ಪಟಾಕಿ ಗೊಂದಲ ನಿವಾರಿಸಲು ಮನವಿ
Team Udayavani, Nov 9, 2020, 8:03 PM IST
ಯಾದಗಿರಿ: ದೀಪಾವಳಿ ನಿಮಿತ್ತ ಪಟಾಕಿ ಖರೀದಿಸಲು ಮತ್ತು ಮಾರಾಟ ಮಾಡುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿದ ಆದೇಶ ಗೊಂದಲಮಯವಾಗಿದ್ದು, ಇದು ಪಟಾಕಿ ಮಾರಾಟಗಾರರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ತಕ್ಷಣ ಆದೇಶದಲ್ಲಿರುವ ಗೊಂದಲ ಪರಿಹರಿಸಲು ಪಟಾಕಿ ಮಾರಾಟಗಾರರ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾಡಳಿತ-ರಾಜ್ಯ ಸರ್ಕಾರ ಆದೇಶದ ಪ್ರಕಾರ ಪಟಾಕಿ ಮಾರಾಟ ಮಾಡುತ್ತಿದ್ದೇವೆ. ಆದರೆ ಈ ವರ್ಷ ದೀಪಾವಳಿ ಆಚರಣೆ ಸಂಬಂಧ ಮಾರ್ಗಸೂಚಿಗಳ ಪ್ರಕಾರ ಪಟಾಕಿ ಮಾರಾಟದ ಮಳಿಗೆ ನಿಗದಿತ ಅವಧಿವರೆಗೆ ಮಾತ್ರ ತೆರೆದಿರತಕ್ಕದ್ದು, ಪಟಾಕಿ ಅಂಗಡಿ ಮಾರಾಟ ಮಾಡುವ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸರ್ ಮಾಡುವುದು ಹಾಗೂ ಖರೀದಿಗೆ ಬರುವವರಿಗೆ ಸ್ಯಾನಿಟೈಸರ್-ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರ ಗುರುತಿಸುವುದು ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ಆದೇಶಿಸಿದ್ದು, ಮುಖ್ಯಮಂತ್ರಿಗಳು ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದು ನಿಷೇಧ ಮಾಡಿ ಗೊಂದಲಮಯ ಆದೇಶ ಮಾಡಿದ್ದಾರೆ.
ಒಂದೆಡೆ ಪಟಾಕಿ ಮಾರಾಟ- ಸಿಡಿಸುವುದು ನಿಷೇಧ ಎನ್ನುತ್ತಾರೆ. ಇನ್ನೊಂದೆಡೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡುವಂತೆ ತಿಳಿಸಿದ್ದಾರೆ. ಇದು ಜನರು ಮತ್ತು ಮಾರಾಟಗಾರರಲ್ಲಿ ಗೊಂದಲವನ್ನುಂಟು ಮಾಡಿದ್ದು, ಸರಿಪಡಿಸಲು ಮನವಿ
ಮಾಡಿದರು. ಶ್ರವಣ ಕುಮಾರ ನಿರ್ಮಲಕರ್ ಮನವಿ ಸಲ್ಲಿಸಿದರು. ವರ್ತಕರಾದ ಸೋಹನ್ ಪ್ರಸಾದ, ರವೀಂದ್ರ ಬುಕ್ಕಾ, ನಾಗರಾಜ ಜಿವಣಗಿ, ಅರುಣ ಕುಮಾರ ದಾಸನಕೇರಿ, ಫಯಾಜ್ ಸನಸಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.