ಸಗರಾದ್ರಿ ಬೆಟ್ಟದಲ್ಲಿ ಜಲಪಾತ ವೈಭವ

Team Udayavani, Aug 4, 2022, 4:36 PM IST

9-hill

ಶಹಾಪುರ: ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ನಗರದ ನಾಗರ ಕೆರೆ, ಮಾವಿನ ಕೆರೆ ತುಂಬಿವೆ. ಅಲ್ಲದೇ ಸಗರಾದ್ರಿ ಬೆಟ್ಟದಲ್ಲಿ ಹರಿಯುವ ಜಪಪಾತದ ಸೌಂದರ್ಯ ಸವಿಯಲು ಜನಸ್ತೋಮವೇ ಬೆಟ್ಟದ ಹಲವೆಡೆ ಗುಂಪು ಗುಂಪಾಗಿ ಆಗಮಿಸಿ, ನಿಸರ್ಗ ಸೌಂದರ್ಯ ಸವಿಯುತ್ತಿರುವುದು ಬುಧವಾರ ಕಂಡುಬಂತು.

ಒಂದಡೆ ಭಾರಿ ಮಳೆಯಿಂದಾಗಿ ನಗರದ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾದರೆ, ಇನ್ನೊಂದಡೆ ಸಗರಾದ್ರಿ ಬೆಟ್ಟದ ಸೌಂದರ್ಯ ಹೆಚ್ಚಿಸಿದೆ. ಹೀಗಾಗಿ ಪ್ರಕೃತಿ ಪ್ರಿಯರು ಬೆಟ್ಟಕ್ಕೆ ತೆರಳಿ ನಿಸರ್ಗ ಸೌಂದರ್ಯ ಸವಿದು ಸಂತಸಗೊಂಡರು. ವ್ಯಾಪಾರಸ್ಥರು ಮಳೆಯಿಂದಾಗಿ ಉಂಟಾದ ನಷ್ಟಕ್ಕೆ ಮರಗುವಂತಾಗಿದೆ.

ನಾಗರಪಂಚಮಿ ಹಬ್ಬದ ಅಂಗವಾಗಿ ಮನೆಯಲ್ಲಿ ರವೆ ಉಂಟೆ, ಶೇಂಗಾ-ಬೆಲ್ಲದುಂಡೆ, ಚಕಲಿ, ಕೋಡುಬಳೆ ಸೇರಿದಂತೆ ವಿವಿಧ ಖಾದ್ಯ ಕಟ್ಟಿಕೊಂಡು ಒಂದು ದಿನದ ಪಿಕ್‌ನಿಕ್‌ಗಾಗಿ ಸಗರಾದ್ರಿ ಬೆಟ್ಟದ ವಿಶೇಷ ಸ್ಥಳಗಳಾದ ಸಿದ್ಧಲಿಂಗೇಶ್ವರ ಬೆಟ್ಟ, ಕೋಟೆಯೊಳಗಿನ ಮಂದಾಕಿನಿ, ತಾವರಗೆರೆ ಇತರೆಡೆ ಕುಟುಂಬಸ್ಥರು, ಮಕ್ಕಳು, ಯುವಕ-ಯುವತಿಯರು ತೆರಳಿ ಪ್ರಕೃತಿ ಸೌಂದರ್ಯ ಸವಿಯುವುದರಲ್ಲಿ ನಿರತರಾಗಿರುವುದು ಕಂಡುಬಂತು. ವಿಶೇಷವಾಗಿ ಫಾಲ್ಸ್‌ನಲ್ಲಿ ಮಕ್ಕಳು ನೀರಲ್ಲಿ ಆಟವಾಡುವ ಮೂಲಕ ಖುಷಿ ಪಟ್ಟರು.

ನಳನಳಿಸಿದ ಕೆರೆಗಳ ಸೌಂದರ್ಯ

ನಗರ ಪ್ರಮುಖ ಕೆರೆಗಳಾದ ನಾಗರ ಕೆರೆ ಮತ್ತು ಮಾವಿನ ಕೆರೆ ತುಂಬಿ ನಳನಳಿಸುತ್ತಿವೆ. ಮಾವಿನ ಕೆರೆ ಒಡ್ಡಿನ ಸುತ್ತಲೂ ಸಿಮೆಂಟ್‌ ರಸ್ತೆ ಇರುವುದರಿಂದ ನಿತ್ಯ ಆ ರಸ್ತೆ ಮೇಲೆ ವಾಕಿಂಗ್‌ ನಡೆಸುವ ಜನ. ಇದೀಗ ನಳನಳಿಸುತ್ತಿರುವ ನೀರನ್ನು ಕಂಡು ಸಂತಸ ವ್ಯಕ್ತಪಡಿಸುತ್ತಾರೆ. ಇಡಿ ಕೆರೆ ತುಂಬಿ ತುಳುಕುತ್ತಿದ್ದು, ಹಿಂಬದಿ ಬೆಟ್ಟ ಹಸಿರು ವಾತಾವರಣ ಆಹ್ಲಾದಕರವಾಗಿದೆ ಎನ್ನುತ್ತಾರೆ ಪ್ರಕೃತಿ ಪ್ರಿಯರು. ಅಲ್ಲದೇ ಎರಡು ಕೆರೆ ತುಂಬಿರುವುದರಿಂದ ನಗರದ ಕೊಳವೆಬಾವಿಯಲ್ಲಿ ಬೇಸಿಗೆಗೆ ಬತ್ತಿ ಹೋಗಿದ್ದ ಅಂತರ್ಜಲಮಟ್ಟ ಹೆಚ್ಚಾಗಲಿದೆ ಎಂದು ಶಿಕ್ಷಕ ಬಸವರಾಜ ಚಲವಾದಿ ಆಶಯ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಮುದ್ನೂರ

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.