ಮತದಾನ ಹಕ್ಕು ವಿವೇಚನೆಯಿಂದ ಬಳಸಿ
Team Udayavani, Jan 31, 2019, 11:53 AM IST
ಸುರಪುರ: ದೇಶದ ಅಭಿವೃದ್ಧಿ ಯುವಕರ ಕೈಯಲ್ಲಿ ಅಡಗಿದೆ. ದೇಶದ ಅಭಿವೃದ್ಧಿಗಾಗಿ ಮತದಾನದ ಹಕ್ಕು ಸಂವಿಧಾನದತ್ತವಾಗಿ ಕೊಡಮಾಡಲ್ಪಟ್ಟಿದೆ. ಈ ಮತದಾನ ಹಕ್ಕನ್ನು ಯುವಕರು ವಿವೇಚನೆಯಿಂದ ಬಳಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಡಿ. ನಾಗರಾಜೇಗೌಡ ಹೇಳಿದರು.
ಇಲ್ಲಿಯ ಜೆಎಂಎಫ್‌ಸಿ ನ್ಯಾಯಾಲಯ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಮತ್ತು ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಬಲ ಅಸ್ತ್ರ. ಈ ಅಸ್ತ್ರದ ಮೂಲಕ ನಾಗರಿಕರು ತಮಗೆ ಬೇಕಾದ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇದೆ. ದೇಶದ ಅಭಿವೃದ್ಧಿ ಹಾಗೂ ಸ್ಥಿತಿಗತಿಗಳು ನಿಮ್ಮ ಮತವನ್ನು ಅವಲಂಬಿಸಿದೆ. ಇಲ್ಲಿ ಪ್ರತಿ ಮತಕ್ಕೂ ಮೌಲ್ಯವಿದೆ. ಹೀಗಾಗಿ ಯುವಕರು ವಿವೇಚನೆಯಿಂದ ಮತ ಚಲಾಯಿಸಬೇಕು ಎಂದು ಸಲಹೆ ನೀಡಿದರು.
18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾರರಾಗಿ ಹೆಸರು ನೋಂದಾಯಿಸಿಕೊಳ್ಳುವ ಜತೆಗೆ ಪ್ರತಿ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು. ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಬೇಕು. ಶ್ರೀಮಂತ, ಬಡವನ ಮತಕ್ಕೆ ಮೌಲ್ಯ ಒಂದೇ. ಮತ ಎಂಬುದು ದೇಶದ ಭವಿಷ್ಯ ಬದಲಿಸುವ ಪ್ರಬಲ ಅಸ್ತ್ರ ಇದ್ದಂತೆ. ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಜೊತೆಗೆ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಹೇಳಿದರು.
ಸಿವಿಲ್ ನ್ಯಾಯಾಧಿಧೀಶ ವಿನೋದ ಬಾಳನಾಯ್ಕ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಯುವ ಜನತೆ ಚುನಾವಣಾ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. 18 ವರ್ಷ ತುಂಬಿದ ಯುವಕ-ಯುವತಿಯರು ತಪ್ಪದೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಸಂವಿಧಾನ ಕಲ್ಪಿಸಿರುವ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಹೆಚ್ಚುವರಿ ನ್ಯಾಯಾಧೀಶ ಅಮರನಾಥ ಬಿ.ಎನ್. ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಜನ ನಾಯಕ ಚುನಾಯಿಸುವ ಅಧಿಕಾರವನ್ನು ಪ್ರಜೆಗಳಿಗೆ ನೀಡಿದ್ದು, ಇದಕ್ಕಾಗಿ ಪ್ರತಿಯೊಬ್ಬರು ಮತದಾನ ಮಾಡುವುದು ಅವಶ್ಯಕ. ಯುವ ಜನತೆ ದೇಶದ ಭವಿಷ್ಯವನ್ನು ಬದಲಾಯಿಸುವ ಶಕ್ತಿ ಹೊಂದಿದ್ದು, ದೇಶದ ಎಲ್ಲ ಜನತೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಮತದಾನ ಮಾಡಿದಲ್ಲಿ ಸುಭದ್ರ, ಸುಸ್ಥಿರ, ಬಲಿಷ್ಟ ಸರ್ಕಾರ ಮತ್ತು ಉತ್ತಮ ಪ್ರಜಾಪ್ರಭುತ್ವಕ್ಕೆ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದು ನುಡಿದರು.
ವಕೀಲರಾದ ವಿಶ್ವಮಿತ್ರ ಕಟ್ಟಿಮನಿ ಮತ್ತು ಗೋಪಾಲ ತಳವಾರ ಉಪನ್ಯಾಸ ನೀಡಿದರು. ನ್ಯಾಯವಾದಿಗಳಾದ ದೇವಿಂದ್ರಪ್ಪ ಬೇವಿನಕಟ್ಟಿ, ಬಸವರಾಜ ಕಿಲ್ಲೇದಾರ್, ಎಪಿಪಿ ಮಹಾಂತೇಶ ಮಸಳಿ, ಬಸಲಿಂಗಪ್ಪ ಪಾಟೀಲ ದೇವಿಂದ್ರಪ್ಪ ಭೇವಿನಕಟ್ಟಿ, ಬಸವರಾಜ ಕಿಲ್ಲೇದಾರ ಇದ್ದರು. ಹಿರಿಯ-ಕಿರಿಯ ವಕೀಲರು ಕಕ್ಷಿದಾರರು ಇದ್ದರು. ಯಂಕಾರಡ್ಡಿ ಹವಲ್ದಾರ್ ಸ್ವಾಗತಿಸಿದರು. ಅಪ್ಪಣ್ಣ ಗಾಯಕವಾಡ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.