ಅಂತರ್ಜಲ ಅವೈಜ್ಞಾನಿಕ ಬಳಕೆ ಆತಂಕಕಾರಿ
Team Udayavani, Oct 26, 2018, 10:39 AM IST
ಯಾದಗಿರಿ: ಕೃಷಿ ಕಾರ್ಯಗಳಿಗೆ ಅವೈಜ್ಞಾನಿಕ ಅಂತರ್ಜಲ ಬಳಕೆ ಮಾಡುತ್ತಿರುವುದರಿಂದ ಅಂತರ್ಜಲ ಮಟ್ಟ ಕ್ಷೀಣಿಸುತ್ತಿದೆ ಎಂದು ಭಾರತ ಸರ್ಕಾರ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಮಂತ್ರಾಲಯದ ಕೇಂದ್ರೀಯ ಅಂತರ್ಜಲ ಮಂಡಳಿ ಬೆಂಗಳೂರು ಪ್ರಾದೇಶಿಕ
ನಿರ್ದೇಶಕ ಡಾ| ಎ. ಸುಬ್ಬುರಾಜ್ ಆತಂಕ ವ್ಯಕ್ತಪಡಿಸಿದರು.
ಜಿಪಂ ಸಭಾಂಗಣದಲ್ಲಿ ಗುರುವಾರ ಭಾರತ ಸರ್ಕಾರ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಮಂತ್ರಾಲಯದ ಕೇಂದ್ರೀಯ ಅಂತರ್ಜಲ ಮಂಡಳಿ ಬೆಂಗಳೂರು ವತಿಯಿಂದ ಆಯೋಜಿಸಿದ್ದ ಸ್ಥಳೀಯ ಅಂತರ್ಜಲ ಸಮಸ್ಯೆಗಳ ನಿರ್ವಹಣೆ ಕುರಿತಾದ ತರಬೇತಿ
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅವೈಜ್ಞಾನಿಕ ನೀರು ಬಳಕೆಯಿಂದ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಅಂತರ್ಜಲ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕಾರ್ಯವಾಗಿದೆ. ಇಂದಿನ ಆಧುನಿಕ ಯುಗದ ಭರಾಟೆಯಲ್ಲಿ ನಗರೀಕರಣ ಹಾಗೂ ಕೈಗಾರೀಕರಣದಿಂದಾಗಿ ಪರಿಸರ ಮಲೀನ ಆಗುತ್ತಿದೆ. ಅದರಲ್ಲಿ ಮುಖ್ಯವಾಗಿ ಜೀವ ಜಲ ಮಾಲಿನ್ಯ ಆಗುತ್ತಿದ್ದು, ಇದರಿಂದ ಭೂಮಿಯ ಮೇಲಿನ ಸಿಹಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ 14.89 ಬಿಲಿಯನ್ ಕ್ಯೂಬಿಕ್ ಅಂತರ್ಜಲ ಪ್ರಮಾಣ ಇದೆ. ಶೇ. 15ರಿಂದ 20ರಷ್ಟು ನೀರು ಮಾತ್ರ
ಭೂಮಿಯಲ್ಲಿ ಇಂಗುತ್ತದೆ. ಯಾದಗಿರಿ ಜಿಲ್ಲೆಯಲ್ಲಿ ಕಾಲುವೆ ನೀರಾವರಿ ಹೆಚ್ಚಾಗಿರುವುದರಿಂದ ಈ ಭಾಗದ ಅಂತರ್ಜಲ ಮಟ್ಟವು ತಕ್ಕಮಟ್ಟಿಗೆ ಉತ್ತಮವಾಗಿದೆ ಎಂದು ತಿಳಿಸಿದರು.
ತರಬೇತಿ ಕಾರ್ಯಾಗಾರದಲ್ಲಿ ಹಿರಿಯ ಭೂ ವಿಜ್ಞಾನಿಗಳಾದ ಜೆ. ಶಿವರಾಂಕೃಷ್ಣನ್ ಹಾಗೂ ಡಾ| ಅನಂತಕುಮಾರ್ ಅರಸ್ ಅವರು ಸ್ಥಳೀಯ ಅಂತರ್ಜಲ ಸಮಸ್ಯೆಗಳ ನಿರ್ವಹಣೆಯ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಸ್ಥಳೀಯ ಅಂತರ್ಜಲ ಸಮಸ್ಯೆಗಳ ನಿರ್ವಹಣೆಯ ಮಾರ್ಗಸೂಚಿಯ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.
ಹಿರಿಯ ಭೂ ವಿಜ್ಞಾನಿ ಡಾ| ಎ. ರವಿಚಂದ್ರನ್, ಪಿ.ಎಚ್.ಪಿ ರೆಡ್ಡಿ, ಎಸ್.ಎಂ. ಕೃಷ್ಣಾ ಸೇರಿದಂತೆ ಭೂ ವಿಜ್ಞಾನಿಗಳು, ವಿವಿಧ ಇಲಾಖೆ ಇಂಜಿನಿಯರ್‌ಗಳು, ಅಧಿಕಾರಿಗಳು ಮತ್ತು ಸಿಬ್ಬಂದಿ ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.