ಅಭಿವೃದ್ಧಿಗೆ ಮೊದಲ ಆದ್ಯತೆ
Team Udayavani, May 11, 2018, 12:08 PM IST
ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಪ್ತಗಿರಿ ರಾಮಚಂದ್ರ ಗೌಡ ಅವರು ಗುರುವಾರ ಓಕಳಿಪುರ, ರಾಮಚಂದ್ರ ಪುರ ಹಾಗೂ ಸುತ್ತಮುತ್ತಲ ಭಾಗಗಳಲ್ಲಿ ಬಿರುಸಿನ ಮತಯಾಚನೆ ನಡೆಸಿದರು.
ಬಹಿರಂಗ ಪ್ರಚಾರಕ್ಕೆ ಗುರುವಾರ ಕೊನೆಯ ದಿನವಾಗಿದ್ದರಿಂದ ಚುನಾವಣಾ ಪ್ರಚಾರ ರಂಗೇರಿತ್ತು. ಬಿಜೆಪಿ ಕೇಂದ್ರ ಕಚೇರಿಯಿಂದ ಗಾಂಧಿನಗರದವರೆಗೆ ನಡೆದ ಬೈಕ್ ರ್ಯಾಲಿಯಲ್ಲಿ ಸಚಿವ ಪೊನ್ನು ರಾಧಾಕೃಷ್ಣ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡು, ಸಪ್ತಗಿರಿ ರಾಮಚಂದ್ರ ಗೌಡ ಅವರಿಗೆ ಮತ ನೀಡವಂತೆ ಕೋರಿದರು. ಅಲ್ಲದೆ, ವಿವಿಧ ವಾರ್ಡ್ಗಳಲ್ಲಿ ಸಪ್ತಗಿರಿ ಗೌಡ ಅಭಿಮಾನಿಗಳು ಪ್ರಚಾರ ಕಾರ್ಯ ನಡೆಸಿದರು.
ನೂರಾರು ಬೆಂಬಲಿಗರು ಹಾಗೂ ಕಾರ್ಯಕರ್ತರ ಜತೆಗೂಡಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಸಪ್ತಗಿರಿ ರಾಮಚಂದ್ರ ಗೌಡ, ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ ತಮ್ಮನ್ನು ಶಾಸಕನಾಗಿ ಆಯ್ಕೆ ಮಾಡುವಂತೆ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು.
ಹಾಲಿ ಶಾಸಕರ ನಿರ್ಲಕ್ಷ್ಯದಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ ಅವರು, ಈ ಬಾರಿ ಅಭಿವೃದ್ಧಿ ಗುರಿಯೊಂದಿಗೆ ಸೇವೆ ಮಾಡಲು ಅವಕಾಶ ಕಲ್ಪಿಸಿದರೆ, ಜನರ ಅಭಿಪ್ರಾಯ, ಆದ್ಯತೆಗಳಿಗೆ ಅನುಗುಣವಾಗಿ ಮೂಲ ಸೌಕರ್ಯ ಕಲ್ಪಿಸಲು ಬದ್ಧನಾಗಿದ್ದೇನೆ. ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳಿಂದ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಶಾಸಕನಾಗಿ ಆಯ್ಕೆಯಾದರೆ ಮೊದಲು ಉತ್ತಮ ರಸ್ತೆಗಳನ್ನು ನಿರ್ಮಿಸುವತ್ತ ಗಮನಹರಿಸುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.