ಗ್ರಾಮ ವಾಸ್ತವ್ಯ ಒಂದು ಹಳ್ಳಿಗೆ ಸೀಮಿತವಲ್ಲ

Team Udayavani, Jun 11, 2019, 10:33 AM IST

yg-tdy-2..

ಯಾದಗಿರಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಯಾದಗಿರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜೂನ್‌ 21ರಂದು ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಟಿ.ಕೆ. ಅನಿಲಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜೂನ್‌ 12 ಮತ್ತು 13ರಂದು ನಡೆಯಲಿರುವ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನ ಸಭೆ ಹಾಗೂ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಯಿಂದ ಗ್ರಾಮ ವಾಸ್ತವ್ಯ ಆರಂಭಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಅವರ ಗ್ರಾಮ ವಾಸ್ತವ್ಯ ಒಂದು ಹಳ್ಳಿಗೆ ಮಾತ್ರ ಸೀಮಿತವಲ್ಲ. ಇಡೀ ಜಿಲ್ಲೆಯ ಕಾರ್ಯಕ್ರಮವನ್ನು ಒಂದು ಹಳ್ಳಿಯಲ್ಲಿ ಮಾಡುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ಪ್ರತಿ ಇಲಾಖಾವಾರು ಪ್ರಗತಿ ವರದಿ ಸಿದ್ಧಪಡಿಸಿಕೊಂಡಿರಬೇಕು. ಅಂದು ಕುಡಿಯುವ ನೀರು, ವಿದ್ಯುತ್‌ ಸೇರಿದಂತೆ ಯಾವುದೇ ರೀತಿಯ ಅನನಕೂಲವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ಅಭಿಪ್ರಾಯ ಪಡೆದು ಗ್ರಾಮ ವಾಸ್ತವ್ಯಕ್ಕೆ ಅನುಕೂಲಕರವಾದ ಶಾಲೆ ಹಾಗೂ ಸಾರ್ವಜನಿಕರ ಭೇಟಿ, ಸಾರ್ವಜನಿಕರೊಂದಿಗೆ ಸಂವಾದ ನಡೆಸಲು ವಿಸ್ತಾರವಾದ ಪ್ರದೇಶವನ್ನು ಗುರುತಿಸಬೇಕು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಹಾಗೂ ಸಂವಾದ ನಡೆಸಲು ಶಾಲೆಯಿಂದ ದೂರವಿರುವ ಸ್ಥಳದಲ್ಲಿ ವೇದಿಕೆ ನಿರ್ಮಾಣ ಮಾಡಬೇಕು. ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಅಧಿಕಾರಿ, ಸಿಬ್ಬಂದಿಗಳ ತಂಡಗಳನ್ನು ರಚಿಸಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ರೈತರ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದು, ಕೃಷಿಗೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಮಾಹಿತಿ ಹೊಂದಿರಬೇಕು. ಅಂದಿನ ಕಾರ್ಯಕ್ರಮದಲ್ಲಿ ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನದ ಮಾಹಿತಿ ನೀಡುವಂತಹ ನುರಿತ ತಂತ್ರಜ್ಞರನ್ನು ಆಹ್ವಾನಿಸಬೇಕು. ಚಂಡರಕಿ ಗ್ರಾಮದ ಎಲ್ಲಾ ಶಾಲೆಗಳ ಶೌಚಾಲಯಗಳನ್ನು ಹಾಗೂ ಅಗತ್ಯ ಮೂಲಭೂತ ಸೌಕರ್ಯವನ್ನು ಶಾಶ್ವತವಾಗಿ ಸುಧಾರಣೆ ಮಾಡಬೇಕು. ಗ್ರಾಮದ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಅಗತ್ಯ ಮೂಲಭೂತ ಸಮಸ್ಯೆಗಳನ್ನು ಪಟ್ಟಿ ಮಾಡಿ ಆದ್ಯತೆ ಮೇಲೆ ಕ್ರಮ ಕೈಗೊಂಡು ಪರಿಹರಿಸಬೇಕು. ಸಂಜೆ 6:00 ಗಂಟೆಯ ನಂತರ ಸ್ಥಳೀಯ ವಿದ್ಯಾರ್ಥಿಗಳು- ಕಲಾವಿದರ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಸಂಪೂರ್ಣ ಸಾರ್ವಜನಿಕ ಕಾರ್ಯಕ್ರಮವಾಗಿದೆ. ಗ್ರಾಮ ವಾಸ್ತವ್ಯ ಮುಗಿಯುವವರೆಗೂ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಎಲ್ಲಾ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿರಬೇಕು. ಇಲಾಖಾವಾರು ಬಂದಿರುವ ಸಾರ್ವಜನಿಕ ಅರ್ಜಿಗಳು ಎಷ್ಟು? ಇವುಗಳಲ್ಲಿ ವಿಲೇವಾರಿ ಹಾಗೂ ವಿಲೇವಾರಿಯಾಗದ ಅರ್ಜಿಗಳು ಎಷ್ಟು? ಎಂಬುದರ ಬಗ್ಗೆ ವರದಿ ಸಿದ್ಧಪಡಿಸಬೇಕು. ಅರ್ಜಿ ವಿಲೇವಾರಿಯಾಗದಿರುವುದಕ್ಕೆ ಕಾರಣ ಏನೆಂಬುದನ್ನು ಕೂಡ ವರದಿಯಲ್ಲಿ ನಮೂದಿಸಬೇಕು ಎಂದು ನಿರ್ದೇಶಿಸಿದರು.

ಸ್ಥಳೀಯವಾಗಿ ಸಾಮಾನ್ಯವಾಗಿ ಕಂಡು ಬರುವ ಕಂದಾಯ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ, ಲೋಕೋಪಯೋಗಿ ಇಲಾಖೆ, ಇಂಧನ ಇಲಾಖೆಗಳಲ್ಲಿನ ಸಮಸ್ಯೆ, ಬೇಡಿಕೆಗಳನ್ನು ಆದ್ಯೆತೆ ಮೇರೆಗೆ ವಿಲೇವಾರಿ ಮಾಡಬೇಕು. ಕಾರ್ಯಕ್ರಮದ ವೇದಿಕೆ, ಮೊಬೈಲ್ ಶೌಚಾಲಯ ಸೇರಿದಂತೆ ಇನ್ನಿತರ ಅಗತ್ಯ ಸಿದ್ಧತೆ ಕೈಗೊಂಡು ಗ್ರಾಮ ವಾಸ್ತವ್ಯ ಯಶಸ್ವಿಗೊಳಿಸುವ ಜವಾಬ್ದಾರಿ ಇಂಜಿನಿಯರಿಂಗ್‌ ಇಲಾಖೆಗಳ ಮೇಲಿದೆ ಎಂದು ಕಿವಿಮಾತು ಹೇಳಿದರು.

ಅಂದು ಬೆಳಗ್ಗೆ 10ರಿಂದ ಸಂಜೆ 6:00 ಗಂಟೆಯವರೆಗೆ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮ ಇರುತ್ತದೆ. ಕನಿಷ್ಠ ಐದು ಸಾವಿರ ಜನ ಬರುವ ನಿರೀಕ್ಷೆ ಇದೆ. ಆದ್ಯಾಗೂ ಜಿಲ್ಲೆಯ ತಹಶೀಲ್ದಾರರು ಕಾರ್ಯಕ್ರಮಕ್ಕೆ ಎಷ್ಟು ಜನ ಬರಬಹುದು ಎಂಬುದರ ಬಗ್ಗೆ ಸಂಘ-ಸಂಸ್ಥೆ ಅಥವಾ ಇನ್ನಿತರ ಮೂಲಗಳಿಂದ ಮಾಹಿತಿ ಪಡೆಯಬೇಕು. ಆಯಾ ಇಲಾಖೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ. ಇದರಿಂದ ಬೇಡಿಕೆ ರೂಪದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಮಾತನಾಡಿ, ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಬಂದಿರುವ ಸಾರ್ವಜನಿಕ ಅರ್ಜಿಗಳನ್ನು ಪರಿಶೀಲಿಸಿಕೊಳ್ಳಬೇಕು. ಒಂದು ವೇಳೆ ಫಲಾನುಭವಿಗಳಿಗೆ ಸೌಲಭ್ಯ ನೀಡುವಲ್ಲಿ ವಿಳಂಬ ಆಗಿದ್ದಲ್ಲಿ ತಕ್ಷಣ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಇದಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ.ಅನಿಲಕುಮಾರ ಇಲಾಖಾ ವಾರು ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ, ಜಿಲ್ಲಾ ಪಂಚಾಯಿತಿ ಪ್ರಭಾರ ಉಪ ಕಾರ್ಯದರ್ಶಿ ಡಾ| ವಿ. ಮುನಿರಾಜು, ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್‌. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.