20 ಸಾವಿರ ವಿದ್ಯಾರ್ಥಿಗಳಿಗೆ ಲಸಿಕೆ ಗುರಿ: ಡಿಸಿ

Team Udayavani, Jan 4, 2022, 5:31 PM IST

29vaccine

ಯಾದಗಿರಿ: ಜಿಲ್ಲೆಯಲ್ಲಿ 15ರಿಂದ 18 ವರ್ಷ ವಯೋಮಾನದ ಪ್ರೌಢಶಾಲೆ ಮತ್ತು ಕಾಲೇಜಿನ 78 ಸಾವಿರ ವಿದ್ಯಾರ್ಥಿಗಳು ಲಸಿಕಾಕರಣಕ್ಕೆ ಅರ್ಹವಿದ್ದು, ಇಂದು 20 ಸಾವಿರ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಗುರಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ತಿಳಿಸಿದರು.

ಇಲ್ಲಿನ ಸರಕಾರಿ ಕನ್ಯಾಪ್ರೌಢ ಶಾಲೆ, ಜ್ಯೂನಿಯರ್‌ ಕಾಲೇಜು ಮೈದಾನದಲ್ಲಿ 15 ವರ್ಷದಿಂದ 18 ವರ್ಷ ವಯೋಮಾನದ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್‌-19 ಲಸಿಕಾಕರಣಕ್ಕೆ ಸತತ ಒಂಭತ್ತು ತಿಂಗಳಿನಿಂದ ಜಿಲ್ಲಾಡಳಿತ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿ ಹಂತ ಹಂತವಾಗಿ ಲಸಿಕೆ ನೀಡುತ್ತಿದೆ. ಮೊದಲನೇ ಮಟ್ಟದಲ್ಲಿ ಫ್ರಂಟ್‌ ಲೈನ್‌ ವಾರಿಯರ್ಸ್‌ಗಳಿಗೆ ನಂತರ 18ರಿಂದ 45 ವಯಸ್ಸಿನವರಿಗೆ ಹಾಗೂ 60ಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ. ಇಂದಿನಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಚಾಲನೆ ನೀಡಲಾಗಿದೆ ಎಂದರು.

ಯಾದಗಿರಿ ಜಿಲ್ಲೆಯಲ್ಲಿ ಶೇ. 97ರಷ್ಟು ಮೊದಲನೇ ಡೋಸ್‌ ಮತ್ತು ಶೇ. 74ರಷ್ಟು ಎರಡನೇ ಡೋಸ್‌ ಲಸಿಕಾಕರಣದ ಪ್ರಗತಿ ಸಾಧಿಸಿದ್ದು, ಕೋವಿಡ್‌ ಲಸಿಕಾಕರಣದಿಂದ ಇಲ್ಲಿಯವರೆಗೂ ಅಡ್ಡಪರಿಣಾಮ ಆಗಿರುವ ಪ್ರಕರಣಗಳೇ ಇಲ್ಲ. ಎಲ್ಲರೂ ಮಾಸ್ಕ್ ಧರಿಸಿ ಜಾಗೃತ ವಹಿಸಿ, ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ ಎಂದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ಕೊವ್ಯಾಕ್ಸಿನ್‌ ಮತ್ತು ಕೋವಿಶಿಲ್ಡ್‌ ಜಗತ್ತಿನಲ್ಲಿಯೇ ನಂಬರ್‌ ಒನ್‌ ಔಷಧಿ ಯಾಗಿದೆ. ಕೊರೊನಾ ರೂಪಾಂತರ ತಳಿ ಒಮೈಕ್ರಾನ್‌ ವೈರಸ್‌ ಎಲ್ಲೆಡೆ ಹರಡುತ್ತಿದೆ. ಇದನ್ನು ನಾವು ಎದುರಿಸಬೇಕಾಗಿದೆ. ಜನರು ತಪ್ಪು ಕಲ್ಪನೆಗಳಿಂದಾಗಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕಾಕರಣದಿಂದ ಯಾವುದೇ ತೊಂದರೆಗಳಿಲ್ಲ. ಯಾರು ಹೆದರುವ ಅವಶ್ಯಕತೆಯಿಲ್ಲ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿ ಕಾರಿ ಶಿಲ್ಪಾಶರ್ಮಾ ಮಾತನಾಡಿ, ಶಿಕ್ಷಕರು ಅರ್ಹ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಲಸಿಕೆ ನೀಡಬೇಕು. ವಿದ್ಯಾರ್ಥಿಗಳು ಲಸಿಕೆ ಪಡೆದು ನಿಮ್ಮ ಗೆಳೆಯ-ಗೆಳತಿಯರಿಗೆ ಲಸಿಕೆ ಹಾಕಿಕೊಳ್ಳಲು ಮನವೊಲಿಸಬೇಕು ಎಂದರು. ಮೂರನೇ ಅಲೆ ತಡೆಯಲು ಲಸಿಕಾಕರಣವೊಂದೇ ಅಸ್ತ್ರವಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ನಗರ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ನಗರಸಭೆ ಅಧ್ಯಕ್ಷ ವಿಲಾಸ್‌ ಪಾಟೀಲ್‌, ಡಿಎಚ್‌ಒ ಡಾ| ಇಂದುಮತಿ ಪಾಟೀಲ್‌, ಆರ್‌.ಸಿ.ಎಚ್‌.ಒ ಲಕ್ಷ್ಮೀಕಾಂತ ಒಂಟಿಪೀರ, ಡಿಡಿಪಿಐ ಶಾಂತಗೌಡ ಪಾಟೀಲ್‌, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್‌, ನಗರಸಭೆ ಆಯುಕ್ತ ಬಕ್ಕಪ್ಪ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ವೈದ್ಯಾಧಿಕಾರಿ ಹಣಮಂತರೆಡ್ಡಿ ಇದ್ದರು.

ಟಾಪ್ ನ್ಯೂಸ್

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.