ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ
Team Udayavani, May 3, 2022, 3:41 PM IST
ಶಹಾಪುರ: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕಾರ್ಮಿಕರ ಪರಿಶ್ರಮ ಮಹತ್ವದ್ದಾಗಿದೆ. ಸಂಘಟನೆಗಳು, ಜನಪ್ರತಿನಿಧಿಗಳು, ಚಿಂತಕರು, ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ಕಾರ್ಮಿಕರ ಹಿತ ಕಾಯಬೇಕು ಎಂದು ಏಕದಂಡಿಗೆ ಮಠದ ಕಾಳಹಸ್ತೇಂದ್ರ ಸ್ವಾಮಿಗಳು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತರಕ್ಷಣಾ ಸಂಘದಿಂದ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಇ-ಶ್ರಮಕಾರ್ಡ್ ವಿತರಣೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಕಾಯಕ ತತ್ವವೇ ಮೂಲ ಆಶಯ ವಿಟ್ಟುಕೊಂಡು ದುಡಿಯುತ್ತಿರುವ ಕಾರ್ಮಿಕರಿಗೆ ಶೋಷಣೆಯಾಗದಂತೆ ನೋಡಿಕೊಳ್ಳಬೇಕು. ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಸಂಘಟನೆ, ಸಂಘ, ಸಂಸ್ಥೆಗಳ ಪಣ ತೊಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿ ದುಡಿಯುವ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೆ ಸಿಗಬೇಕು. ಕಾರ್ಮಿಕರ ಬಗ್ಗೆ ಕೇವಲ ಅನುಕಂಪ ಬೇಡ, ಅವಕಾಶ ಕಲ್ಪಿಸುವ ಕೆಲಸವಾಗಬೇಕು ಎಂದರು.
ಗ್ರಾಮಾಂತರ ಸಿಪಿಐ ಚೆನ್ನಯ್ಯ ಹಿರೇಮಠ ಮಾತನಾಡಿ, ರಾಜ್ಯ ಸರ್ಕಾರ ಕಲ್ಪಿಸಿದ ಸೌಲಭ್ಯಗಳನ್ನು ಕಾರ್ಮಿಕರು ಸಮರ್ಪಕವಾಗಿ ಪಡೆಯುವ ಮೂಲಕ ಆರ್ಥಿಕವಾಗಿ ಸುಸ್ಥಿತಿಗೆ ಬರಬೇಕು. ಕಾರ್ಮಿಕ ಸಂಘಟನೆಗಳು ಕಾರ್ಮಿಕರಿಗೆ ಸೌಲಭ್ಯ ಒದಗಿಸಿಕೊಡುವಲ್ಲಿ ಹೆಚ್ಚು ಪರಿಶ್ರಮವಹಿಸಬೇಕು. ಅಲ್ಲದೇ ಕಾರ್ಮಿಕ ಕುಟುಂಬದವರಿಗೆ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಬದುಕಿಗೆ ಭದ್ರತೆಯಂತಹ ಸೌಲಭ್ಯ ದೊರಕಬೇಕು ಎಂದರು.
ಗುರುಪಾದ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಮೌನೇಶ್ವರ ಸ್ವಾಮೀಜಿ ಸೇರಿದಂತೆ ದೇಶಮುಖ ಕಾಲೇಜಿನ ಮುಖ್ಯಸ್ಥ ಶಿವರಾಜ ದೇಶಮುಖ, ರಾಯಪ್ಪಗೌಡ ದರ್ಶನಾಪುರ, ಗುರುನಾಥರಡ್ಡಿಗೌಡ ಸಿಂಗನಹಳ್ಳಿ, ಸಂಗಮೇಶ ಮುಡಬೂಳ, ಸಾಯಬಣ್ಣ ಪುರೆಲ ಉಪಸ್ಥಿತರಿದ್ದರು. ಸಮಿತಿ ಸಂಸ್ಥಾಪಕ ಅಧ್ಯಕ್ಷ ಮೌನೇಶ ಸುರಪುರಕರ್ ಅಧ್ಯಕ್ಷತೆ ವಹಿಸಿದ್ದರು. ಇ-ಶ್ರಮ ಹಾಗೂ ಕಿಟ್ ವಿತರಣೆ ಮತ್ತು ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.