ಪರಿಹಾರ ವಿತರಣೆಯಲ್ಲಿ ವಿಳಂಬ ಬೇಡ
Team Udayavani, Sep 17, 2019, 3:53 PM IST
ಯಾದಗಿರಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ರಾಜಶೇಖರಗೌಡ ಪಾಟೀಲ ವಜ್ಜಲ್ ಮಾತನಾಡಿದರು.
ಯಾದಗಿರಿ: ಮಹಾರಾಷ್ಟ್ರದಲ್ಲಿ ಅತಿವೃಷ್ಟಿಯಾದ ಕಾರಣ ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ನದಿಗಳಲ್ಲಿ ಪ್ರವಾಹ ಉಂಟಾಗಿ, ಹಲವು ಜನ ಆಸ್ತಿ-ಮನೆ ಕಳೆದುಕೊಂಡಿದ್ದಾರೆ. ರೈತರ ಬೆಳೆಗಳು ಕೊಚ್ಚಿಕೊಂಡು ಹೋಗಿವೆ ಮತ್ತು ನೀರಿನಲ್ಲಿ ಮುಳುಗಿವೆ. ನೆರೆ ಹಾವಳಿಯಿಂದಾಗಿ ಉಂಟಾದ ಹಾನಿ ಪರಿಹಾರ ವಿತರಣೆಯಲ್ಲಿ ಅಧಿಕಾರಿಗಳು ವಿಳಂಬ ಮಾಡದೇ ಶೀಘ್ರ ಪರಿಹಾರ ವಿತರಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೆರೆ ಹಾವಳಿಯಿಂದ ಜಮೀನು ಕೊಚ್ಚಿಕೊಂಡು ಹೋಗಿರುವ ಮತ್ತು ಬೆಳೆ ಹಾನಿಯಾಗಿರುವ ಬಗ್ಗೆ ನಿಖರ ವರದಿ ನೀಡಬೇಕು ಎಂದು ನಿರ್ದೇಶಿಸಿದರು.
ನೆರೆ ಹಾವಳಿಯಿಂದ ಜಿಲ್ಲೆಯಲ್ಲಿ 376 ಮನೆ ಹಾನಿಯಾಗಿರುವುದನ್ನು ಗುರುತಿಸಲಾಗಿದೆ. ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ಪರಿಹಾರ ನೀಡಲಾಗಿದೆ. ಪ್ರವಾಹದಿಂದಾಗಿ ಎನ್‌ಡಿಆರ್‌ಎಫ್ ಮತ್ತು ಎನ್‌ಸಿಆರ್‌ಎಫ್ ಮಾರ್ಗಸೂಚಿ ಅನ್ವಯ ಜಿಲ್ಲೆಯಲ್ಲಿ ಅಂದಾಜು 26.16 ಕೋಟಿ ರೂ. ಮೊತ್ತದ ಹಾನಿ ಸಂಭವಿಸಿದೆ ಎಂದು ತಹಶೀಲ್ದಾರ್ ತಿಳಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಆರ್. ಮಾತನಾಡಿ, ಜಿಲ್ಲೆಯ ಒಟ್ಟು ಬಿತ್ತನೆ ಕ್ಷೇತ್ರ 3,53,856 ಹೆಕ್ಟೇರ್ ಗುರಿಯಲ್ಲಿ 3,47,702 ಬಿತ್ತನೆಯಾಗಿದೆ. 10,582 ಹೆಕ್ಟೇರ್ ಪ್ರದೇಶದಲ್ಲಿ ನೆರೆ ಹಾವಳಿಯಿಂದ ಬೆಳೆ ಹಾನಿ ಸಂಭವಿಸಿದೆ. ಪ್ರಸಕ್ತ ಸಾಲಿನಲ್ಲಿ 13 ರೈತರ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, 8 ಪ್ರಕರಣ ಕಮಿಟಿ ಮುಂದೆ ಇವೆ. 5 ಪ್ರಕರಣ ತಿರಸ್ಕೃತವಾಗಿದ್ದು, 3 ಪ್ರಕರಣಗಳನ್ನು ಒಪ್ಪಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸರ್ಕಾರಿ ಯೋಜನೆಗಳ ಅರಿವು ಮೂಡಿಸಿ: ಶಿಕ್ಷಣ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ಆರೋಗ್ಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಇಲಾಖೆಯಲ್ಲಿ ಬರುವ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿ ಜನರಲ್ಲಿ ಅರಿವು ಮೂಡಿಸಬೇಕು.
ಸರಕಾರದ ಯೋಜನೆಗಳು ಸದುಪಯೋಗ ವಾಗಲು ಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ಅರಿವು ಅಗತ್ಯವಾಗಿದೆ. ತಿಂಗಳಲ್ಲಿ ನಾಲ್ಕೈದು ದಿನ ಹಳ್ಳಿ ಕಡೆ ಹೋಗಿ ವಾಸ್ತವ ಸ್ಥಿತಿ ನೋಡಬೇಕು. ಸಭೆ-ಸಮಾರಂಭಗಳನ್ನು ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಜಿಪಂ ಅಧ್ಯಕ್ಷರು ತಿಳಿಸಿದರು.
ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದರ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿರುವ ಏಜೆನ್ಸಿಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.
ಫಲಿತಾಂಶ ಹೆಚ್ಚಳ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕಾಗಿ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಕೇಳಿದಾಗ, ಜಿಲ್ಲೆಯ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಸ್ಥಾನಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲೆ ಮುಖ್ಯೋಪಾಧ್ಯಾಯರಿಗೆ ಸೂಚಿಸಲಾಗಿದೆ. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ಫಲಿತಾಂಶದ ಹೆಚ್ಚಳಕ್ಕಾಗಿ ಡಯಟ್ನಿಂದ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಮಕ್ಕಳಲ್ಲಿ ಗುಂಪು ಅಧ್ಯಯನ, ಕಂಪ್ಯೂಟರ್, ಪ್ರಾಜೆಕ್ಟರ್ ಮೂಲಕ ಹಾಗೂ 8ನೇ ತರಗತಿಯಿಂದಲೇ ಮಕ್ಕಳಿಗೆ ಇಂಗ್ಲಿಷ್, ಹಿಂದಿ ಸೇರಿದಂತೆ ಇತರೆ ವಿಷಯಗಳ ನಿರೂಪಣೆ ಶೈಲಿ ಹೇಳಿಕೋಡಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಮಾಹಿತಿ ನೀಡಿದರು.
ಕುಟುಂಬ ಕಲ್ಯಾಣ ಯೋಜನೆ ಕುರಿತು ಆಶಾ ಕಾರ್ಯಕರ್ತೆಯರ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರತೆ ಇರುವ ವೈದ್ಯರನ್ನು ಗುತ್ತಿಗೆ ಆಧಾರ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಡಾ| ಭಗವಂತ ಅನವಾರ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಎಸ್. ರೋಟ್ನಡಗಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ ಕರಿಗಾರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸುನೀಲ ಬಿಸ್ವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Contracter Case: ನಿಷ್ಪಕ್ಷ ತನಿಖೆಗೆ ಸಚಿವರು, ಸಿಎಂ ರಾಜೀನಾಮೆ ನೀಡಲಿ: ಗೋವಿಂದ ಕಾರಜೋಳ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.