಮಶಾನ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾಣ, ಮೌಲಾನ್‌ ಆಂಗ್ಲ ಮಾಧ್ಯಮ ಶಾಲೆ ಮಂಜೂರು ಮಾಡಿಸಲಾಗಿದೆ. ಜತೆಗೆ ಅಲ್ಪಸಂಖ್ಯಾತ ಇಲಾಖೆ ಅಡಿಯಲ್ಲಿ ಅಲ್ಪಸಂಖ್ಯಾತ ಪ್ರದೇಶದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.

ಪುರಸಭೆ ಮಾಜಿ ಸದಸ್ಯ ಅಹ್ಮದ್‌ ಪಠಾಣ ಮಾತನಾಡಿ, ಆರು ತಿಂಗಳ ಹಿಂದೆ ಈ ಶಾದಿಮಹಲ್‌ ನಿರ್ಮಾಣಕ್ಕೆ ಶಾಸಕರಿಗೆ ಮನವಿ ಮಾಡಿಕೊಂಡಾಗ ಅವರು ಹಿಂದೆ-ಮುಂದೆ ನೋಡದೆ ತಕ್ಷಣ ಸ್ಪಂದಿಸಿ ತಮ್ಮ ಅನುದಾನದಲ್ಲಿ ಮುಸ್ಲಿಂ ಸಮುದಾಯಕ್ಕೆ ಈ ಸೌಲಭ್ಯ ಒದಗಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು. 

ನಿರ್ಮಿತಿ ಕೇಂದ್ರದ ಜೆಇ ಸಮೀತ್‌, ನಗರಸಭೆ ಸದಸ್ಯರಾದ ನಾಗಮ್ಮ ಕಲುಬುರ್ಗಿ, ವೆಂಕಟೇಶ ಹೊಸ್ಮನಿ, ಖಾಲೀದ್‌ ಅಹ್ಮದ್‌, ಮನೋಹರ ಕುಂಟೋಜಿ, ಮಲ್ಲಣ್ಣ ಸಾಹು ಮುಧೋಳ, ಮಾನಪ್ಪ ಪ್ಯಾಪ್ಲಿ, ದಾವುಲ್‌ ಚಿಟ್ಟಿವಾಲೆ, ಕಾಲೇ ಬಾಬು, ವ್ಯವಸ್ಥಾಪಕ ಯಲ್ಲಪ್ಪನಾಯಕ ಡೊಣ್ಣಿಗೇರೆ, ಅಬ್ದುಲ್‌ ಅಲೀಂ ಗೋಗಿ, ಪ್ರಮುಖರಾದ ಶಿವಕುಮಾರ ಎಲಿಗಾರ, ವೆಂಕೋಬ ಮಂಗಳೂರು, ಅಬ್ದುಲ್‌ ಗಫಾರ್‌ ನಗನೂರಿ, ಅಹ್ಮದ್‌ ಶರೀಫ್‌,ಸೋಫಿ ಪಠಾಣ, ಖಾಸೀಂ ಶರೀಫ್‌, ಬಂದೇಲಿ ಸಾಬ್‌, ಶಕೀಲ್‌ ಅಹ್ಮದ್‌ ಸೌದಾಗರ್‌, ತಮ್ಮಣ್ಣ ಜೆ, ದಶರಥ ಪ್ಯಾಪ್ಲಿ, ರಾಮಕೃಷ್ಣ, ಸೈಯ್ಯದ್‌ ಚಾಂದ್‌ ಪಾಶಾ, ಮೊಹ್ಮದ್‌ ಮೌಲಾಲಿ ಸೌದಾಗರ್‌, ಸೈಯದ್‌ ನೂರ್‌ ಪಾಶಾ ಇತರರು ಇದ್ದರು.

ಮತ್ತೂಮ್ಮೆ ಆಶೀರ್ವದಿಸಿ ತಾಲೂಕಿನಲ್ಲಿ ಹಾಲುಮತ, ವಾಲ್ಮೀಕಿ, ಬ್ರಾಹ್ಮಣ, ಕೋಲಿ ಗಂಗಾಮತ ಸೇರಿ ಇತರೆ ಜನಾಂಗಕ್ಕೆ ಸಮುದಾಯ ಭವನ ನಿರ್ಮಿಸಿಕೊಡಲಾಗಿದ್ದು, ಈ ಜನಪರ ಕಾಳಜಿ ಕಾಂಗ್ರೆಸ್‌ ಸರಕಾರ ಮಾತ್ರ ಹೊಂದಿದ್ದು, ಬೇರೆ ಪಕ್ಷಗಳಿಗೆ ಈ ಕಾಳಜಿ ಇಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಮತ್ತೂಮ್ಮೆ ನನಗೆ ಆಶೀರ್ವದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸಲು ಅನುಕೂಲ ಮಾಡಿಕೊಡಬೇಕು.
 ರಾಜಾ ವೆಂಕಟಪ್ಪ ನಾಯಕ, ಶಾಸಕ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.