ಜಲಾಶಯದಿಂದ ಕೃಷ್ಣಾ ನದಿಗೆ ನೀರು ಸಾಧ್ಯತೆ
Team Udayavani, Jun 24, 2022, 5:32 PM IST
ನಾರಾಯಣಪುರ: ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬಸವಸಾಗರ ಜಲಾಶಯಕ್ಕೆ ಒಂದೊಮ್ಮೆ ಒಳ ಹರಿವು ಹೆಚ್ಚಾಗಿ ಜಲಾಶಯದ ಗರಿಷ್ಠ ಮಟ್ಟಕ್ಕೆ ನೀರು ಬಂದರೆ ಜಲಾಶಯದಿಂದ ಕೃಷ್ಣಾ ನದಿಗೆ ಯಾವುದೇ ಸಂದರ್ಭದಲ್ಲಿ ನೀರು ಹರಿಬಿಡುವ ಸಾಧ್ಯತೆಗಳಿದ್ದು, ಹೀಗಾಗಿ ನದಿ ತೀರದ ಗ್ರಾಮಗಳ ಜನ ಜಾನುವಾರುಗಳು ನದಿಗೆ ಇಳಿಯದಂತೆ ಮುಂಜಾಗ್ರತೆ ವಹಿಸಬೇಕೆಂದು ಕೃಷ್ಣಾ ಭಾಗ್ಯ ಜಲ ನಿಗಮದ ಅಣೆಕಟ್ಟು ವಿಭಾಗದ ಪ್ರಭಾರ ಕಾರ್ಯನಿರ್ವಾಹಕ ಎಂಜಿನಿಯರ್ ಎಂ. ಪ್ರಕಾಶ ತಿಳಿಸಿದರು.
ಪತ್ರಿಕೆಗೆ ಮಾಹಿತಿ ನೀಡಿರುವ ಅವರು, ಹವಾಮಾನ ಇಲಾಖೆ ಪ್ರಕಾರ ಜೂ. 24ರಿಂದ ಜೂ. 26ರವರೆಗೂ ಕರ್ನಾಟಕದ ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು ಹಾಗೂ ಕಲಬುರ್ಗಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಜಲಾಶಯದಲ್ಲಿ 492.25 ಮೀಟರ್ ನೀರಿನ ಮಟ್ಟದಲ್ಲಿ 490.97 ಮೀಟರಿಗೆ ನೀರು ಇದ್ದು 27.72 ಟಿಎಂಸಿ ಇದೆ. ಜಲಾಶಯ ಭರ್ತಿಗೆ 5 ಟಿಎಂಸಿ ಅಡಿ ನೀರಿನ ಅವಶ್ಯಕತೆ ಇದೆ.
ಒಂದೊಮ್ಮೆ ಬಸವಸಾಗರ ಜಲಾಶಯಕ್ಕೆ ಒಳಹರಿವು ಆರಂಭವಾದರೆ ಯಾವುದೇ ಸಂದರ್ಭದಲ್ಲಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತದೆ ಹೀಗಾಗಿ ಅಣೆಕಟ್ಟು ಕೆಳ ಭಾಗದ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಕೃಷ್ಣಾ ನದಿ ಪಾತ್ರಗಳ ಗ್ರಾಮಗಳ ಜನ, ಜಾನುವಾರುಗಳ ಸುರಕ್ಷತೆಗೆ ಎರಡು ಜಿಲ್ಲಾಡಳಿತಗಳಿಗೆ ಪ್ರವಾಹ ಮುನ್ಸೂಚನೆ ಕುರಿತು ಅಗತ್ಯ ಕ್ರಮ ವಹಿಸುವಂತೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು. ಎ.ಇ. ಬಾಲಸುಬ್ರಹ್ಮಣ್ಯಂ, ವಿಜಯ ಅರಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.