ಬೀದಿ ವ್ಯಾಪಾರಿಗಳಿಗೆ “ಪಿಎಂ ಸ್ವನಿಧಿ’ ಸಹಕಾರಿ
Team Udayavani, Mar 5, 2021, 7:25 PM IST
ಯಾದಗಿರಿ: ಕೋವಿಡ್19 ಹಾಗೂ ಲಾಕ್‌ಡೌನ್ ಅವ ಧಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಜೀವನೋಪಾಯದ ಮೇಲೆ ಪರಿಣಾಮ ಬೀರಿದ್ದು, ಬೀದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಹಾಗೂ ಅವರ ವ್ಯವಹಾರವನ್ನು ಪುನರ್ ಪ್ರಾರಂಭಿಸಲು ಪಿಎಂ ಸ್ವನಿಧಿ ಯೋಜನೆ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಧಿಕಾರಿ ಡಾ| ರಾಗಪ್ರಿಯ ಆರ್. ಅಭಿಪ್ರಾಯಪಟ್ಟರು. ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ನಗರಸಭೆ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಇವರ ಸಂಯುಕ್ತಾಶ್ರದಲ್ಲಿ ನಡೆದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿಎಂ ಸ್ವನಿಧಿ ) ಡಿಜಿಟಲ್ ವಹಿವಾಟಿನ ತರಬೇತಿ ವಿಶೇಷ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿಜಿಟಲ್ ಯುಗದಲ್ಲಿ ಬೀದಿ ಬದಿ ವ್ಯಾಪಾರಿಗಳು ಸಹ ಕ್ಯಾಶ್ ಬ್ಯಾಕ್ ವಿಧಾನವನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಈ ಯೋಜನೆಯ ವಿಧಾನದ ಬಗ್ಗೆ ಬೀದಿ ಬದಿ ವ್ಯಾಪಾರಿಗಳಿಗೆ ಮಾಹಿತಿ ನೀಡುವುದು ಅವಶ್ಯಕವಾಗಿದೆ ಎಂದು ಹೇಳಿದರು. ಈ ಯೋಜನೆಯ ಲಾಭ ಪಡೆಯುವುದಕ್ಕಾಗಿ ಆಧಾರ ಕಾರ್ಡ್, ಬೀದಿ ಬದಿ ವ್ಯಾಪಾರಿ ಎಂಬ ಸರ್ಟಿμಕೇಟ್ ಸೇರಿದಂತೆ ಇತರ ದಾಖಲಾತಿಗಳನ್ನು ನೀಡಿ ಸಾಲದ ಸೌಲಭ್ಯವನ್ನು ಪಡೆಯಬಹುದು. ಜಿಲ್ಲೆಯಲ್ಲಿ ಹೀಗಾಗಲೇ ಪಿ.ಎಂ. ಸ್ವನಿ ಯೋಜನೆಯಡಿ 2500 ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಸುಮಾರು 1500 ಅರ್ಜಿಗಳಿಗೆ ಸಾಲದ ಸೌಲಭ್ಯ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಅರ್ಜಿಗಳಿಗೂ ಸಾಲ ನೀಡುವ ವ್ಯವಸ್ಥೆ ಮಾಡಲಾಗುತ್ತದೆಂದು ಹೇಳಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ವಿಲಾಸ ಬಿ.ಪಾಟೀಲ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳು ತುತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಅದಕ್ಕಾಗಿಯೇ ಪ್ರಧಾನಮಂತ್ರಿಯವರು ಈ ಸ್ವನಿ ಯನ್ನು ಜಾರಿಗೊಳಿಸಿದ್ದಾರೆ. ಅರ್ಹ ವ್ಯಾಪಾರಿಗಳೆಲ್ಲರೂ ಈ ನಿ ಯನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಬೇಕೆಂದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅ ಧಿಕಾರಿ ರೇಖಾ ಮ್ಯಾಗೇರಿ ಮಾತನಾಡಿ, ಪಿ.ಎಂ ಸ್ವನಿ ಯೋಜನೆಯಲ್ಲಿ ಅತಿ ಕಡಿಮೆ ಬಂಡವಾಳ ಹೂಡಿ ವ್ಯಾಪಾರ ಮಾಡಬಹುದಾಗಿದೆ. ಹೀಗಾಗಿ ಎಲ್ಲ ಬೀದಿ ಬದಿ ವ್ಯಾಪಾರಿಗಳು ಈ ಯೋಜನೆಯ ಲಾಭ ಪಡೆಯಬೇಕೆಂದು ಹೇಳಿದರು. ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಎಂ.ಕಲಾಲ, ಪೌರಾಯುಕ್ತ ಭೀಮಣ್ಣ ಟಿ.ನಾಯಕ, ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಾಂಚಾಳ, ಕರ್ನಾಟಕ ಗ್ರಾಮೀಣ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಹನುಮಂತಪ್ಪ, ಡಿ.ಎಸ್.ಎಚ್, ಎಸ್.ಬಿ.ಐ ಮುಖ್ಯ ವ್ಯವಸ್ಥಾಪಕ ಶ್ರೀನಿವಾಸ್, ನಗರ ಅಭಿಯಾನ ವ್ಯವಸ್ಥಾಪಕ ವಿಠೊಬ ಬಿ, ವಿಜಯಕುಮರ್ ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.