ಅತಿ ಹೆಚ್ಚು ಮತದಾನ; ಯಾರಿಗೆ ವರದಾನ?

Team Udayavani, Apr 19, 2021, 7:24 PM IST

19-25

„ಮಲ್ಲಿಕಾರ್ಜುನ ಚಿಲ್ಕರಾಗಿ

ಮಸ್ಕಿ: ಉಪಚುನಾವಣೆ ಮೂಲಕ ರಾಜ್ಯದ ಗಮನ ಸೆಳೆದ ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಅತ್ಯಧಿ ಕ ಮತದಾನ ದಾಖಲಾಗಿದೆ. ಶೇ.70ರ ಗಡಿದಾಟಿದ ಮತ ಪ್ರಮಾಣ ಯಾರ ಪಾಲಿಗೆ ವರ? ಇನ್ಯಾರಿಗೆ ಶಾಪ? ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ. ಒಟ್ಟು 2,06,429 ಮತದಾರರ ಪೈಕಿ 1,45,458 ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಒಟ್ಟು ಮತದಾನ ಪ್ರಮಾಣ ಶೇ.70.46 ದಾಖಲಾಗಿದೆ. ವಿಶೇಷವಾಗಿ ಮಹಿಳಾ ಮತದಾರರು ಈ ಬಾರಿ ವೋಟಿಂಗ್‌ ಪ್ರಮಾಣದಲ್ಲಿ ಮುಂದಿದ್ದಾರೆ. ಪ್ರತಿ ಬಾರಿಯೂ ಮತಗಟ್ಟೆಯಿಂದ ದೂರವೇ ಉಳಿಯುತ್ತಿದ್ದ ಮಹಿಳಾ ಮತದಾರರು ಈ ಬಾರಿ ಅತಿ ಉತ್ಸಾಹದಿಂದಲೇ ಮತದಾನಕ್ಕೆ ಮುಂದಾಗಿದ್ದು ಬಿಜೆಪಿ-ಕಾಂಗ್ರೆಸ್‌ ಎರಡು ಪಕ್ಷಗಳಲ್ಲೂ ಕುತೂಹಲಕ್ಕೆ ಕಾರಣವಾಗಿದೆ. ಮಹಿಳಾ ಮತದಾರರ ಹಕ್ಕು ಚಲಾವಣೆ ಎರಡು ಪಾರ್ಟಿಗೂ ವರ ಎನ್ನುವ ಲೆಕ್ಕಾಚಾರ ಆಯಾ ಪಕ್ಷಗಳಲ್ಲಿ ಶುರುವಾಗಿದೆ.

ಹೀಗಿದೆ ಮತದಾನ ವಿವರ: ಒಟ್ಟು 1,01,340 ಮಹಿಳಾ ಮತದಾರರಲ್ಲಿ 73,293 ಜನ ಮಹಿಳೆಯರು ತಮ್ಮ ವೋಟ್‌ ಹಾಕಿದ್ದಾರೆ. 1,05,076 ಪುರುಷ ಮತದಾರರ ಪೈಕಿ 72,164 ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇತರೆ 13 ಮತದಾರರ ಪೈಕಿ ಒಬ್ಬರೇ ವೋಟ್‌ ಹಾಕಿದ್ದಾರೆ. ಈ ಪರಿಯ ಮತದಾನ ಪ್ರಮಾಣ ದಾಖಲಾಗಿದ್ದು, ಈ ಹಿಂದೆ 2008, 2013 ಮತ್ತು 2018ರ ಸಾರ್ವತ್ರಿಕ ಚುನಾವಣೆ ವೇಳೆ ಶೇ.60ರ ಗಡಿಯಲ್ಲಿ ಮಾತ್ರ ಮತದಾನ ಪ್ರಮಾಣ ದಾಖಲಾಗಿದೆ. ಆದರೀಗ ಉಪಚುನಾವಣೆಯಲ್ಲೇ ಹೆಚ್ಚು ಮತದಾನ ದಾಖಲಾಗಿದ್ದು ಗಮನಾರ್ಹ.

2018ರಲ್ಲಿ ಶೇ.68.98 ಮತದಾನವಾಗಿದ್ದರೆ, 2013ರಲ್ಲಿ ಶೇ.64.14 ಮತದಾನ ದಾಖಲಾಗಿದೆ. ಈ ಹಿಂದಿನ ಸಾರ್ವತ್ರಿಕ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಮತದಾನವೇ ಹೆಚ್ಚಾಗಿದೆ.

ಕೈ ಹಿಡಿದ ಸ್ಟಾಟರ್ಜಿ: ಮಸ್ಕಿ ಉಪಚುನಾವಣೆಯನ್ನು ತೀವ್ರ ಪ್ರತಿಷ್ಠೆಯಾಗಿ ಪರಿಗಣಿಸಿದ್ದ ಬಿಜೆಪಿ-ಕಾಂಗ್ರೆಸ್‌ ಎರಡು ಪಕ್ಷಗಳ ವರಿಷ್ಠರು ಹಲವು ರೀತಿಯ ದಾಳಗಳನ್ನು ಅಖಾಡದಲ್ಲಿ ಉರುಳಿಸಿದ್ದರು. ವಿಶೇಷವಾಗಿ ಜಾತಿ ಅಸ್ತ್ರ ಮತ್ತು ಮಹಿಳಾ ಮತದಾರರನ್ನೇ ಗುರಿಯಾಗಿಸಿಕೊಂಡು ನಡೆದ ರಾಜಕೀಯ ಸ್ಟಾಟರ್ಜಿ ಎರಡು ಪಕ್ಷಗಳ ಕೈ ಹಿಡಿದಿದೆ. ಒಂದು ಪಕ್ಷ ಸರಕಾರದ ಯೋಜನೆಗಳನ್ನು ಮುಂದಿಟ್ಟು ಮಹಿಳೆಯರನ್ನು ಆಕರ್ಷಿಸಿದರೆ, ಮತ್ತೂಂದು ಪಕ್ಷ ಅನುಕಂಪದ ಅಲೆಯನ್ನು ತೇಲಿ ಬಿಟ್ಟು ಮಹಿಳಾ ಮತದಾರರನ್ನು ಓಲೈಸಿಕೊಳ್ಳುವ ಕಸರತ್ತು ನಡೆಸಿತ್ತು. ಈ ಪ್ರಯತ್ನ ಎರಡು ಪಕ್ಷಕ್ಕೂ ಕೈ ಹಿಡಿದಿದೆ. 73 ಸಾವಿರದಷ್ಟು ಮಹಿಳಾ ಮತದಾರರು ಹಕ್ಕು ಚಲಾವಣೆ ಮೂಲಕ ಫಲಿತಾಂಶ ಕುತೂಹಲ ಮತ್ತಷ್ಟು ಹೆಚ್ಚುವಂತೆ ಮಾಡಿದ್ದಾರೆ.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.