ಹೈಟೆಕ್ ಗ್ರಂಥಾಲಯ ನಿರ್ಮಾಣಕ್ಕೆ ಅಡಿಗಲ್ಲು
Team Udayavani, Jun 13, 2020, 7:33 AM IST
ಯಾದಗಿರಿ: ಯಾದಗಿರಿ ನಗರದ ಗ್ರಾಮೀಣ ಪೊಲೀಸ್ ಠಾಣೆ ರಸ್ತೆಯ ವಿಶ್ವರಾಧ್ಯ ನಗರದಲ್ಲಿ ಹೈಟೆಕ್ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ. ಚವ್ಹಾಣ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ಕೆಕೆಆರ್‌ಡಿಬಿ ಯೋಜನೆಯಡಿ 1.70 ಕೋಟಿ ರೂ. ಅನುದಾನದಲ್ಲಿ ಹೈಟೆಕ್ ಗ್ರಂಥಾಲಯ ಕಟ್ಟಡ ನಿರ್ಮಾಣ ವಾಗಲಿದೆ ಎಂದರು. ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಜಿಲ್ಲಾ ಗ್ರಂಥಾಲಯವು ಡಿಜಿಟಲೀಕರಣವಾಗಿದ್ದು, ವಿದ್ಯಾರ್ಥಿ ಗಳಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಪ್ರತ್ಯೇಕ ವಿಭಾಗಗಳನ್ನು ಹೊಂದಿರುತ್ತವೆ. ಈಗಾಗಲೇ ಯಾದಗಿರಿ ಜಿಲ್ಲೆಯ 7 ಡಿಜಿಟಲ್ ಗ್ರಂಥಾಲಯಗಳಲ್ಲಿ ಲಾಕ್ ಡೌನ್ ಅವಧಿಯಲ್ಲಿ ಸುಮಾರು 8 ಸಾವಿರ ಜನ ನೋಂದಣಿಯಾಗಿ ಮನೆಯಿಂದಲೇ ಕಂಪ್ಯೂಟರ್, ಟ್ಯಾಬ್, ಮೊಬೈಲ್ ಮೂಲಕ ಗ್ರಂಥಾಲಯದ ಉಪಯೋಗ ಪಡೆಯುತ್ತಿದ್ದಾರೆ ಎಂದರು.
ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಎಂ.ಎಸ್.ರೆಬಿನಾಳ ಮಾತನಾಡಿ, ಕೆಕೆಆರ್‌ಡಿಬಿ ಯೋಜನೆಯಡಿ ಶಹಾಪುರ, ಗುರುಮಠಕಲ್‌ನಲ್ಲಿ ತಲಾ 95 ಲಕ್ಷ ರೂ., ಹುಣಸಗಿಯಲ್ಲಿ 55 ಲಕ್ಷ ರೂ., ಸುರಪುರದಲ್ಲಿ 50 ಲಕ್ಷ ರೂ.ವೆಚ್ಚದ ಗ್ರಂಥಾಲಯ ಕಾಮಗಾರಿ ಪ್ರಗತಿಯಲ್ಲಿವೆ. ಇನ್ನು ಗ್ರಾಮೀಣ ಮಟ್ಟದಲ್ಲಿ ತಲಾ 25 ಲಕ್ಷ ರೂ. ವೆಚ್ಚದಲ್ಲಿ ಸಾರ್ವಜನಿಕ ಗ್ರಂಥಾಲಯ ಕಾಮಗಾರಿ ಪ್ರಗತಿಯಲ್ಲಿವೆ ಎಂದರು.
ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಪಂ ಸಿಇಒ ಶಿಲ್ಪಾ ಶರ್ಮಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.