ಸರ್ಕಾರಿ ಆಸ್ಪತ್ರೆಗೆ ಡಿಸಿ ಭೇಟಿ
Team Udayavani, Oct 27, 2018, 3:14 PM IST
ಶಹಾಪುರ: ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಇಲ್ಲಿನ ಅವ್ಯವಸ್ಥೆ ಕಂಡು ತಾಲೂಕು ವೈದ್ಯಾ ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆ ಸ್ವತ್ಛತೆಯಿಂದ ಕೂಡಿಲ್ಲ.
ಎಲ್ಲೆಂದರಲ್ಲಿ ಅಸ್ತವ್ಯಸ್ತ ಇದೆ. ಸಮರ್ಪಕ ಬೆಡ್ ವ್ಯವಸ್ಥೆ ಇಲ್ಲ. ಹಳೇ ಗಾದಿ ಮಂಚ, ಕುರ್ಚಿಗಳು ಆಸ್ಪತ್ರೆಯ ದುಸ್ಥಿತಿ ಸೂಚಿಸುತ್ತಿವೆ. ಅಲ್ಲದೆ ಸಿಬ್ಬಂದಿ ಕರ್ತವ್ಯ ಲೋಪ ಕಂಡು ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬಯೋಮೆಟ್ರಿಕ್ ವ್ಯವಸ್ಥೆ ಇಲ್ಲ. ಸಿಸಿ ಕ್ಯಾಮರಾ ಚಾಲನೆಯಲ್ಲಿಲ್ಲ ಅಂದರೆ ಹೇಗೆ? ಸಿಬ್ಬಂದಿ ಬಯೋಮೆಟ್ರಿಕ್ ಮತ್ತು ಸಿಸಿ ಕ್ಯಾಮರಾ ಮೊದಲು ಅಳವಡಿಸಿದ್ದರೆ ದುರಸ್ತಿಗೊಳಿಸಿ ಎಂದು ಇಲ್ಲಿನ ಆರೊಗ್ಯ ಅಧಿಕಾರಿ ಡಾ| ರಮೇಶ ಗುತ್ತೇದಾರ ಅವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಟಿಎಚ್‌ಒ ಡಾ| ರಮೇಶ, ಪೌರಾಯುಕ್ತ ಬಸವರಾಜ ಶಿವಪೂಜೆ, ಉಪ ತಹಶೀಲ್ದಾರ್ ಶ್ರೀಧರಾಚಾರ್ಯ ಕುಲಕರ್ಣಿ, ಭಗವಂತ ಅನವಾರ, ಜೆಇ ಬಕ್ಕಪ್ಪ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ವೈದ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.