ವಿಮಾನ ನಿಲ್ದಾಣಕ್ಕೆ ಡಿಸಿ ಭೇಟಿ
Team Udayavani, Jun 20, 2018, 5:37 PM IST
ಕಲಬುರಗಿ: ಹಲವು ದಶಕಗಳಿಂದ ನಿರೀಕ್ಷಿಸಲಾಗುತ್ತಿರುವ ಕಲಬುರಗಿಯಿಂದ ವಿಮಾನ ಹಾರಾಟದ ಕಾಲ ಸನ್ನಿಹಿತವಾಗುವ ಲಕ್ಷಣಗಳು ಕಂಡು ಬಂದಿದ್ದು, ಮುಂದಿನ ಒಂದುವರೆ ಇಲ್ಲವೇ ಎರಡು ತಿಂಗಳಲ್ಲಿ ಶುಭಾರಂಭಗೊಳ್ಳುವ ಸಾಧ್ಯತೆಗಳಿವೆ.
ಶ್ರೀನಿವಾಸ ಸರಡಗಿ ಹತ್ತಿರದ ಗುಲಬರ್ಗಾ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ
ಮಂಗಳವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಮುಂದಿನ ಒಂದೂವರೆ ತಿಂಗಳುಗಳಲ್ಲಿ ವಿಮಾನ ನಿಲ್ದಾಣ ಸಂಪೂರ್ಣ ಕಾರ್ಯ ನಿರ್ವಹಿಸುವಂತೆ ಎಲ್ಲ ಕಾಮಗಾರಿ ಗಳನ್ನು ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ವಿಮಾನ ನಿಲ್ದಾಣದ 3.25 ಕಿ.ಮೀ. ರನವೇ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದೆ. ಬಹು ಮುಖ್ಯವಾಗಿ
ಮಾರ್ಕಿಂಗ್ ಮಾಡಬೇಕು. ವಿಮಾನ ನಿಲ್ದಾಣದ ಜೀವಾಳವೆಂದೇ ಭಾವಿಸಲಾಗಿರುವ ಎಟಿಸಿ ಕಟ್ಟಡ, ಫೈರ್
ಸ್ಟೇಶನ್ ಹಾಗೂ ಟರ್ಮಿನಲ್ ಬಿಲ್ಡಿಂಗ್ ನಿರ್ಮಾಣ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ರನ್‌ವೇ ಕಾಮಗಾರಿ
ಹಾಗೂ ಕಾಂಪೌಂಡ್ ಗೋಡೆ ಸಂಪೂರ್ಣವಾಗಿ ನಿರ್ಮಿಸಿದಲ್ಲಿ ರಾಜ್ಯ ಸರ್ಕಾರದ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯಿಂದ ಯಾವುದೇ ಸಮಯದಲ್ಲಿ ಪ್ರಾಯೋಗಿಕವಾಗಿ ವಿಮಾನ ಹಾರಾಟ ನಡೆಸಲು ಸಿದ್ಧವಾಗುವುದರಿಂದ ಆದಷ್ಟು ಬೇಗ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ವಿಮಾನ ನಿಲ್ದಾಣ ಕಾಮಗಾರಿಯ ಮೊತ್ತವನ್ನು ಪರಿಷ್ಕೃತ 175 ಕೋಟಿ ರೂ.ಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಇದಕ್ಕೆ ಅನುಗುಣವಾಗಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪಾಲನ್ನು ನೀಡಲಾಗುವುದು. ಈಗಾಗಲೇ ವಿಮಾನ ನಿಲ್ದಾಣ ಕಾಮಗಾರಿಗೆ 92 ಕೋಟಿ ರೂ.ಗಳನ್ನು ಪಾವತಿಸಲಾಗಿದ್ದು, ಹಣಕಾಸಿನ ಯಾವುದೇ ತೊಂದರೆ ಇರುವುದಿಲ್ಲ ಎಂದು ಹೇಳಿದರು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಜೀಜುದ್ದೀನ್, ಇಂಜನೀಯರ್ ಎಂ. ಜಗದೇವ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.