ಮತಕ್ಕಾಗಿ ನಡೆದಿದೆ ಬಿಸಿಲಿನಲ್ಲೂ ಕಸರತ್ತು


Team Udayavani, Apr 20, 2018, 5:39 PM IST

yad-.jpg

ಯಾದಗಿರಿ: ಬಿಸಿಲನಗರಿ ಯಾದಗಿರಿ ಗುಡ್ಡ ಬೆಟ್ಟಗಳಿಗೆ ಹೆಸರುವಾಸಿ. ಇಲ್ಲಿನ ಬಿಸಿಲಿಗೆ ಜನ ಸಾಮಾನ್ಯರು ಮನೆ ಬಿಟ್ಟು ಹೊರಗಡೆ ಬರಲು ಹೆದರುತ್ತಿದ್ದರೆ, ಆದರೆ ಅಭ್ಯರ್ಥಿಗಳು ಮಾತ್ರ ಮುಖಂಡರೊಂದಿಗೆ ಬಿಸಿಲನ್ನು ಲೆಕ್ಕಿಸದೆ ಚುನಾವಣಾ ಪ್ರಚಾರದಲ್ಲಿ ಧುಮುಕಿದ್ದಾರೆ. ಕಳೆದ ಐದು ವರ್ಷದಲ್ಲಿ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸದೆ, ಎಸಿ ರೂಮ್‌ನಲಿದ್ದ ನಾಯಕರು ಪ್ರಚಾರಕ್ಕಾಗಿ ಬಿಸಿಲಿನಲ್ಲಿಯೇ ಗ್ರಾಮಗಳಲ್ಲಿ ತೆರಳಿ ಪ್ರಚಾರ ಮಾಡಿ ಬೆವರು ಸುರಿಸುತ್ತಿದ್ದಾರೆ. 

ಕಾಂಗ್ರೆಸ್‌ ಅಭ್ಯರ್ಥಿ ಡಾ| ಎ.ಬಿ. ಮಾಲಕರೆಡ್ಡಿ, ಬಿಜೆಪಿ ಅಭ್ಯರ್ಥಿ ಡಾ| ವೆಂಕಟರೆಡ್ಡಿ ಮುದ್ನಾಳ ಹಾಗೂ ಜೆಡಿಎಸ್‌ ಅಭ್ಯರ್ಥಿ ಎ.ಸಿ. ಕಾಡ್ಲೂರ ಈಗಾಗಲೇ ವಡಗೇರಾ, ಹಯ್ನಾಳ, ದೋರಹಳ್ಳಿ ಜಿಪಂ ವ್ಯಾಪ್ತಿಯಲ್ಲಿ ಪ್ರತಿದಿನ 8 ಗಂಟೆ ಹಳ್ಳಿಗಳಲ್ಲಿ ಪ್ರಚಾರ ಪ್ರಚಾರ ಮಾಡುತ್ತಿದ್ದಾರೆ.

ಜೆಡಿಎಸ್‌ ಪಕ್ಷ ತನ್ನ ಅಭ್ಯರ್ಥಿಯನ್ನು ಹದಿನೈದು ದಿನಗಳ ಮುಂಚೆಯೇ ಪ್ರಕಟಿಸಿದ್ದ ಜೆಡಿಎಸ್‌ ಅಭ್ಯರ್ಥಿ ಎ.ಸಿ. ಕಾಡ್ಲೂರ ಅವರು ಈಗಾಗಲೇ ತಮ್ಮ ಕಾರ್ಯಕರ್ತರೊಂದಿಗೆ ಕ್ಷೇತ್ರದಾದ್ಯಂತ ಪ್ರಚಾರ ಮಾಡಿದ್ದಾರೆ. ಇನ್ನೂ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳ ಘೋಷಣೆ ನಾಲೈದು ದಿನಗಳ ಹಿಂದೆ ಆಗಿದ್ದು, ಅವರು ಸಹ ಟಿಕೆಟ್‌ ಘೋಷಣೆ ಆಗುತ್ತಿದ್ದಂತೆ ಪ್ರಚಾರದಲ್ಲಿ ತೊಡಗಿದ್ದು, ಮತದಾರರ ಕೈ ಮುಗಿದು
ಮತ ಹಾಕುವಂತೆ ಬೇಡಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ.

ಯಾದಗಿರಿ ಮತಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಲಿ ಶಾಸಕ ಡಾ| ಎ.ಬಿ. ಮಾಲಕರೆಡ್ಡಿ ಅವರು ಆರನೇ ಬಾರಿಗೆ ಶಾಸಕರಾಗಬೇಕೆಂಬ ಹಂಬಲದೊಂದಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ತಮ್ಮ ಕಾರ್ಯಕರ್ತರೊಂದಿಗೆ 83ರ ಇಳಿ ವಯಸ್ಸಿನಲ್ಲಿಯೂ ಪ್ರಚಾರ ಕೈಗೊಂಡಿದ್ದಾರೆ. ಇನ್ನೊಂದೆಡೆ ಭಾರತೀಯ ಜನತಾ ಪಕ್ಷ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಅವರ ಬದಲು ಅವರ ಸಹೋದರ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಯಾದಗಿರಿ ಮತಕ್ಷೇತ್ರದಲ್ಲಿ ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಅವರು ತಮ್ಮ ಹಿಡಿತವನ್ನು ಹೊಂದಿದ್ದಾರೆ. ಆದರೆ ತಮ್ಮ ಸಹೋದರ ವೆಂಕಟರೆಡ್ಡಿ ಟಿಕೆಟ್‌ ದೊರೆದಿದ್ದು, ಅವರ ಬೆಂಬಲವಾಗಿ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅದು ಎಷ್ಟರ ಮಟ್ಟಿಗೆ ಅವರಿಗೆ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಲಾಭ ತಂದು ಕೊಡಲಿದೆ ಎಂಬುದು ಕಾಯ್ದು ನೋಡಬೇಕಿದೆ. 

ಇನ್ನೂ ಸುರಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಬಿಜೆಪಿ ಅಭ್ಯರ್ಥಿ ರಾಜುಗೌಡ, ಜೆಡಿಎಸ್‌ ಅಭ್ಯರ್ಥಿ ರಾಜಾ ಕೃಷ್ಣಪ್ಪ ನಾಯಕ, ಶಹಾಪುರ ಮತಕ್ಷೇತ್ರದಲ್ಲಿ ಹಾಲಿ ಶಾಸಕ ಗುರು ಪಾಟೀಲ, ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ, ಜೆಡಿಎಸ್‌ ಅಭ್ಯರ್ಥಿ ಅಮೀನ್‌ರೆಡ್ಡಿ ಯಾಳಗಿ, ಗುರುಮಠಕಲ್‌ ಮತಕ್ಷೇತ್ರದಲ್ಲಿ ಹಾಲಿ ಶಾಸಕ ಬಾಬುರಾವ್‌ ಚಿಂಚನಸೂರ, ಬಿಜೆಪಿ ಅಭ್ಯರ್ಥಿ ಸಾಯಿಬಣ್ಣ ಬೋರಬಂಡಾ, ಜೆಡಿಎಸ್‌ ಅಭ್ಯರ್ಥಿ ನಾಗಣ್ಣಗೌಡ ಕಂದಕೂರ ಅವರು ನಾಮಪತ್ರ ಸಲ್ಲಿಸುವ ಮುಂಚೆಯೇ ಪ್ರಚಾರಕ್ಕೆ ಧಮುಕಿದ್ದು, ಮತದಾರರು ಯಾರಿಗೆ ಆರ್ಶೀವಾದ ಮಾಡಲಿದ್ದಾರೆ ಎಂಬುದು ಮೇ. 12ರ ಚುನಾವಣೆ ನಿರ್ಧರಿಸಲಿದೆ
 
ಖಾಸಗಿ ವಾಹನ ಮಾಲೀಕರಿಗೆ ಲಾಭ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕೆಲವರಿಗೆ ಮುಳುವಾಗಿದ್ದರೆ, ಇನ್ನು ಖಾಸಗಿ ವಾಹನ ಮಾಲೀಕರಿಗೆ ಚುನಾವಣೆ ಬಂಪರ್‌ ಲಾಭ ತಂದುಕೊಡುತ್ತಿದೆ. ಎಲ್ಲ ರಾಜಕೀಯ ಪಕ್ಷಗಳು ಖಾಸಗಿ ವಾಹನಗಳನ್ನು ಪಡೆದು ಗ್ರಾಮ ಗ್ರಾಮಗಳಿಗೆ ಪ್ರಚಾರಕ್ಕೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಒಂದು ತಿಂಗಳು ಬುಕ್‌ ಮಾಡಿಕೊಳ್ಳಲಾಗಿದೆ. ಈಗಾಗಲೇ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಆ ನಿಟ್ಟಿನಲ್ಲಿ ಮತ ಬ್ಯಾಂಕ್‌ ಭದ್ರಪಡಿಸಲು ಎಲ್ಲ ರಾಜಕೀಯ ತಂತ್ರ ರೂಪಿಸಿವೆ. ರಾಜಕೀಯ ತಂತ್ರದಲ್ಲಿ ಯಾರು ಯಶಸ್ವಿಯಾಗಿದ್ದಾರೆ ಎಂಬುದು ಚುನಾವಣೆ ಫಲಿತಾಂಶ ನಿರ್ಧರಿಸಲಿದೆ.

„ರಾಜೇಶ ಪಾಟೀಲ್‌ ಯಡ್ಡಳ್ಳಿ

ಟಾಪ್ ನ್ಯೂಸ್

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಸಂಚಾರ: ಬಿಸಿಸಿಐ ನಿಂದ ತೀವ್ರ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.