ಸಾಮೂಹಿಕ ದಲಿತ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ
Team Udayavani, Feb 1, 2019, 8:23 AM IST
ಕೆಂಭಾವಿ: ಸಂವಿಧಾನ ಸಮರ್ಪಣಾ ದಿನದಂದು ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ, ಹತ್ತಿಗುಡೂರ ಜೆಸ್ಕಾಂ ಕಚೇರಿಯಲ್ಲಿ ಹಾಗೂ ಸುರಪುರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಡಾ| ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗುರುವಾರ ಪಟ್ಟಣದ ಡಾ| ಅಂಬೇಡ್ಕರ್ ವೃತ್ತದಲ್ಲಿ ಸಾಮೂಹಿಕ ದಲಿತ ಸಂಘಟನೆಗಳ ವತಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಶರಣಪ್ಪ ಗಾಯಕವಾಡ, ಇತ್ತೀಚಿಗೆ ಸರ್ಕಾರಿ ಸಮಾರಂಭಗಳಲ್ಲಿ ಹಾಗೂ ಖಾಸಗಿ ರಂಗಗಳಲ್ಲಿ ಡಾ| ಅಂಬೇಡ್ಕರ್ ಅವರಿಗೆ ಅಪಮಾನ ಪ್ರಕರಣ ಜಾಸ್ತಿಯಾಗುತ್ತಿದ್ದು, ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಎತ್ತಿ ತೋರಿಸುತ್ತಿದೆ. ಇತ್ತೀಚಿಗೆ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಡಾ| ಅಂಬೇಡ್ಕರ್ ಭಾವಚಿತ್ರ ಇಡದೆ ಅಗೌರವ ತೋರಿದ ಭೀ. ಗುಡಿ ಹಾಗೂ ಹತ್ತಿಗುಡೂರ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕ್ಷಮಾಪಣೆ ಕೇಳಬೇಕು ಮತ್ತು ಸುರಪುರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲೂ ಡಾ| ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದು, ರಾಜಕೀಯ ನಾಯಕರೂ ಈ ಕುರಿತು ಕ್ಷಮೆ ಯಾಚಿಸಬೇಕು ಎಂದರು.
ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಕಂದಾಯ ಅಧಿಕಾರಿ ರಾಜಾಸಾಬ ಅವರ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಲಾಲಪ್ಪ ಹೊಸಮನಿ, ಸುರೇಶ ಮಾಳಳ್ಳಿಕರ್, ಜುಮ್ಮಣ್ಣ ಕಟ್ಟಿಮನಿ, ಶಿವಶರಣ ನಾಗರೆಡ್ಡಿ, ಧರ್ಮಣ್ಣ ಹೊಸಮನಿ, ಬಸವಣ್ಣೆಪ್ಪ, ನಿಂಗರಾಜ ಮೂಲಿಮನಿ, ಭೀಮಣ್ಣ ಬಾಚಿಮಟ್ಟಿ, ಶಿವಪ್ಪ ಕಂಬಾರ, ಸಿದ್ದಪ್ಪ ಹಾದಿಮನಿ, ಹುಲಗಪ್ಪ ಸೇರಿದಂತೆ ವಿವಿಧ ಸಾಮೂಹಿಕ ದಲಿತ ಸಂಘಟನೆಗಳ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.