ಸ್ವೀಪ್ ಸಮಿತಿ ಬದ್ಧತೆಯಿಂದ ಕಾರ್ಯ ನಿರ್ವಹಿಸಲಿ
Team Udayavani, Apr 7, 2018, 3:37 PM IST
ಸುರಪುರ: ಸ್ವೀಪ್ ಸಮಿತಿ ಸದಸ್ಯರು ಸರಿಯಾಗಿ ಕೆಲಸ ಮಾಡಿದ್ದಲ್ಲಿ ಖಂಡಿತವಾಗಿ ಮತದಾನ ಹೆಚ್ಚಳ ಆಗುತ್ತದೆ. ಕಾರಣ ಸ್ವೀಪ್ ಸಮಿತಿ ಸದಸ್ಯರು ಮತ್ತು ಬಿಎಲ್‌ಒಗಳು ಬದ್ಧತೆಯಿಂದ ಕೆಲಸ ನಿರ್ವಹಿಸುವಂತೆ ಚುನಾವಣಾ ಅಧಿಕಾರಿ ಪ್ರವೀಣ ಪ್ರಿಯಾ ಎನ್. ಡೇವಿಡ್ ಸಲಹೆ ನೀಡಿದರು.
ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸ್ವೀಪ್ ಸಮಿತಿ ಸದಸ್ಯರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ಮತದಾನ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು, ಅಂಗವಿಕಲರಿಗೆ ರ್‍ಯಾಂಪ್, ಗಾಲಿ ಕುರ್ಚಿ ಅಳವಡಿಸುವುದು, ದೃಷ್ಟಿ ಹೀನರಿಗೆ ಕಿವುಡ ಮೂಗರ ಮತ ಚಲಾವಣೆಗೆ ಮತಗಟ್ಟೆಯಲ್ಲಿ ಚುನಾವಣಾ ಸಿಬ್ಬಂದಿಗಳಿಂದ ನೆರವು ನೀಡುವ ಕುರಿತು ಮನವರಿಕೆ ಮಾಡಿಕೊಡವ ಮೂಲಕ ಜನರಲ್ಲಿ ಮತದಾನ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಬಿಎಲ್‌ಒಗಳು ಮನೆ ಮನೆಗೆ ತೆರಳಿ ವಿವಿ ಪ್ಯಾಟ್ ಬಳಕೆ ಮತ್ತು ಯಾವ ಮತಗಟ್ಟೆಯಲ್ಲಿ ಮತದಾನ ಮಾಡಬೇಕು ಎನ್ನುವುದರ ಕುರಿತು ತಿಳುವಳಿಕೆ ಮೂಡಿಸಬೇಕು. ಮತದಾನ ಮಾಡುವ ವಿಧಾನವನ್ನು ಕಲಿಸಿಕೊಡಬೇಕು. ಬಿಎಲ್‌ಒ, ಅಂಗನವಾಡಿ, ಆಶಾ ಕಾರ್ಯೆಕರ್ತೆಯರು ಆಯಾ ಮತಗಟ್ಟೆಯಲ್ಲಿದ್ದು, ತಮ್ಮ ಪಾಲಿನ ಕರ್ತವ್ಯವನ್ನು ಬದ್ಧತೆಯಿಂದ ನಿರ್ವಹಿಸಿದಲ್ಲಿ ಸಹಜವಾಗಿ ಮತದಾನ
ಹೆಚ್ಚಳವಾಗಲಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಹೆಚ್ಚು ಜನರು ಅನಕ್ಷರಸ್ಥರಿದ್ದಾರೆ. ಸಾಮಾಜಿಕ ಜಾಲ ತಾಣಗಳ ಮೂಲಕ ಅರಿವು ಮೂಡಿಸುವುದು ಕಷ್ಟ ಸಾಧ್ಯ. ಕಾರಣ ಮತದಾರರು ಸ್ವಹ ಇಚ್ಛೆಯಿಂದ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡುವಂತೆ ತಿಳಿಸಬೇಕು. ಮತದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಕಡೆ ಸಭೆಗಳನ್ನು ನಡೆಸಿ ಜಾಗೃತಿ ಮೂಡಿಸಬೇಕು ಎಂದು ತಾಕೀತು ಮಾಡಿದರು.
ಮಿಂಚಿನ ಮತಗಟ್ಟೆ ಅಭಿಯಾನ: ಏ. 8ರಂದು ಪ್ರತಿ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಅಭಿಯಾನ ಏರ್ಪಡಿಸಲಾಗಿದೆ. ಬಿಎಲ್‌ಒ ಮತ್ತು ಅಂಗನವಾಡಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಹೆಸರು ಕೈ ಬಿಟ್ಟವರನ್ನು, ಹೊಸದಾಗಿ ಸೇರ್ಪಡೆ ಮಾಡಿಕೊಳ್ಳುವರರನ್ನು ಕರೆ ತಂದು ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಹೆಸರು ನೋಂದಣಿ ಮಾಡಿಸಬೇಕು. ಸ್ಥಳೀಯ ಮುಖಂಡರ ಒತ್ತಾಯಕ್ಕೆ ಅಥವಾ ಇನ್ನಾರದೋ ಒತ್ತಡಕ್ಕೆ ಮಣಿದಾಗಲಿ ಮತಪಟ್ಟಿಯಿಂದ ಹೆಸರು ತೆಗೆದು ಹಾಕಿ ಅನಾವಶ್ಯಕ ವಿವಾದ
ಸೃಷ್ಟಿಸಿಕೊಳ್ಳಬೇಡಿ ಎಂದು ಮಾರ್ಗದರ್ಶನ ನೀಡಿದರು.
ರಜೆ ಇಲ್ಲಾ: ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಯಾವುದೇ ಕಾರಣಕ್ಕೆ ರಜೆ ನೀಡುವುದಿಲ್ಲ. ಚುನಾವಣಾ ಆಯೋಗದಂತೆ ನನ್ನನ್ನು ಹಿಡಿದು ಎಲ್ಲರು ಸೇರಿ ಬದ್ಧತೆಯಿಂದ ಕೆಲಸ ನಿರ್ವಹಿಸೋಣ ಎಂದು ತಿಳಿಸಿದರು. ರಾಜ್ಯ ಹಂತದ ತರಬೇತಿದಾರ ಹಣಮಂತ ಪೂಜಾರಿ ಸ್ವೀಪ್ ಸಮಿತಿ ಕೈಗೊಳ್ಳಬೇಕಾದ ಕಾರ್ಯಕ್ರಮ ಮತ್ತು ಅನುಷ್ಠಾನ ಕುರಿತು ಮಾಹಿತಿ ನೀಡಿದರು. ಪ್ರೋಬೇಷನರಿ ತಹಶೀಲ್ದಾರ್ ನಿಂಗಣ್ಣ ಬಿರೇದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.