ವಾಲ್ಮೀಕಿ ಜಯಂತಿ ಆಚರಿಸಲು ಕರ


Team Udayavani, Oct 7, 2018, 5:15 PM IST

yad-1.jpg

ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಅಕ್ಟೋಬರ್‌ 24ರಂದು ಬೆಳಗ್ಗೆ 11:00 ಗಂಟೆಗೆ ಯಾದಗಿರಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ
ಎಂ. ಕೂರ್ಮಾರಾವ್‌ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತಿ ಅಂಗವಾಗಿ ಡಿಸಿ ಕಾರ್ಯಾಲಯದಲ್ಲಿ ಅಂದು ಬೆಳಗ್ಗೆ 9:00 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು, ಇದಕ್ಕೂ ಮೊದಲು ಬೆಳಗ್ಗೆ 8:30 ಗಂಟೆಗೆ ಎಲ್ಲಾ ಸರ್ಕಾರಿ
ಕಚೇರಿಗಳಲ್ಲಿ ಜಯಂತಿ ಆಚರಿಸ ಬೇಕು. ಅದರಂತೆ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಶ್ರದ್ಧಾ, ಭಕ್ತಿಯೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಡ್ಡಾಯವಾಗಿ ಆಚರಿಸಬೇಕು ಎಂದು ಸೂಚಿಸಿದರು. 

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಮತ್ತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿ, ವಿಜೇತರ ಪಟ್ಟಿಯನ್ನು ಸಲ್ಲಿಸುವಂತೆ ಡಿಡಿಪಿಯು ಮತ್ತು ಡಿಡಿಪಿಐ ಅವರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ, ಗಣ್ಯ ವ್ಯಕ್ತಿಗಳಿಗೆ ಹಾಗೂ ಜಿಲ್ಲಾಧಿಕಾರಿ ಕಾರ್ಯಾಲಯದ ಸಿಬ್ಬಂದಿಗೆ ಲಘು ಉಪಾಹಾರ ಮತ್ತು ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.

ಗಿರಿಜನ ಉಪಯೋಜನೆ ಅನುದಾನವನ್ನು ಖರ್ಚು ಮಾಡುವ ಎಲ್ಲಾ ಇಲಾಖೆಗಳು ಫಲಾನುಭವಿಗಳ ವೈಯಕ್ತಿಕ ಸೌಲಭ್ಯಗಳ ಚೆಕ್‌ಗಳನ್ನು ಸಿದ್ಧಪಡಿಸಿ, ಅದರ ಪಟ್ಟಿ ನೀಡುವ ಜೊತೆಗೆ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರುವ ವ್ಯವಸ್ಥೆ ಮಾಡುವುದು, ರಸ್ತೆ ಸ್ವತ್ಛತೆ ಮತ್ತು ವೇದಿಕೆ ಸಿದ್ಧತೆ ಬಗ್ಗೆ ನಗರಸಭೆ ಪೌರಾಯುಕ್ತರು ಕ್ರಮ ಕೈಗೊಳ್ಳುವುದು, ಕಾರ್ಯಕ್ರಮಕ್ಕೂ ಮೊದಲು ತಹಶೀಲ್ದಾರ್‌ ಕಾರ್ಯಾಲಯದಿಂದ ಸುಭಾಶ್ಚಂದ್ರ ಬೋಸ್‌ ವೃತ್ತದ ಮಾರ್ಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭವನದವರೆಗೆ ನಡೆಸುವ ಭಾವಚಿತ್ರದ ಮೆರವಣಿಗೆಗೆ ವ್ಯವಸ್ಥೆ ಕೈಗೊಳ್ಳುವುದು, ಕಲಾ ತಂಡಗಳ ವ್ಯವಸ್ಥೆ ಮಾಡುವ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜದ ನಾಲ್ಕು ಜನ ಮುಖಂಡರನ್ನು ಸನ್ಮಾನಿಸಲು ಮತ್ತು ಶ್ರೀ ಮಹರ್ಷಿ ವಾಲ್ಮೀಕಿಯವರ ಬಗ್ಗೆ ಉಪನ್ಯಾಸ ನೀಡಲು ನುರಿತ ಉಪನ್ಯಾಸಕರ ಹೆಸರುಗಳನ್ನು ನೀಡುವಂತೆ ಜಿಲ್ಲಾ ವಾಲ್ಮೀಕಿ ಸಂಘದ ಸದಸ್ಯರಿಗೆ ತಿಳಿಸಿದರು.

ಸದರಿ ಜಯಂತಿ ಕಾರ್ಯಕ್ರಮದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್‌ ಇಲಾಖೆಗೆ ಸೂಚಿಸಲಾಯಿತು. ಕಾರ್ಯಕ್ರಮದ ನೋಡಲ್‌ ಅಧಿಕಾರಿಗಳನ್ನಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ.ಎಸ್‌. ಅಲ್ಲಾಬಕ್ಷ ಮತ್ತು ಶ್ರೀ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ನೇಮಿಸಲಾಯಿತು.

ಈ ಬಾರಿ ಅಕ್ಟೋಬರ್‌ 7ರಿಂದ ಆರಂಭವಾಗುವ ದಸರಾ ರಜೆ, ಅ. 21ಕ್ಕೆ ಮುಗಿಯುವುದರಿಂದ ಶಾಲಾ-ಕಾಲೇಜುಗಳಲ್ಲಿ ಜಯಂತಿ ಆಚರಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ
ಶ್ರೀಶೈಲ್‌ ಬಿರಾದಾರ ಸಭೆ ಗಮನಕ್ಕೆ ತಂದರು.  ಸರ್ಕಾರಿ ಸಭೆ-ಸಮಾರಂಭಗಳನ್ನು ಖಾಸಗಿ ಸಭಾಂಗಣದಲ್ಲಿ ಹಮ್ಮಿಕೊಳ್ಳುವ ಬದಲು ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಆಯೋಜಿಸಬೇಕು. ಇದರಿಂದ ಭವನದ ನಿರ್ವಹಣೆ ಮತ್ತು ಅಭಿವೃದ್ಧಿಗೆ ನೆರವಾಗುತ್ತದೆ ಎಂದು ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳನ್ನು ಕೋರಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ, ಡಿವೈಎಸ್‌ಪಿ ಶರಣಪ್ಪ, ಎಇಇ ಬಂಡೆಪ್ಪ ಆಕಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಸನಗೌಡ ಪಾಟೀಲ ಆಲ್ದಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ನಗರಸಭೆ ಮ್ಯಾನೇಜರ್‌ ಮಲ್ಲಿಕಾರ್ಜುನ, ಸಮಾಜದ
ಮುಖಂಡರಾದ ಭೀಮರಾಯ ಠಾಣಗುಂದಿ, ಸುದರ್ಶನ ನಾಯಕ, ಸಿದ್ದಲಿಂಗಪ್ಪ ನಾಯಕ, ಅಯ್ಯಣ್ಣ ನಾಯಕ ಠಾಣಗುಂದಿ, ಟಿ.ಎನ್‌. ಭೀಮುನಾಯಕ, ನಗರಸಭೆ ಸದಸ್ಯ ಹಣಮಂತಪ್ಪ ನಾಯಕ, ಶರಣಪ್ಪ ಜಾಕನಳ್ಳಿ, ಸಾಬಣ್ಣ ತಳಕ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.