ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ


Team Udayavani, Jan 26, 2018, 4:59 PM IST

yad-1.jpg

ಯಾದಗಿರಿ: ಮಹದಾಯಿ ಯೋಜನೆ ಜಾರಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ
ಯಾದಗಿರಿ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ಸಿಗಲಿಲ್ಲ.

ಜಿಲ್ಲೆಯಾದ್ಯಂತ ಎಂದಿನಂತೆ ವ್ಯಾಪಾರ ವಹಿವಾಟು, ವಾಹನ ಸಂಚಾರ ಎಂದಿನಂತೆ ಸುಗಮವಾಗಿ ಕಂಡು ಬಂದಿತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರಲಿಲ್ಲ. ಶಹಾಪುರ, ಸುರಪುರ, ಗುರುಮಠಕಲ್‌ ಸೇರಿದಂತೆ ಜಿಲ್ಲೆಯಾದ್ಯಂತ ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

 ಮಹದಾಯಿ ಹೋರಾಟಕ್ಕೆ ಬೆಂಬಲಿಸಿ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ಕಾರ್ಯಕರ್ತರು ನಗರದ ರೈಲ್ವೆ ನಿಲ್ದಾಣದಲ್ಲಿ ಉದ್ಯಾನ ಎಕ್ಸ್‌ಪ್ರೆಸ್‌ ರೈಲು ತಡೆಯಲು ಯತ್ನಿಸಿದಾಗ ಪೊಲೀಸರು ಕರವೇ ಕಾರ್ಯಕರ್ತರನ್ನು ಬಂಧಿಸಿದರು.

ಈ ಸಂದರ್ಭದಲ್ಲಿ ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ಮಾತನಾಡಿ, ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಶೀಘ್ರ ಜಾರಿಗೊಳಿಸಬೇಕೆಂದು ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ಆಗ್ರಹಿಸಿದರು.

ಗದಗ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ಇತರೆ ಜಿಲ್ಲೆಗಳ ರೈತರು ನೀರಿಲ್ಲದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಬೆಳೆಗಳಿಗೆ ನೀರಿಲ್ಲದೆ ಬೆಳೆ ಒಣಗುತ್ತಿವೆ.

ರೈತರ ಸ್ಥಿತಿ ಗಂಭೀರವಾಗಿದೆ. ಜನ ಜಾನುವಾರುಗಳಿಗೆ ನೀರಿಲ್ಲದೆ ಪರಿತಪಿಸುತ್ತಿವೆ. ಆದ್ದರಿಂದ ನೀರಿನ ವಿಷಯದಲ್ಲಿ ರಾಜಕೀಯ ಮಾಡದೆ, ಕೂಡಲೇ ಈ ಯೋಜನೆ ಜಾರಿಗೊಳಿಸಬೇಕೆಂದು ಅವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಶರಣು ಇಟಗಿ, ಸಿದ್ದು ರೆಡ್ಡಿ, ಸಿದ್ಧಲಿಂಗರೆಡ್ಡಿ, ಅಜಯ್‌, ಅರುಣ್‌, ರವಿ ದೇವರಮನಿ, ರಾಜು ಸೇರಿದಂತೆ ಇತರರು ಇದ್ದರು. 

ಕಳಸಾ- ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹ
ಯಾದಗಿರಿ: ಕಳಸಾ ಬಂಡೂರಿ, ಮಹದಾಯಿ ಯೋಜನೆ ಜಾರಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರದಿಂದ ಮತ್ತು ರಾಜ್ಯ ಸರಕಾರಗಳಿಂದ ರಾಜ್ಯಕ್ಕೆ ಸರಿಯಾದ ನ್ಯಾಯ ದೊರಕಿಲ್ಲ, ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಅಕ್ಕ-ಪಕ್ಕದ ರಾಜ್ಯಗಳ ಪರವಾಗಿ ನಿಲ್ಲುವ ಕೇಂದ್ರ ಸರಕಾರ, ಕರ್ನಾಟಕದ ಯಾವುದೇ ಬೇಡಿಕೆಗಳಿಗೆ ಸ್ಪಂದಿಸದಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ
ಘೋರ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ ಭಾಗದ ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಇತರೆ ಜಿಲ್ಲೆಗಳಿಗೆ ಕುಡಿಯುವ ನೀರಿನ ಮೂಲವಾಗಿರುವ ಕಳಸಾ-ಬಂಡೂರಿ ನಾಲ ಯೋಜನೆಯ 7.56 ಟಿ.ಎಂ.ಸಿ. ನೀರನ್ನು ಕರ್ನಾಟಕದ ಪಾಲಿಗೆ ನೀಡಬೇಕೆಂದು ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟವನ್ನು ನಡೆಸಿಕೊಂಡು ಬರಲಾಗಿದೆ. ಕೂಡಲೇ ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಿ,
ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮನವೋಲಿಸಿ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎಸ್‌. ಫಕೀರಪ್ಪ ನಾಯಕ, ಎಚ್‌.ಕೆ. ಯಲ್ಲಪ್ಪ ನಾಯಕ ಇಬ್ರಾಹಿಂಪುರ, ಸಂತೋಷ ಹೆಡಗಿಮದ್ರಾ, ಸಾಬಣ್ಣ ಮಸ್ಕನಳ್ಳಿ, ಮಲ್ಲು ಮಸ್ಕನಳ್ಳಿ, ತಾಯಪ್ಪ ರಾಮಸಮುದ್ರ, ಮಲ್ಲಪ್ಪ ತಡಬಿಡಿ, ವಿಶ್ವನಾಥ
ಇದ್ದರು.

ರೈಲು ತಡೆದು ಕರವೇ ಧರಣಿ
ಯಾದಗಿರಿ:
ಮಹದಾಯಿ ಯೋಜನೆ ಜಾರಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು (ನಾರಾಯಣಗೌಡ ಬಣ) ಕಾರ್ಯಕರ್ತರು ನಗರದ ರೈಲ್ವೆ ನಿಲ್ದಾಣದಲ್ಲಿ ಉದ್ಯಾನ ರೈಲು ತಡೆದು ಪ್ರತಿಭಟನೆ ನಡೆಸಿದರು.

ಬೆಳಗ್ಗೆ ಉದ್ಯಾನ ರೈಲು ತಡೆದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರಕಾರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ 40ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಮಹಾದಾಯಿ ಯೋಜನೆ ಜಾರಿಗೊಳಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರ ರಾಜಕೀಯ ಮಾಡುತ್ತಿವೆ. ಇದರಿಂದ ಜನಸಾಮಾನ್ಯರು, ಜಾನುವಾರುಗಳು ನೀರಿಲ್ಲದೆ ಪರಿತಪಿಸುವಂತಾಗಿದೆ ಎಂದು ಸರಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕ ಭಾಗದ ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಇತರೆ ಜಿಲ್ಲೆಗಳಿಗೆ ಕುಡಿಯುವ ನೀರಿನ ಮೂಲವಾಗಿರುವ ಮಹದಾಯಿ ಯೋಜನೆ ಕರ್ನಾಟಕದ ಪಾಲಿಗೆ ಅಗತ್ಯವಾಗಿದ್ದು, ಕೂಡಲೇ ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಿ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮನವೋಲಿಸಿ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆ ಜಾರಿಗೊಳಿಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರವೇ ಮುಖಂಡರಾದ ಭೀಮುನಾಯಕ, ಮಲ್ಲು ಮಾಳಿಕೇರಿ, ಸಿದ್ದು ಹತ್ತಿಕುಣಿ ಇತರರು ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.