ಎಸ್‌ಐಟಿ ಅಧಿಕಾರಿಗಳ ಬದಲಾವಣೆ ಇಲ್ಲ: ಸಚಿವ
Team Udayavani, Oct 23, 2017, 7:50 AM IST
ಯಾದಗಿರಿ: “ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತಂತೆ ಎಸ್‌ಐಟಿ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿಲ್ಲ. ಮಾಧ್ಯಮಗಳ ವರದಿ ಉಹಾಪೋಹದಿಂದ ಕೂಡಿದ್ದು, ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಅಧಿಕಾರಿಗಳ ನೇಮಕ ಮಾಡಲಾಗುವುದು’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದಲ್ಲಿ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಆರೋಪಿಗಳ ಸುಳಿವು ದೊರೆತಿದೆ. ಅದನ್ನು ಮಾಧ್ಯಮ ಹಾಗೂ ಸಾರ್ವಜನಿಕರ ಮುಂದೆ ಹೇಳಲು ಸಾಧ್ಯವಿಲ್ಲ. ಆದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು. ಎಸ್ ಐಟಿ ಅಧಿಕಾರಿಗಳು ಸ್ಥಳೀಯರ ಮಾಹಿತಿ ಆಧರಿಸಿ ರೇಖಾಚಿತ್ರ ರಚಿಸಿದ್ದಾರೆ. ಬಲಪಂಥೀಯ, ಎಡಪಂಥೀಯರು ಎಂಬ ಬಗ್ಗೆ ಅವರು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.