ಬಿಜೆಪಿಯಿಂದ ಕೋಲಿ ಸಮುದಾಯಕ್ಕೆ ಅನ್ಯಾಯವಾಗಿಲ್ಲ; ಚಿಂಚನಸೂರ
ಕೋಲಿ ಸಮಾಜಕ್ಕೆ ಸಂಪುಟದಲ್ಲಿ ಸ್ಥಾನಮಾನ ಸಿಗದಿರುವುದಕ್ಕೆ ಯಾವುದೇ ಅಸಮಾಧಾನವಿಲ್ಲ.
Team Udayavani, Jan 22, 2021, 6:21 PM IST
ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ಎಲ್ಲಾ ಸಮುದಾಯಕ್ಕೆ ನ್ಯಾಯ ಕೊಟ್ಟಿದ್ದಾರೆ. ನಾನು ಗೆದ್ದಿದ್ದರೇ ಮಂತ್ರಿಯಾಗುತ್ತಿದ್ದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹೇಳಿದರು.
ಜಿಲ್ಲಾಡಳಿತದಿಂದ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಿ ಸಮಾಜಕ್ಕೆ ಬಿಜೆಪಿ ಅನ್ಯಾಯ ಮಾಡಿಲ್ಲ. ಕೋಲಿ ಸಮಾಜಕ್ಕೆ ಸಂಪುಟದಲ್ಲಿ ಸ್ಥಾನಮಾನ ಸಿಗದಿರುವುದಕ್ಕೆ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಾಧಕ ಬಾಧಕಗಳನ್ನು ಗಮನಿಸಿ ಎಲ್ಲಾ ನಿರ್ಧಾರ ಮಾಡುತ್ತದೆ. ಯಡಿಯೂರಪ್ಪ ಸಿಎಂ ಆದ ತಕ್ಷಣ ತನಗೆ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದಾಗಿ ಬಿಎಸ್‌ವೈ
ನಡೆಯನ್ನು ಸಮರ್ಥಿಸಿಕೊಂಡರು.
ಅಲ್ಲದೆ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ವಿಚಾರವಾಗಿ ಮುಖ್ಯಮಂತ್ರಿ ಸಹಕಾರದಿಂದ ಪ್ರಯತ್ನಿಸಲಾಗುವುದು ಎಂದರು. ನಾವು ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಡಾ| ಉಮೇಶ ಜಾಧವ ಅವರು ಐತಿಹಾಸಿಕ ಗೆಲುವು ಸಾಧಿ ಸಲು ಶ್ರಮಿಸಿದ್ದೇವೆ. ಕಾಂಗ್ರೆಸ್ ನಲ್ಲಿದ್ದಾಗ ತಮ್ಮವರೇ ನನ್ನ ಸೋಲಿಸಿದ್ದಾರೆ. ಸೋಲಿಗೆ ಕಾರಣ ಯಾರು ಎಂಬುದನ್ನು ಸಮಯ ಬಂದಾಗ ಹೇಳುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.