ಯಾದಗಿರಿ: 2000 ಗಡಿ ದಾಟಿದ ಕೋವಿಡ್
Team Udayavani, Jul 28, 2020, 10:19 AM IST
ಯಾದಗಿರಿ: ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ಮುಂದುವರಿದಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿ 2052ಕ್ಕೆ ತಲುಪಿದೆ. ಸೋಮವಾರ ಮತ್ತೆ 64 ಜನರಿಗೆ ಸೋಂಕು ದೃಢವಾಗಿದೆ.
ಸುರಪುರ ತಾಲೂಕಿನ ರಂಗಂಪೇಟ್ ಬಡೆಬಜಾರ್‌ನ 7 ವರ್ಷದ ಬಾಲಕ ಪಿ-105443 ಸೇರಿದಂತೆ ಒಂಬತ್ತು ಜನ ಐಎಲ್‌ಐ ಲಕ್ಷಣವಿರುವ ಜನರು ಸೋಂಕಿಗೆ ತುತ್ತಾಗಿದ್ದಾರೆ. ಇನ್ನುಳಿದಂತೆ ಸೋಂಕು ದೃಢಪಟ್ಟಿರುವ 55 ಜನರ ಸಂಪರ್ಕ ಪತ್ತೆಯಾಗಿಲ್ಲ. ಯಾದಗಿರಿ ನಗರ ಮತ್ತು ಗ್ರಾಮೀಣ ಶಹಾಪುರ ಹಾಗೂ ಸುರಪುರ ತಾಲೂಕಿನ ವಿವಿಧ ಗ್ರಾಮಗಳ ಜನರಿಗೆ ಸೋಂಕು ಹರಡಿದ್ದು 40 ಪುರುಷರು, 24 ಮಹಿಳೆಯರು ಕೊರೊನಾಗೆ ತುತ್ತಾಗಿದ್ದಾರೆ.
ಸೋಮವಾರ 353 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 230 ಜನರ ವರದಿ ನೆಗೆಟಿವ್ ಬಂದಿವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 3791 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 5505 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 167 ಕಂಟೈನ್ಮೆಂಟ್ ಝೋನ್‌ಗಳನ್ನು ರಚಿಸಲಾಗಿದೆ.
ಹೊಸ ಜಿಲ್ಲಾಸ್ಪತ್ರೆಯಲ್ಲಿ 195 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 63, ಸುರಪುರ 92 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್ ಕೇರ್ ಸೆಂಟರ್ ನಲ್ಲಿ 109 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಪ್ರಭಾರಿ ಅಪರ ಜಿಲ್ಲಾ ಧಿಕಾರಿ ಶಂಕರಗೌಡ ಎಸ್. ಸೋಮನಾಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.