ಲಂಚ ಪಡೆಯುತ್ತಿದ್ದ ಸರ್ವೇಯರ್ ಎಸಿಬಿ ಬಲೆಗೆ
ಒಟ್ಟು 17 ಸದಸ್ಯರ ಬಲ ಹೊಂದಿದ್ದು, ಕಾಂಗ್ರೆಸ್ ಬೆಂಬಲಿತ 9, ಬಿಜೆಪಿ ಬೆಂಬಲಿತ 8 ಸದಸ್ಯರನ್ನು ಹೊಂದಿತ್ತು.
Team Udayavani, Feb 10, 2021, 6:31 PM IST
ಯಾದಗಿರಿ: ನಗರದ ಹೊಸಳ್ಳಿ ಕ್ರಾಸ್ ಬಳಿಯ ಹೋಟೆಲ್ ವೊಂದರಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಸರ್ವೇಯರ್ ಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಚಾಮನಳ್ಳಿ ತಾಂಡದ ಸಂಜು ಎಂಬುವವರ ಹೊಲವನ್ನು ಅಳೆಯುವ ಸಂಬಂಧ ಸರ್ವೇಯರ್ ರಘುರಾಮ ಎನ್ನುವವರು 5 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಸಂಜೆ 2 ಸಾವಿರ ರೂ. ಪಡೆಯುವ ವೇಳೆ ಎಸಿಬಿ ಇನ್ಸ್‌ಪೆಕ್ಟರ್ ಗುರುಪಾದ ಬಿರಾದಾರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ ಸರ್ವೇಯರ್‌ರನ್ನು ವಶಕ್ಕೆ ಪಡೆದಿರುವ ಕುರಿತು ಅ ಧಿಕಾರಿಗಳು ಮಾಹಿತಿ ನೀಡಿದ್ದಾರೆ. ಲಂಚ ಪಡೆಯುತ್ತಿದ್ದ ವೇಳೆ ಬಳಸಿದ ಇತರೆ ವಸ್ತುಗಳನ್ನು ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕೊಂಕಲ್ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಡಗೇರಾ: ತಾಲೂಕಿನ ಕೊಂಕಲ್ ಗ್ರಾಪಂ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಭೀಮನಗೌಡ ಮಾ.ಪಾ., ಉಪಾಧ್ಯಕ್ಷ ರಾಗಿ ಗೌರಮ್ಮ ತಿಪ್ಪಣ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ವಡಗೇರಾ ತಹಶೀಲ್ದಾರ್ ಸುರೇಶ್ ಅಂಕಲಗಿ ತಿಳಿಸಿದ್ದಾರೆ. ಈ ಮೂಲಕ ಕೊಂಕಲ್ ಗ್ರಾಮ ಪಂಚಾಯಿತಿಯನ್ನು ಈ ಬಾರಿ ಕಾಂಗ್ರೆಸ್ ತನ್ನದಾಗಿಕೊಂಡಿದೆ.
ಒಟ್ಟು 17 ಸದಸ್ಯರ ಬಲ ಹೊಂದಿದ್ದು, ಕಾಂಗ್ರೆಸ್ ಬೆಂಬಲಿತ 9, ಬಿಜೆಪಿ ಬೆಂಬಲಿತ 8 ಸದಸ್ಯರನ್ನು ಹೊಂದಿತ್ತು. ಅಧ್ಯಕ್ಷ ಸ್ಥಾನಕ ಮಲ್ಲಿಕಾರ್ಜುನಗೌಡ ಭೀಮನಗೌಡ ಮಾ.ಪಾ. ಮತ್ತು ಅಂಬಿಕಾ ರಡ್ಡೆಪ್ಪ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಸಮ್ಮ ಚಂದ್ರಶೇಖರ್ ಮತ್ತು ಗೌರಮ್ಮ ತಿಪ್ಪಣ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ಪ್ರಕ್ರಿಯೆಯಲ್ಲಿ ಮಲ್ಲಿಕಾರ್ಜುನಗೌಡ ಮಾ.ಪಾ 9 ಮತಗಳನ್ನು ಪಡೆದರೆ, ಅಂಬಿಕಾ ರಡ್ಡೆಪ್ಪ 8 ಮತ ಪಡೆದು ಸೋಲು ಅನುಭವಿಸಿದರು.
ಉಪಾಧ್ಯಕ್ಷ ಸ್ಥಾನಕ್ಕೆ ಗೌರಮ್ಮ ತಿಪ್ಪಣ 9 ಮತ ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿ ಬಸಮ್ಮ 8 ಮತ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.