ಜಂತುಹುಳು ಬಾಧಿಸದಂತೆ ಮಾತ್ರೆ ನುಂಗಿ:ಮುದ್ನಾಳ
ಯಾವುದೇ ಅಡ್ಡಪರಿಣಾಮವಿಲ್ಲದ ಮಾತ್ರೆ ಮಕ್ಕಳು ಸೇವಿಸಬಹುದು.
Team Udayavani, Apr 17, 2021, 6:55 PM IST
ಯಾದಗಿರಿ: ಮಕ್ಕಳಲ್ಲಿ ಕಾಣಿಸಿಕೊಳ್ಳುವ ಜಂತುಹುಳುವಿನ ಬಾಧೆಯಿಂದ ಅವರನ್ನು ಹೊರತರುವ ನಿಟ್ಟಿನಲ್ಲಿ ಸರ್ಕಾರ ಜಂತುಹುಳು ನಿವಾರಣೆ ದಿನ ಆಚರಿಸುತ್ತಿದ್ದು, ತಪ್ಪದೇ ಎಲ್ಲ ಮಕ್ಕಳು ಮಾತ್ರೆ ನುಂಗಬೇಕು ಎಂದು ಶಾಸಕ ವೆಂಕಟರಡ್ಡಿ ಗೌಡ ಮುದ್ನಾಳ ಸಲಹೆ ನೀಡಿದರು. ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ವೈಜ್ಞಾನಿಕವಾಗಿ ಎಷ್ಟೇ ಮುಂದುವರಿದರೂ ಬಯಲು ಬಹಿರ್ದೆಸೆ ಮುಕ್ತವಾಗಿಲ್ಲ. ಇದರ ಪರಿಣಾಮ ಮಕ್ಕಳು ಲಾಡಿಹುಳು, ಜಂತುಹುಳು, ಕೊಕ್ಕೆ ಹುಳು ಬಾಧೆಯಿಂದ ನರಳುತ್ತಿದ್ದು, ಇದರಿಂದ ಮಕ್ಕಳ ಜ್ಞಾಪಕ ಶಕ್ತಿ, ಕಲಿಕೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹಾಗಾಗಿ ಇದರ ನಿವಾರಣೆಗೆ ಸರ್ಕಾರ ವರ್ಷಕ್ಕೆ ಎರಡು ಬಾರಿ ಅಲೆºಂಡಾಜೋಲ್ ಮಾತ್ರೆ ವಿತರಿಸುತ್ತಿದೆ ಎಂದರು. ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಮಾತನಾಡಿ, ಮಕ್ಕಳು ಅಪೌಷ್ಟಿಕತೆ, ರಕ್ತಹೀನತೆಯಿಂದ ನರಳುವುದರಿಂದ ಹೊರಬರಲು ವರ್ಷಕ್ಕೆ ಎರಡು ಬಾರಿ ಜಂತುಹುಳು ನಿಯಂತ್ರಕ ಮಾತ್ರೆ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರು ಹೆಚ್ಚಿನ ಗಮನ ಹರಿಸಬೇಕು ಎಂದರು.
ಮಕ್ಕಳನ್ನು ರೋಗದಿಂದ ಹೊರತರುವ ನಿಟ್ಟಿನಲ್ಲಿ ಸರ್ಕಾರ ಪ್ರತಿ ವರ್ಷದಲ್ಲಿ ಎರಡು ಬಾರಿ 1 ವರ್ಷದಿಂದ 19 ವರ್ಷದವರೆಗಿನ ಮಕ್ಕಳಿಗೆ ಜಂತು ಹುಳುವಿನ ಮಾತ್ರೆ ಉಚಿತವಾಗಿ ವಿತರಿಸುತ್ತದೆ. ಯಾವುದೇ ಅಡ್ಡಪರಿಣಾಮವಿಲ್ಲದ ಮಾತ್ರೆ ಮಕ್ಕಳು ಸೇವಿಸಬಹುದು. ಮಾತ್ರೆ ನುಂಗುವ ಬದಲಾಗಿ, ಚೀಪಿದರೆ ಹೆಚ್ಚು ಲಾಭ ದೊರೆಯುತ್ತದೆ. ಆದ್ದರಿಂದ ತಂದೆ-ತಾಯಿ, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಈ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ
ಮಾತ್ರೆ ತೆಗೆದುಕೊಳ್ಳುವಂತೆ ಮಾಡಬೇಕು ಎಂದರು.
ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ್, ನಗರಸಭೆ ಪೌರಾಯುಕ್ತ ಬಿ.ಟಿ. ನಾಯಕ, ಆರ್‌ಸಿಎಚ್ ಡಾ| ಸೂರ್ಯಪ್ರಕಾಶ ಕಂದಕೂರು, ಡಾ| ಎಸ್.ಕೆ. ವಿನಿತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದನ್, ಸಿಡಿಪಿಒ ವೀರಪ್ಪ, ಕಾರ್ಯಕ್ರಮ ಸಹಾಯಕ ಅಧಿಕಾರಿ ಮಹೇಂದ್ರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.