ಒಂದೇ ಜಾತಿಗೆ ಸೀಮಿತರಲ್ಲ ವಾಲ್ಮೀಕಿ: ಡಿಸಿ
Team Udayavani, Nov 1, 2020, 6:45 PM IST
ಯಾದಗಿರಿ: ಆದಿಕವಿ ಮಹರ್ಷಿ ವಾಲ್ಮೀಕಿಯವರು ಒಂದು ಜಾತಿಗೆ ಸೀಮಿತವಲ್ಲ. ಅವರು ಇಡೀ ದೇಶದ ಎಲ್ಲಾ ಜನಾಂಗಕ್ಕೆ ಬೇಕಾದವರು. ವಾಲ್ಮೀಕಿಯವರ ಜೀವನ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಪ್ರಾಚೀನ ಸಂಸ್ಕೃತಿಯನ್ನು ಹೊಂದಿರುವ ಭಾರತದಲ್ಲಿ ಅನೇಕ ಋಷಿಗಳು, ಶರಣರು, ಸಂತರು ಜನಿಸಿದ್ದಾರೆ. ಅವರಲ್ಲಿ ಮಾನವ ಜನಾಂಗಕ್ಕೆ ಮಾರ್ಗದರ್ಶನ ನೀಡುವ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಆದಿಕವಿ ವಾಲ್ಮೀಕಿಯವರು ಪ್ರಮುಖರಾಗಿ ಕಾಣಿಸಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ಅವರು ಮಹರ್ಷಿಗಳು ಎಂದು ಕರೆಸಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ್ ಯಡಿಯಾಪುರ, ಜಿಪಂ ಸಿಇಒ ಶಿಲ್ಪಾ ಶರ್ಮಾ, ಎಸ್‌ಪಿ ಋಷಿಕೇಶ ಸೋನಾವನೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬಂದಿಗಳು ಸೇರಿದಂತೆ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಮರೆಪ್ಪ ನಾಯಕ ಮಗದಂಪುರ ಹಾಗೂ ಸಮಾಜದ ಮುಖಂಡರು ಇದ್ದರು.
ವಿದ್ಯಾರ್ಥಿನಿ ಸನ್ಮಾನ: ಎಸ್‌ಎಸ್ ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿನಿ ಸೌಜನ್ಯ ಅಯ್ಯಣ್ಣ ಅವರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ 1 ಲಕ್ಷ ರೂ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಯಾದಗಿರಿ: ರಾಮಾಯಣವನ್ನು ಸಮಾಜಕ್ಕೆ ನೀಡಿದ ವಾಲ್ಮೀಕಿ ಮಹರ್ಷಿ ಅವರು ಶ್ರೀರಾಮನಷ್ಟೇ ಪೂಜನೀಯ ಸಂತ. ಅವರು ಒಂದು ಸಮಾಜಕ್ಕೆ ಸೀಮಿತರಲ್ಲ ಎಂದು ಮಾಜಿ ಶಾಸಕ ಡಾ.ವೀರಬಸಂತರಡ್ಡಿ ಮುದ್ನಾಳ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವದ ಆದಿಕವಿ ಎನಿಸಿದ ಮಹರ್ಷಿ ವಾಲ್ಮೀಕಿ ಭಾತೃತ್ವ, ಸ್ನೇಹದ ಚಿಂತನೆಯನ್ನು ಸಮಾಜಕ್ಕೆ ನೀಡಿದರು. ಉಕ್ಕಿನ ಮನುಷ್ಯ ವಲ್ಲಭಭಾಯಿ ಪಟೇಲ್ ಅವರು, ತಮ್ಮ ಕಠಿಣ ನಿರ್ಧಾರಗಳ ಮೂಲಕ ದೇಶವನ್ನು ಸದೃಢವಾಗಿ ಕಟ್ಟಿದವರು ಎಂದು ತಿಳಿಸಿದರು.
ಖಂಡಪ್ಪ ದಾಸನ್, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್, ಯುಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ, ನಗರಸಭಾ ಸದಸ್ಯ ಮತ್ತು ನಗರ ಮಂಡಲ ಅಧ್ಯಕ್ಷ ಸುರೇಶ್
ಅಂಬಿಗೇರ ಮತ್ತು ಸ್ವಾಮಿದೇವ ದಾಸನಕೇರಿ, ಚಂದ್ರಕಾಂತ್ ಮಡ್ಡಿ, ಕೃಷ್ಣಾನಾಯಕ್ ನಾನೇಕ, ಮೊಹಮ್ಮದ್ ವಹಾಬ್, ಎಸ್.ಪಿ. ನಾಡಕರ್, ಶಂಕರ್ ಸೋನಾರ್, ಚಂದ್ರಕಾಂತ್ ಚವಾಣ್, ಕವಿತಾ ಮಾಲಿಪಾಟೀಲ್, ಮೌನೇಶ್ ಬೆಳಗೆರ,ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರ, ನಂದಪ್ಪ ಮುಂಡ್ರಿಗಿ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.