ಮಾ.17ರವರೆಗೆ ನೀರು ಹರಿಸಲು ನಿರ್ಧಾರ
Team Udayavani, Nov 24, 2021, 4:13 PM IST
ಸುರಪುರ: ಹಿಂಗಾರು ಹಂಗಾಮಿನ ಬೆಳೆಗಳಿಗೆ ನಾರಾಯಣಪುರ ಜಲಾಶಯದಿಂದ ಕಾಲುವೆಗಳಿಗೆ ಮಾ. 17ರ ವರೆಗೆ ನೀರು ಹರಿಸುವ ಕುರಿತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ರೈತರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ರಾಜುಗೌಡ ರೈತರಿಗೆ ಅಭಯ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಜರುಗಿದ ಐಸಿಸಿ ಸಭೆ ನಂತರ ದೂರವಾಣಿ ಮೂಲಕ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರೈತರು ಈ ಬಾರಿ ಕಾಲುವೆಗೆ ನೀರು ಬರುತ್ತದೆಯೋ ಇಲ್ಲವೋ ಎಂಬ ಆತಂಕದಲ್ಲಿದ್ದರು. ಸಮಿತಿಯ ನಿರ್ಧಾರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದರು. ಸಭೆ ಪ್ರಮುಖವಾದ ನಿರ್ಧಾರ ಕೈಗೊಂಡಿರುವುದು ಹರ್ಷ ತಂದಿದೆ. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನೀರಾವರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಕ್ಷೇತ್ರದ ರೈತರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಡಿಸೆಂಬರ್‌ನಿಂದ ಮಾ. 17ರ ವರೆಗೆ ನೀರು ಹರಿಸಲಾಗುತ್ತಿದೆ. ವಾರಬಂದಿ ಪ್ರಕಾರ 10 ದಿನ ಬಂದ್ ಮಾಡಿ 14 ದಿನ ನೀರು ಹರಿಸಲಾಗುತ್ತಿದೆ. ರೈತರು ವ್ಯರ್ಥ ಕಾಲಕಳೆಯದೆ ತ್ವರಿತವಾಗಿ ಭಿತ್ತನೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಬೇಗ ಭಿತ್ತನೆ ಮಾಡಿದಲ್ಲಿ ನಿರೀಕ್ಷಿತ ಅವಧಿಯೊಳಗೆ ಫಸಲು ಕೈಗೆ ಬರುತ್ತದೆ. ಆದ್ದರಿಂದ ಬೇಗನೆ ಭಿತ್ತನೆ ಮಾಡುವಂತೆ ಕೈಮುಗಿದು ಕೇಳುವುದಾಗಿ ಶಾಸಕರು ರೈತರಲ್ಲಿ ಕಳಕಳಿಯ ಮನವಿ ಮಾಡಿದರು.
ಇದಕ್ಕೂ ಮೊದಲು ನಾನು ರೈತರಿಗೆ ಭರವಸೆ ನೀಡಿದ್ದೆ. ಭರವಸೆಯಂತೆ ನಡೆದುಕೊಂಡಿದ್ದೇನೆ. ಸುಳ್ಳು ಸುದ್ದಿ ಹಬ್ಬಿಸಿ ರೈತರಿಗೆ ದಾರಿ ತಪ್ಪಿಸುತ್ತಿದ್ದವರಿಗೆ ಸಭೆ ಸರಿಯಾದ ನಿರ್ಧಾರದ ಮೂಲಕ ತಕ್ಕ ಉತ್ತರ ನೀಡಿದೆ. ಮಾ. 17ರ ವರೆಗೆ ನೀರು ಬರಲಿದೆ. ರೈತರು ನಿರಾತಂಕವಾಗಿ ಭಿತ್ತನೆ ಮಾಡಬೇಕು ಎಂದು ರೈತರಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.