ವಾರಿಯರ್ಸ್ ಗೆ ಮೊದಲ ಹಂತದಲ್ಲಿ ಲಸಿಕೆ
Team Udayavani, Dec 18, 2020, 5:42 PM IST
ಯಾದಗಿರಿ: ರಾಜ್ಯದಲ್ಲಿ ಕೋವಿಡ್-19 ವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ ಎಲ್ಲಾ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆಗಳ ಸಂಯೋಗದಲ್ಲಿ ನಡೆದ ಕೋವಿಡ್ 19 ಲಸಿಕೆಯ ಬಗ್ಗೆ ಪೂರ್ವ ತಯಾರಿ ಹಾಗೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುವ ಸಂದರ್ಭದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆಯ ಸಿಬ್ಬಂದಿ ಸೇರಿದಂತೆ ಇತರ ಇಲಾಖೆಯವರ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಮೊದಲ ಹಂತದ ಲಸಿಕೆಯನ್ನು ಕೋವಿಡ್ ವಾರಿಯರ್ಸ್‌ಗೆ ಪ್ರಾಯೋಗಿಕವಾಗಿನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವಸಮಯದಲ್ಲಿ ಊಹಾಪೋಹಗಳು ಕೇಳಿ ಬರುತ್ತವೆ.ಆದರೆ ಇದಕ್ಕೆ ಯಾರು ಕಿವಿಗೊಡಬಾರದು ಎಂದು ಹೇಳಿದರು.
ಕೋವಿಡ್ ಲಸಿಕೆ ಅಗತ್ಯವಿರುವವರು ಕೂಡಲೇ ಹತ್ತಿರದ ಕೋವಿಡ್ ಸೆಂಟರ್‌ಗಳಿಗೆ ಭೇಟಿ ನೀಡಿನೋಂದಣಿ ಮಾಡಿ ಲಸಿಕೆ ಪಡೆಯಲು ಅವಕಾಶಕಲ್ಪಿಸಲಾಗಿದೆ. ಲಸಿಕೆ ದೊರೆತ ಬಳಿಕ ಹೆಚ್ಚು ಜನರಿಗೆನೀಡಲಾಗುವುದು. ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಮೊದಲ ಹಂತದ ಲಸಿಕೆ ನೀಡಲಾಗುವುದು. ನಂತರ 50 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು ಎಂದರು.
ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಇಂದುಮತಿ ಪಾಟೀಲ್, ಆರ್.ಸಿ.ಎಚ್‌ಡಾ.ಸೂರ್ಯ ಪ್ರಕಾಶ್ ಕಂದಕೂರ, ಐಎಂಎ ಅಧ್ಯಕ್ಷ ಡಾ.ಸಿ.ಎಂ. ಪಾಟೀಲ್, ಎಸ್.ಎಂ.ಒ ಡಾ.ಅನಿಲ್ ಜಾರಕೋಳಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಲಕ್ಷ್ಮೀಕಾಂತ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.