ಸೌಕರ್ಯಗಳಿಲ್ಲದೆ ವಾಗಣಗೇರಾ ಒಣ ಒಣ
•ಕುಡಿಯುವ ನೀರಿಗೆ ಹಾಹಾಕಾರ•ಅಧಿಕಾರಿ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ
Team Udayavani, Jul 9, 2019, 12:10 PM IST
ಸುರಪುರ: ವಾಗಣಗೇರಾ ಗ್ರಾಮದ ಕಿಲ್ಲಾ ಮೇಲೆ ನಿರ್ಮಿಸಿರುವ ನೀರಿನ ಟ್ಯಾಂಕ್.
ಸುರಪುರ: ತಾಲೂಕು ಕೇಂದ್ರದಿಂದ ಕೇವಲ 10 ಕಿ.ಮೀಟರ್ ಅಂತರದಲ್ಲಿರುವ ವಾಗಣಗೇರಾ ಗ್ರಾಮದಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲದೆ ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ಉಂಟಗಿದೆ.
ಗಬ್ಬೆದ್ದು ನಾರುತಿರುವ ಚರಂಡಿಗಳು, ತ್ಯಾಜ್ಯ ನೀರು ರಸ್ತೆ ಮೇಲೆ ಹರಿಯುವ ಕೊಳಚೆ ನೀರು. ಮನೆಗಳ ಪಕ್ಕದಲ್ಲಿಯೇ ತಿಪ್ಪೆ ಗುಂಡಿ, ಕುಡಿಯುವ ನೀರಿಗೂ ಜನರ ಪರದಾಟ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆ ಕಾಡುತ್ತಿದೆ.
ಗ್ರಾಮದಲ್ಲಿ ಸುಮಾರು 400 ಕುಟುಂಬಗಳಿವೆ. 6000 ಸಾವಿರಕ್ಕೂ ಮೇಲ್ಪಟ್ಟ ಜನಸಂಖ್ಯೆ ಹೊಂದಿದೆ. 8 ಜನ ಗ್ರಾಪಂ ಸದಸ್ಯರಿದ್ದು, ಓರ್ವ ತಾಪಂ ಸದಸ್ಯನಿದ್ದು, ಗ್ರಾಪಂ ಕೇಂದ್ರ ಸ್ಥಾನ ಹೊಂದಿದೆ. ಕಚೇರಿ ಮತ್ತು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದರೂ ಕುಡಿಯುವ ನೀರಿನ ಸಮಸ್ಯೆಗೆ ಮಾತ್ರ ಮುಕ್ತಿ ಸಿಕ್ಕಿಲ್ಲ.
2014-15ರಲ್ಲಿ 22 ಲಕ್ಷ ರೂ. ವೆಚ್ಚದಲ್ಲಿ ನೀರಿನ ಟ್ಯಾಂಕ್ ನಿರ್ಮಿಸಲಾಗಿದೆ. ಕಳಪೆ ಕಾಮಗಾರಿಯಿಂದ ಟ್ಯಾಂಕ್ ಸಂಪೂರ್ಣ ಸೋರುತ್ತಿದೆ. ಹೀಗಾಗಿ ಇದುವರೆಗೂ ಟ್ಯಾಂಕ್‌ಗೆ ನೀರು ಹರಿಸಿಲ್ಲ. ಗುತ್ತಿಗೆದಾರರು ಪೈಪ್‌ಲೈನ್ ಕಾಮಗಾರಿ ಅಪೂರ್ಣಗೊಳಿಸಿ ಬಿಲ್ ಎತ್ತಿ ಹಾಕಿದ್ದಾರೆ. ಸರಕಾರದ ಅನುದಾನ ಅನಗತ್ಯ ಪೋಲು ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ನೂರಾರು ಜನ ಸೇರಿ ತಾಲೂಕು ಪಂಚಾಯಿತಿ ಕಚೇರಿಗೆ ಎರಡು ಬಾರಿ ಮುತ್ತಿಗೆ ಹಾಕಿ ಖಾಲಿ ಕೊಡಗಳ ಪ್ರದರ್ಶನ ಮಾಡಿದ್ದೇವೆ. ಸಮಸ್ಯೆ ಬಗೆಹರಿಸುವಂತೆ ಶಾಸಕರು ಗ್ರಾಮೀಣ ನೀರು ಸರಬರಾಜು ಇಲಾಖೆಯವರಿಗೆ ತಾಕೀತು ಮಾಡಿದ್ದಾರೆ. ಆದರೆ ಇಲಾಖೆ ಎಇಇ ಹಣಮಂತಪ್ಪ ಅಂಬ್ಲಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗುತ್ತಿಲ್ಲ. ಶಾಸಕರ ಮಾತಿಗೆ ಯಾವುದೇ ಕಿಮ್ಮತ್ತು ನೀಡುತ್ತಿಲ್ಲ. ಹೀಗಾಗಿ ನೀರಿನ ಸಮಸ್ಯೆ ತಪ್ಪುತ್ತಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತ ಪಡಿಸಿದ್ದಾರೆ.
ನೀರಿಗಾಗಿ ಜಮೀನುಗಳತ್ತ ಲಗ್ಗೆ:
ಘಟಕಕ್ಕಿಲ್ಲ ಉದ್ಘಾಟನೆ ಭಾಗ್ಯ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.