ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಿ

Team Udayavani, Sep 8, 2020, 6:08 PM IST

yg-tdy-1

ಸಾಂದರ್ಭಿಕ ಚಿತ್ರ

ಯಾದಗಿರಿ: ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಎಂದು ಜಿಲ್ಲಾಪಂಚಾಯತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಹೇಳಿದರು.

ಜಿಲ್ಲಾ ಪಂಚಾಯತ್‌ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಮೆಥೋಡಿಸ್ಟ್‌ ಚರ್ಚ್‌ ಕೆ.ಎನ್‌. ಎಚ್‌. ಹಾಲ್‌ನಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾಜದ ಬೆಳವಣಿಗೆಗೆ ಶಿಕ್ಷಕರ ಸೇವೆ ಅಪಾರವಾಗಿದೆ. ಸಮಾಜದ ಒಳಿತಿಗೆ ನಾವೆಲ್ಲರೂ ಕೈ ಜೋಡಿಸಬೇಕು. ಪ್ರಶಸ್ತಿ ಶಿಕ್ಷಕರ ಜವಾಬ್ದಾರಿ ಮತ್ತಷ್ಟು ಹೆಚ್ಚಿಸಿದ್ದು ದೇಶವನ್ನು ಮತ್ತಷ್ಟು ಸುಭದ್ರ ಮತ್ತು ವಿವಿಧ ಕ್ಷೇತ್ರದಲ್ಲಿ ಗಣನೀಯವಾಗಿ ಸಾಧನೆ ಮಾಡಲು ಮಕ್ಕಳಿಗೆ ಉತ್ತಮ ಬೋಧನೆ ಮಾಡಿ ಪ್ರೋತ್ಸಾಹಿಸುವುದು ಶಿಕ್ಷಕರ ಕರ್ತವ್ಯವಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಮಾತನಾಡಿ, ಗುರು ನಿರಂತರವಾಗಿ ಓದುಗನಾಗಿರಬೇಕು ಅಂದಾಗ ಮಾತ್ರ ಶಿಷ್ಯರೂ ನಿರಂತರ ಓದುಗರಾಗಿರುತ್ತಾರೆ.  ಶಿಷ್ಯರ ಮುಂದಿನ ಭವಿಷ್ಯ ರೂಪಿಸಿ, ಅಮೂಲ್ಯ ರತ್ನವನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಗುರು ತಪ್ಪಿದರೆ ಸಮಾಜ ಹಾಳಾಗುತ್ತದೆ.ವಿದ್ಯಾರ್ಥಿಗಳಿಗೆ ದೃಢ ನಿಶ್ಚಿತ, ಆತ್ಮ ವಿಶ್ವಾಸ, ಸ್ವಾವಲಂಬಿಯಾಗಿ ಬದುಕಲು ಕಲಿಸಬೇಕು ಎಂದರು.

ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸಿಇಒ ಶಿಲ್ಪಾ ಶರ್ಮಾ, ಡಿಡಿಪಿಐ ಶ್ರೀನಿವಾಸರಡ್ಡಿ, ಡಯಟ್‌ ಕಾಲೇಜಿನ ಪ್ರಾಂಶುಪಾಲ ನಾಗರತ್ನ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲ ರಡ್ಡಿ ಪಾಟೀಲ, ಶಿಕ್ಷಣಾ ಧಿಕಾರಿಚಂದ್ರಕಾಂತರಡ್ಡಿ, ಹಳ್ಳೆಪ್ಪ ಸೇರಿದಂತೆ ವಿವಿಧ ಶಾಲಾ ಮುಖ್ಯಗುರುಗಳು, ಶಿಕ್ಷಕರು ಹಾಜರಿದ್ದರು. ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಸಂಗೀತ ಶಿಕ್ಷಕ ಶರಣಬಸವ ವಠಾರ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಮಲ್ಲಿಕಾರ್ಜುನ ವಂದಿಸಿದರು.

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ: ಸುರಪುರ ತಾಲೂಕಿನ ಹೊಸ ಸಿದ್ದಾಪುರ ಸ.ಕಿ.ಪ್ರಾ. ಶಾಲೆಯ ಸುರೇಶ, ಯಾದಗಿರಿ ತಾಲೂಕಿನ ವರ್ಕನಳ್ಳಿ ಸ.ಉರ್ದು  ಕಿ.ಪ್ರಾ. ಶಾಲೆಯ ಖಮರುನ್ನಿಸಾ ಬೇಗಂ, ಯಾದಗಿರಿ ತಾಲೂಕಿನ ಬಂಗಾರಮ್ಮನಗುಟ ಸ.ಕಿ.ಪ್ರಾ. ಶಾಲೆಯ ಲಲಿತಮ್ಮ, ಸುರಪುರ ತಾಲೂಕಿನ ಯಾಳಗಿ ಸ.ಮಾ.ಪ್ರಾ. ಶಾಲೆಯ ಸಿದ್ಧಪ್ಪ ಧನಗೊಂಡ, ಖುರೇಶ ಮೊಹಲ್ಲಾ ಸ.ಹಿ.ಪ್ರಾ. ಶಾಲೆಯ ಸ್ಯಾಮುಯಲ್‌, ಶಹಾಪುರ ತಾಲೂಕಿನ ಬುದುನೂರು ಸ.ಹಿ.ಪ್ರಾ. ಶಾಲೆಯ ರಾಮಚಂದ್ರ, ಯಾದಗಿರಿ ತಾಲೂಕಿನ ಕಂದಕೂರ ಸ.ಮಾ.ಪ್ರಾ. ಶಾಲೆಯ ಸಾವಿತ್ರಿ, ಸುರಪುರ ತಾಲೂಕಿನ ಹುಣಸಗಿ ಬಾಲಕಿಯರ. ಸ .ಪ್ರೌ.ಶಾಲೆಯ ದೈಹಿಕ ಶಿಕ್ಷಕ ನಾಗನಗೌಡ, ಹಗರಟಗಿ ಸ.ಪ್ರೌ.ಶಾಲೆಯ ಶಿವಲಿಂಗಪ್ಪ ಎಸ್‌. ಮಾರನಾಳ, ಶಹಾಪುರ ತಾಲೂಕಿನ ಉರ್ದು ನಗರ ಸ.ಪ್ರೌ.ಶಾಲೆಯ ನವೀದ್‌ ಅಂಜುಮ, ಶಿರವಾಳ ಸ.ಪ್ರೌ. ಶಾಲೆಯ ಅನುಪಮ, ಯಾದಗಿರಿ ತಾಲೂಕಿನ ಹೊನಗೇರಾ ಸ.ಪ್ರೌ. ಶಾಲೆಯ ಮಹಾವೀರ ಬಿ.ಬಂಬಾಡಿ. ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಕೋವಿಡ್ ವಾರಿಯರ್ ಆಗಿ ಕಾರ್ಯನಿರ್ವಹಿಸಿದ ಸ್ಕೌಟ್ಸ್‌ ಮತ್ತು ಗೈಡ್ಸ್‌ಗಳನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.