ಅತ್ಯಾಚಾರ ಪ್ರಕರಣ ಖಂಡಿಸಿ ಧರಣಿ
Team Udayavani, Jun 26, 2018, 5:30 PM IST
ಯಾದಗಿರಿ: ಜಾರ್ಖಂಡ್ ರಾಜ್ಯದ ಚೋಚಾಂಗ್ ಜಿಲ್ಲೆಯಲ್ಲಿ ಮಕ್ಕಳ ಕಳ್ಳ ಸಾಗಾಣೆ ಕುರಿತು ಬೀದಿ ನಾಟಕ ಮಾಡುತ್ತಿದ್ದ ಕಲಾವಿದೆ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಪ್ರಗತಿ ಪರ ಸಂಘಟನೆಗಳು, ದಲಿತ ಸಂಘಟನೆಗಳು ಹಾಗೂ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದಿಂದ ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಬೀದಿ ನಾಟಕ ಕಲಾವಿದೆಯರು ಸರ್ಕಾರದ ಹಲವು ಕಾರ್ಯಕ್ರಮ ಅಲ್ಲದೇ ಅಸಮಾನತೆ, ಮಹಿಳಾ ಸಬಲೀಕರಣ, ಅಸ್ಪೃಶ್ಯತೆ ಹೋಗಲಾಡಿಸಲು ಕಲಾ ತಂಡಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ದೇಶಾದ್ಯಂತ ಮಾಡುತ್ತಿವೆ. ಇವರನ್ನು ತಮ್ಮ ಕೆಲಸಗಳಿಗಾಗಿ ಉಪಯೋಗಿಸಿಕೊಳ್ಳುವ ಕೇಂದ್ರ ಮತ್ತು ರಾಜ್ಯ ಸರ್ಕಾರ ಇವರ ಭದ್ರತೆಗೆ ಸೂಕ್ತ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
3 ತಿಂಗಳ ಹಿಂದೆ ಬೆಳಗಾವಿಯಲ್ಲಿ ಬೀದಿ ನಾಟಕ ಕಲಾವಿದೆ ಕಸ್ತೂರಿ ಎನ್ನುವವರು ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದು ಸೂಕ್ತ ಪರಿಹಾರ ವಿತರಿಸಿಲ್ಲ. ಈಗ ಬೀದಿ ನಾಟಕ ಕಲಾವಿದೆಯನ್ನು ನಿರ್ಜನ ಪ್ರದೇಶಕ್ಕೆ ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಸರ್ಕಾರ ಶೀಘ್ರ ಆರೋಪಿಗಳನ್ನು ಬಂಧಿಸಿ ಮಹಿಳಾ ಕಲಾವಿದರಿಗೆ ಸೂಕ್ತ ರಕ್ಷಣೆ ಮತ್ತು ಪರಿಹಾರ ಒದಗಿಸುವಂತೆ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ವೇಳೆ ಕಲಾವಿದರ ಸಂಘಟನೆ ಜಿಲ್ಲಾಧ್ಯಕ್ಷ ಮಹಾನಿಂಗಪ್ಪ ಮಾಲಗತ್ತಿ, ಅಂಬಲಪ್ಪ ನಾಯ್ಕಲ್‌ಕರ್, ಅಂಬ್ರಯ್ಯ ಸ್ವಾಮಿ ಜಾಲಿಬೆಂಚಿ, ಹಣಮಂತ್ರಾಯ ಕುಪ್ಪಿ, ಸಿದ್ದಪ್ಪ ಮುಷ್ಟೂರು ಸೇರಿದಂತೆ ಮಹಿಳಾ ಕಲಾವಿದರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.