ಜಿಲ್ಲಾಧಿಕಾರಿಗಳಿಂದ ಮತಯಂತ್ರ, ವಿವಿಪ್ಯಾಟ್ ಪರಿಶೀಲನೆ
Team Udayavani, Feb 26, 2018, 5:27 PM IST
ಯಾದಗಿರಿ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಿಂದ ಮತಯಂತ್ರಗಳು ಜಿಲ್ಲೆಗೆ ತರಲಾಗಿದ್ದು, ಸಿಸಿ ಕ್ಯಾಮರಾ, ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಸುರಕ್ಷಿತವಾಗಿಡಲಾಗಿದೆ.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮಿನಲ್ಲಿ 1500 ಬ್ಯಾಲೆಟ್ ಯೂನಿಟ್, 1300 ಕಂಟ್ರೋಲ್ ಯೂನಿಟ್‌ಗಳನ್ನು ಸಂಗ್ರಹಿಸಿಡಲಾಗಿದೆ. ಇನ್ನೂ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ವಿವಿ ಪ್ಯಾಟ್ ಬಳಸಲಾಗುತ್ತಿದೆ. ಈ ವಿವಿಪ್ಯಾಟ್‌ಗಳನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಚುನಾವಣಾ ಶಾಖೆಯಲ್ಲಿ ಸಂಗ್ರಹಿಸಿಡಲಾಗಿದೆ.
ಈ ಬಾರಿ ಚುನಾವಣೆಯಲ್ಲಿ ವಿವಿ ಪ್ಯಾಟ್‌ನಲ್ಲಿ ಮತದಾರರು ಯಾರಿಗೆ ಮತ ಹಾಕಿದ್ದೇವೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ಬೆಂಗಳೂರಿನ ಜಾಲಹಳ್ಳಿ ಬಳಿಯಲ್ಲಿರುವ ಭಾರತ ಎಲೆಕ್ಟ್ರಿಕಲ್ ಲಿಮಿಟೆಡ್ ವತಿಯಿಂದ 1420 ಯಂತ್ರಗಳು ಜಿಲ್ಲೆಗೆ ಬಂದಿದ್ದು, ಪೊಲೀಸ್ ಸುರ್ಪದಿಯಲ್ಲಿ ಬಿಗಿ ಭದ್ರತೆ ನೀಡಲಾಗಿದೆ. ವಿವಿ ಪ್ಯಾಟ್‌ಗಳ ಭದ್ರತೆಗಾಗಿ ಮೂರು ಜನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಉತ್ತರ ಪ್ರದೇಶದಿಂದ ಬಂದಿರುವ ಮತ ಯಂತ್ರಗಳ ಭದ್ರತೆಗಾಗಿ ಆರು ಜನ ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ವಿಧಾನಸಭೆ ಚುನಾವಣೆಗಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ ಮತಯಂತ್ರಗಳು ಬಂದಿವೆ. ಶೀಘ್ರದಲ್ಲಿಯೇ ಭಾರತ ಎಲೆಕ್ಟ್ರಿಕಲ್ ಲಿಮಿಟೆಡ್‌ನ ತಂಡದ ಸದಸ್ಯರು ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲೆಯ ವಿವಿಧ ಪಕ್ಷದ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಮತಯಂತ್ರಗಳ ಪರಿಶೀಲನೆ ನಡೆಸಲಾಗುವುದು. ಕೆಟ್ಟು ಹೋಗಿರುವ ಮತಯಂತ್ರಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜೆ. ಮುಂಜುನಾಥ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.